Corona Vaccine: ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ಲಸಿಕೆ; ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಚಾಲನೆ

ಮುಖ್ಯವಾಗಿ ವ್ಯಾಕ್ಸಿನ್ ನೀಡಿದ ಬಗ್ಗೆ ಇವರಿಗೆ ಸರಕಾರದಿಂದ ಪ್ರಮಾಣ ಪತ್ರ ಕೊಡಲಾಗುವುದು. ಅದು ಎರಡನೇ ಡೋಸ್ ಪಡೆದಾಕ್ಷಣ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಹೇಳಿದರು.

Corona Vaccine: ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ಲಸಿಕೆ; ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಚಾಲನೆ
ಕೊರೊನಾ ಲಸಿಕೆ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: ganapathi bhat

Updated on:Aug 14, 2021 | 1:03 PM

ಬೆಂಗಳೂರು: ವಿದೇಶದಲ್ಲಿ ಉದ್ಯೋಗ ಮಾಡುವ ಮತ್ತು ವ್ಯಾಸಂಗ ಮಾಡುತ್ತಿರುವವರಿಗೆ ಸಿಹಿ ಸುದ್ದಿ ಇಲ್ಲಿದೆ. ಆದ್ಯತಾ ಗುಂಪಿನ ಕೋಟಾದಲ್ಲಿ ವಿದೇಶದಲ್ಲಿ ಉದ್ಯೋಗ, ವ್ಯಾಸಂಗ ಮಾಡುವವರಿಗೆ ಮಂಗಳವಾರದಿಂಲೇ ಲಸಿಕೆ ನೀಡಲಾಗುವುದು ಎಂದು ರಾಜ್ಯ ಕೊವಿಡ್ ಕಾರ್ಯಪಡೆ ಅಧ್ಯಕ್ಷರಾದ, ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥ್ ನಾರಾಯಣ ತಿಳಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಈ ಬಗ್ಗೆ ಮಾಹಿತಿ ನೀಡಿದ ಅವರು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಆಡಳಿತ ವಿಭಾಗದಲ್ಲಿ ಮಂಗಳವಾರ 3 ಗಂಟೆಗೆ ಈ ವರ್ಗದವರಿಗೆ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗುವುದು. ಅವಶ್ಯಕತೆ ಇದ್ದವರು ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೋರಿದರು.

ಸದ್ಯದ ಸಂದರ್ಭದಲ್ಲಿ ವಿದೇಶಕ್ಕೆ ಹೋಗಬೇಕಾದರೆ ಲಸಿಕೆ ಪಡೆಯಲೇಬೇಕು ಹಾಗೂ ಆ ಕುರಿತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಹೊಂದಿರಲೇಬೇಕು. ಹೀಗಾಗಿ ವಿದೇಶದಲ್ಲಿ ಉದ್ಯೋಗ ಹಾಗೂ ವಿದ್ಯಾಭ್ಯಾಸದಲ್ಲಿ ನಿರತರಾಗಿರುವವರಿಂದ ಲಸಿಕೆ ಬೇಡಿಕೆ ಇತ್ತು. ಈಗ ಸರಕಾರ ಅವರ ಬೇಡಿಕೆಯನ್ನು ಪರಿಗಣಿಸಿದ್ದು, ಎಲ್ಲರಿಗೂ ಕೋವಿಶೀಲ್ಡ್ ಲಸಿಕೆ ಕೊಡಲಾಗುವುದು ಎಂದು ತಿಳಿಸಿದರು.

ಲಸಿಕೆ ಪಡೆಯಲು ಇಚ್ಛಿಸುವವರು ತಮ್ಮ ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಹಾಗೂ ವಿದೇಶದಲ್ಲಿನ ತಮ್ಮ ಕೆಲಸ ಅಥವಾ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದ ಪೂರಕ ದಾಖಲೆಯನ್ನು ಹಾಜರುಪಡಿಸುವುದು ಕಡ್ಡಾಯ. ಅಲ್ಲದೆ, ಸದ್ಯಕ್ಕೆ ಕೋವಿಶೀಲ್ಡ್ ಮೊದಲ ಡೋಸ್ ಪಡೆದವರ ಎರಡನೇ ಡೋಸ್ ಅಂತರವನ್ನು ಇವರ ಅನುಕೂಲಕ್ಕಾಗಿ 12 ವಾರಗಳಿಂದ ಒಂದು ತಿಂಗಳಕ್ಕೆ ಕುಗ್ಗಿಸಲಾಗಿದೆ. ಇದು ಇವರಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಡಾ. ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದರು.

ಮುಖ್ಯವಾಗಿ ವ್ಯಾಕ್ಸಿನ್ ನೀಡಿದ ಬಗ್ಗೆ ಇವರಿಗೆ ಸರಕಾರದಿಂದ ಪ್ರಮಾಣ ಪತ್ರ ಕೊಡಲಾಗುವುದು. ಅದು ಎರಡನೇ ಡೋಸ್ ಪಡೆದಾಕ್ಷಣ ನೀಡಲಾಗುತ್ತದೆ ಎಂದು ಉಪಮುಖ್ಯಮಂತ್ರಿ ಹೇಳಿದರು.

ಇದನ್ನೂ ಓದಿ: ಕೊರೊನಾ ಲಸಿಕೆ ಖರೀದಿಗಾಗಿ ಜಾಗತಿಕ ಟೆಂಡರ್ ಕೈಬಿಟ್ಟ ಕರ್ನಾಟಕ ಸರ್ಕಾರ: ಮುಂದೇನು?

ಡಿಜಿಟಲ್ ಡಿವೈಡ್ ಇರುವ ದೇಶದಲ್ಲಿ ಲಸಿಕೆ ಪಡೆಯಲು ಕೊವಿನ್ ಪೋರ್ಟಲ್​ನಲ್ಲಿ ಕಡ್ಢಾಯ ನೋಂದಣಿ ಹೇಗೆ ಸಾಧ್ಯ? ಸುಪ್ರೀಂಕೋರ್ಟ್

Published On - 6:56 pm, Mon, 31 May 21

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು