ಬೆಂಗಳೂರಲ್ಲಿ ಕೊರೊನಾಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗ್ತಿದೆ, ದಿನಕ್ಕೆ 20-22 ಶವ ಬರ್ತಿದೆ ಎಂದ ಚಿತಾಗಾರ ಸಿಬ್ಬಂದಿ

ಕೊರೊನಾ ಎರಡನೇ ಅಲೆ ರಣಭೀಕರ ರೂಪ ತಾಳಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಜೋರು ಮಾಡಿದೆ. ಇದರ ಪರಿಣಾಮ ಸಾವಿನ ಸಂಖ್ಯೆ ದಿಪ್ಪಟ್ಟಾಗಿದೆ. ಈ ಮೊದಲು 4ರಿಂದ 5 ಶವಗಳು ಬರ್ತಿತ್ತು. ಆದ್ರೆ ಕಳೆದ ಒಂದು ವಾರದಿಂದ ದಿನಕ್ಕೆ 20-22 ಶವಗಳು ಬರ್ತಿವೆ ಎಂದು ಟಿವಿ9ಗೆ ಸುಮನಹಳ್ಳಿ ಚಿತಾಗಾರದ ಸಿಬ್ಬಂದಿ ರವಿ ತಿಳಿಸಿದ್ದಾರೆ.

ಬೆಂಗಳೂರಲ್ಲಿ ಕೊರೊನಾಗೆ ಬಲಿಯಾಗುವವರ ಸಂಖ್ಯೆ ಹೆಚ್ಚಾಗ್ತಿದೆ, ದಿನಕ್ಕೆ 20-22 ಶವ ಬರ್ತಿದೆ ಎಂದ ಚಿತಾಗಾರ ಸಿಬ್ಬಂದಿ
ಸಂಗ್ರಹ ಚಿತ್ರ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Apr 16, 2021 | 9:36 AM

ಬೆಂಗಳೂರು: ಕಿಲ್ಲರ್ ಕೊರೊನಾ ರಣಕೇಕೆ ಹಾಕುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯ ಜೊತೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಪ್ರತಿದಿನ 4-5 ಕೊರೊನಾ ಸೋಂಕಿತರ ಶವ ಬರ್ತಿತ್ತು. ಆದ್ರೆ ಕಳೆದ ಒಂದು ವಾರದಿಂದ ಶವಗಳ ಸಂಖ್ಯೆ ಹೆಚ್ಚಾಗಿದೆ. ದಿನಕ್ಕೆ 20-22 ಕೊವಿಡ್‌ನಿಂದ ಮೃತಪಟ್ಟವರ ಶವಗಳು ಬರ್ತಿವೆ ಎಂಬ ಭಯಾನಕ ಸುದ್ದಿ ಹೊರ ಬಿದ್ದಿದೆ.

ಕೊರೊನಾ ಎರಡನೇ ಅಲೆ ರಣಭೀಕರ ರೂಪ ತಾಳಿದೆ. ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಜೋರು ಮಾಡಿದೆ. ಇದರ ಪರಿಣಾಮ ಸಾವಿನ ಸಂಖ್ಯೆ ದುಪ್ಪಟ್ಟಾಗಿದೆ. ಅದರಲ್ಲೂ ರಾಜ್ಯದ ಒಟ್ಟು ಕೊರೊನಾ ಕೇಸ್​ನಲ್ಲಿ, ಸಾವಿನಲ್ಲಿ ಬೆಂಗಳೂರಿನದ್ದೇ ಸಿಂಹಪಾಲು. ಈ ಮೊದಲು 4ರಿಂದ 5 ಶವಗಳು ಬರ್ತಿತ್ತು. ಆದ್ರೆ ಕಳೆದ ಒಂದು ವಾರದಿಂದ ದಿನಕ್ಕೆ 20-22 ಶವಗಳು ಬರ್ತಿವೆ ಎಂದು ಟಿವಿ9ಗೆ ಸುಮನಹಳ್ಳಿ ಚಿತಾಗಾರದ ಸಿಬ್ಬಂದಿ ರವಿ ತಿಳಿಸಿದ್ದಾರೆ. ಚಿತಾಗಾರದ ಮುಂದೆ ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ನಿಲ್ಲಬೇಕಾದಂತ ಪರಿಸ್ಥಿತಿ ನಿರ್ಮಾಣವಾಗಿದೆ. ಎರಡನೇ ಅಲೆಯ ಕೊರೊನಾ ಜೀವ ಹಿಂಡುತ್ತಿದೆ.

ಮೃತಪಟ್ಟವರ ಅಂತ್ಯಸಂಸ್ಕಾರ ಮಾಡಲು ಯಲಹಂಕದ ಮೇಡಿ ಅಗ್ರಹಾರದಲ್ಲಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗಿದೆ. ಸುಮನಹಳ್ಳಿ ಚಿತಾಗಾರದಲ್ಲೂ ಅಂತ್ಯಕ್ರಿಯೆಗೆ ಕಾಯುವ ಸ್ಥಿತಿ ಎದುರಾಗಿದೆ. ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿರುವ ಚಿತಾಗಾರದ ಸಿಬ್ಬಂದಿ ರವಿ ಬೆಂಗಳೂರಿನಲ್ಲಿ 10 ದಿನದಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ. ಇದರ ಜೊತೆಗೆ ಚಿತಾಗಾರಗಳಲ್ಲಿ ನಮಗೆ ಯಾವುದೇ ಸುರಕ್ಷತೆ ಇಲ್ಲ ಎಂದು ಅಳಲು ತೋಡಿಕೊಂಡಿದ್ದರು.

ಇನ್ನು ಬೆಳಗ್ಗೆ 4 ಗಂಟೆಗೆ ಸುಮನಹಳ್ಳಿ ಚಿತಾಗಾರಕ್ಕೆ ಕೊವಿಡ್ ಸೋಂಕಿತನ ಶವವನ್ನು ಆ್ಯಂಬುಲೆನ್ಸ್ ಸಿಬ್ಬಂದಿ ತಂದಿದ್ದರು. ಮೃತ ವ್ಯಕ್ತಿಯ ಸಂಬಂಧಿಕರು ಯಾರೂ ಬಾರದ ಕಾರಣ ಅಂತ್ಯಕ್ರಿಯೆ ಆಗದೆ ಮೃತದೇಹ ಇರಿಸಲಾಗಿದೆ. ಕುಟುಂಬಸ್ಥರು ಬರುವುದನ್ನು ಕಾದು ‌ಬೆಳಗ್ಗೆ 9 ಗಂಟೆಯ ಬಳಿಕ ಮೃತದೇಹದ ಅಂತ್ಯಕ್ರಿಯೆ ನಡೆಸಲು ಚಿಂತಿಸಲಾಗಿದೆ.

ಇದನ್ನೂ ಓದಿ: ಕೊವಿಡ್​ನಿಂದ ಮೃತಪಟ್ಟವರನ್ನು ಚಿತಾಗಾರಕ್ಕೆ ಸಾಗಿಸಲು ಯಾವುದೇ ಶುಲ್ಕ ಇಲ್ಲ: ಬಿಬಿಎಂಪಿ ಸ್ಪಷ್ಟನೆ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ