AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdown Guidelines: ಲಾಕ್​ಡೌನ್ ಮಾರ್ಗಸೂಚಿಯಲ್ಲಿ ಪ್ರಮುಖ ಬದಲಾವಣೆ; ಪರಿಷ್ಕೃತ ನಿಯಮದ ಬಗ್ಗೆ ಇಲ್ಲಿದೆ ಮಾಹಿತಿ

ಅಸ್ಥಿ ವಿಸರ್ಜನೆಗೆ ತೆರಳಲು 4 ಜನರಿಗೆ ಅವಕಾಶ ನೀಡಲಾಗಿದೆ. ಈ ಕಾರ್ಯಕ್ಕೆ ಅಡ್ಡಿಪಡಿಸದಂತೆ ಬಿಬಿಎಂಪಿ ಆಯುಕ್ತರು, ಎಲ್ಲಾ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಎಸ್​ಪಿಗಳಿಗೆ ಸರ್ಕಾರ ಸೂಚನೆ ನೀಡಿದೆ.

Lockdown Guidelines: ಲಾಕ್​ಡೌನ್ ಮಾರ್ಗಸೂಚಿಯಲ್ಲಿ ಪ್ರಮುಖ ಬದಲಾವಣೆ; ಪರಿಷ್ಕೃತ ನಿಯಮದ ಬಗ್ಗೆ ಇಲ್ಲಿದೆ ಮಾಹಿತಿ
ಲಾಕ್​ಡೌನ್ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on:Aug 21, 2021 | 9:54 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿದೆ. ಏರುಗತಿಯಲ್ಲಿ ಸಾಗಿದ ಸೋಂಕು ರಾಜ್ಯದಲ್ಲಿ ಇನ್ನೂ ಕೂಡ ಪರಿಣಾಮಕಾರಿಯಾಗಿ ಇಳಿಕೆಯತ್ತ ಮುಖಮಾಡಿಲ್ಲ. ನಗರ ಪ್ರದೇಶದಲ್ಲಿ ಕೊರೊನಾ ವ್ಯಾಪಕವಾಗಿ ಇರುವ ಜೊತೆಗೆ ಇತ್ತೀಚೆಗೆ ಗ್ರಾಮೀಣ ಭಾಗದಲ್ಲಿ ಕೂಡ ಕೊವಿಡ್ ಪ್ರಮಾಣ ಹೆಚ್ಚಳವಾಗಿದೆ. ಸಾಲದು ಎಂಬಂತೆ ಸಾವಿನ ಸಂಖ್ಯೆಯೂ ಏರಿಕೆಯಾಗಿದೆ. ಸೋಂಕಿತರ ಸಂಖ್ಯೆ ಇಳಿಕೆಯತ್ತ ಬರುತ್ತಿದ್ದರೂ ಸಾವಿನ ಸಂಖ್ಯೆ ಕಡಿಮೆ ಆಗಿಲ್ಲ. ನಿನ್ನೆ ಕೊರೊನಾ ಎರಡನೇ ಅಲೆಯಲ್ಲೇ ಅತಿ ಹೆಚ್ಚು ಸೋಂಕಿತರು ಮೃತಪಟ್ಟಿದ್ದರು.

ಈ ಮಧ್ಯೆ ಲಾಕ್​ಡೌನ್ ಮಾರ್ಗಸೂಚಿಯಲ್ಲಿ ಪ್ರಮುಖ ಬದಲಾವಣೆಯೊಂದನ್ನು ಮಾಡಿದೆ. ರಾಜ್ಯ ಸರ್ಕಾರದ ಮಾರ್ಗಸೂಚಿಯಲ್ಲಿ ಪರಿಷ್ಕರಣೆ ಮಾಡಲಾಗಿದೆ. ಅದರಂತೆ, ಮೃತರ ಅಸ್ಥಿ ವಿಸರ್ಜನೆಗೆ ತೆರಳಲು ಅವಕಾಶ ನೀಡಲಾಗಿದೆ. ಅಸ್ಥಿ ವಿಸರ್ಜನೆಗೆ ತೆರಳಲು 4 ಜನರಿಗೆ ಅವಕಾಶ ನೀಡಿ ಆದೇಶ ಹೊರಡಿಸಲಾಗಿದೆ. ಧಾರ್ಮಿಕ ವಿಧಿವಿಧಾನದ ಅನುಸಾರ ಅಸ್ಥಿ ವಿಸರ್ಜನೆ ಮಾಡಬಹುದು ಎಂದು ತಿಳಿಸಿದ್ದಾರೆ.

ಆಯಾ ಧಾರ್ಮಿಕ ವಿಧಾನದಲ್ಲಿ ಅಸ್ಥಿ ವಿಸರ್ಜನೆಗೆ ಅವಕಾಶವಿದೆ. ಅಸ್ಥಿ ವಿಸರ್ಜನೆಗೆ ತೆರಳಲು 4 ಜನರಿಗೆ ಅವಕಾಶ ನೀಡಲಾಗಿದೆ. ಈ ಕಾರ್ಯಕ್ಕೆ ಅಡ್ಡಿಪಡಿಸದಂತೆ ಬಿಬಿಎಂಪಿ ಆಯುಕ್ತರು, ಎಲ್ಲಾ ಪೊಲೀಸ್ ಆಯುಕ್ತರು, ಜಿಲ್ಲಾಧಿಕಾರಿಗಳು ಹಾಗೂ ಎಸ್​ಪಿಗಳಿಗೆ ಸರ್ಕಾರ ಸೂಚನೆ ನೀಡಿದೆ.

ಖಾಸಗಿ ಆಸ್ಪತ್ರೆಗಳ ದರ್ಬಾರ್‌ಗೆ ರಾಜ್ಯ ಸರ್ಕಾರದ ಬ್ರೇಕ್ ಕೊರೊನಾ ಮೃತದೇಹ ನೀಡಲು ತೊಂದರೆ ಮಾಡಿದರೆ ಆಸ್ಪತ್ರೆಗೇ ಕುತ್ತು ಉಂಟಾಗಲಿದೆ. ಕೊರೊನಾದಿಂದ ಮೃತಪಟ್ಟವರ ಶವ ಹಸ್ತಾಂತರ ಸುಗಮವಾಗಿ ಆಗಬೇಕು. ಚಿಕಿತ್ಸೆಯ ಬಾಕಿ ಹಣ ಪಾವತಿಸುವಂತೆ ಒತ್ತಾಯ ಸಲ್ಲದು ಎಂದು ಆಸ್ಪತ್ರೆಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಖಡಕ್ ಆದೇಶ ಹೊರಡಿಸಿದೆ.

ಶವ ಹಸ್ತಾಂತರಕ್ಕೆ ಬಾಕಿ ಬಿಲ್ ಪಾವತಿಗೆ ಒತ್ತಡ ಹಿನ್ನೆಲೆಯಲ್ಲಿ, KPME ಕಾಯ್ದೆ ಅಡಿ ಬಾಕಿ ಬಿಲ್‌ಗೆ ಒತ್ತಾಯಿಸುವಂತಿಲ್ಲ. ಬಿಲ್ ಕಟ್ಟದಿದ್ದರೆ ಶವ ಹಸ್ತಾಂತರಕ್ಕೆ ನಿರಾಕರಿಸಬಾರದು. ಶವ ನೀಡಲು ಸಮಸ್ಯೆ ಮಾಡಿದರೆ ನೋಂದಣಿಯೇ ರದ್ದುಗೊಳಿಸುವ ಆದೇಶವನ್ನು ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ನೀಡಿದೆ.

ಈ ಬಗ್ಗೆ ನಿಗಾವಹಿಸುವಂತೆ ಆಯಾ ಡಿಸಿಗಳಿಗೆ ನಿರ್ದೇಶನ ನೀಡಲಾಗಿದ್ದು, ಶವ ಹಸ್ತಾಂತರಕ್ಕೆ ಸತಾಯಿಸಿದ ಪ್ರಕರಣಗಳಿದ್ದರೆ ತಿಳಿಸಿ ಎಂದು ಆಯಾ ಡಿಸಿಗಳು, ಜಿ.ಪಂ. ಸಿಇಒ, ಬಿಬಿಎಂಪಿಗೆ ನಿರ್ದೇಶನ ಮಾಡಲಾಗಿದೆ. ಈ ಬಗ್ಗೆ ವಾರಕ್ಕೆ ಒಂದು ಬಾರಿ ವರದಿ ಸಲ್ಲಿಸಲು ಕೂಡ ಸೂಚಿಸಲಾಗಿದೆ.

ಇದನ್ನೂ ಓದಿ: ಲಾಕ್​ಡೌನ್ ಪರಿಹಾರ ಧನ: ಮುಂದಿನ 10ರಿಂದ 12 ದಿನಗಳಲ್ಲಿ ಇನ್ನೊಂದು ಲಾಕ್​ಡೌನ್ ಪ್ಯಾಕೇಜ್ ಘೋಷಿಸಲು ಪ್ರಯತ್ನಿಸುವೆ: ಸಿಎಂ ಯಡಿಯೂರಪ್ಪ

ಕೊರೊನಾ ಸೋಂಕು ಕಾರಣ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಕರಣ ವಿಚಾರಣೆ: ಕರ್ನಾಟಕ ಹೈಕೋರ್ಟ್

Published On - 8:11 pm, Mon, 24 May 21

ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವೆಂದರೆ ಸೇನೆ; ಸಿಡಿಎಸ್ ಅನಿಲ್ ಚೌಹಾಣ್
ಸ್ವಜನಪಕ್ಷಪಾತವಿಲ್ಲದ ಏಕೈಕ ಸ್ಥಳವೆಂದರೆ ಸೇನೆ; ಸಿಡಿಎಸ್ ಅನಿಲ್ ಚೌಹಾಣ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು