Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕ್ಸಿಜನ್ ಸರಿಯಾಗಿ ಪೂರೈಕೆಯಾಗದೆ ದಾವಣಗೆರೆಯಲ್ಲಿ ಸೋಂಕಿತೆ ಸಾವು

ಸಾಯುವುದಕ್ಕೂ ಮುನ್ನ ಅಕ್ಸಿಜನ್ ಬರುತ್ತಿಲ್ಲ ಎಂದು ಸೋಂಕಿತ ಮಹಿಳೆ ವಿಡಿಯೋ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಗದ ಕಾರಣ ಮಹಿಳೆ ಮೃತಪಟ್ಟಿದ್ದಾರೆ ಅಂತ ಮೃತ ಮಹಿಳೆ ಸಂಬಂಧಿಕರು ಹರಿಹರ ತಾಲೂಕು ಆಸ್ಪತ್ರೆ ವಿರುದ್ಧ ಆರೋಪಿಸುತ್ತಿದ್ದಾರೆ.

ಆಕ್ಸಿಜನ್ ಸರಿಯಾಗಿ ಪೂರೈಕೆಯಾಗದೆ ದಾವಣಗೆರೆಯಲ್ಲಿ ಸೋಂಕಿತೆ ಸಾವು
ಆಕ್ಸಿಜನ್ ಸಿಗದೆ ಮೃತಪಟ್ಟ ಮಹಿಳೆ
Follow us
sandhya thejappa
|

Updated on:May 26, 2021 | 10:46 AM

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಆಕ್ಸಿಜನ್ ಸಮಸ್ಯೆಯೂ ದೊಡ್ಡ ಮಟ್ಟದಾಗಿ ಕಾಡುತ್ತಿದೆ. ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದೆ ಈಗಾಗಲೇ ಹಲವರು ಮೃತಪಟ್ಟಿದ್ದಾರೆ. ಹರಿಹರ ತಾಲೂಲು ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತೆ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಕ್ಸಿಜನ್ ಸರಿಯಾಗಿ ಪೂರೈಕೆಯಾಗದೆ ಸೋಂಕಿತೆ ಸಾವನ್ನಪ್ಪಿದ್ದಾರೆ. ಸಾಯುವುದಕ್ಕೂ ಮುನ್ನ ಸೋಂಕಿತೆ ವಿಡಿಯೋ ಮಾಡಿದ್ದಾರೆ.

ಸಾಯುವುದಕ್ಕೂ ಮುನ್ನ ಅಕ್ಸಿಜನ್ ಬರುತ್ತಿಲ್ಲ ಎಂದು ಸೋಂಕಿತ ಮಹಿಳೆ ವಿಡಿಯೋ ಮಾಡಿದ್ದಾರೆ. ಸರಿಯಾದ ಸಮಯಕ್ಕೆ ಆಕ್ಸಿಜನ್ ಸಿಗದ ಕಾರಣ ಮಹಿಳೆ ಮೃತಪಟ್ಟಿದ್ದಾರೆ ಅಂತ ಮೃತ ಮಹಿಳೆ ಸಂಬಂಧಿಕರು ಹರಿಹರ ತಾಲೂಕು ಆಸ್ಪತ್ರೆ ವಿರುದ್ಧ ಆರೋಪಿಸುತ್ತಿದ್ದಾರೆ. ಹನಗವಾಡಿ ಗ್ರಾಮದ ಜಯಮ್ಮ ಎನ್ನುವರಿಗೆ ಕಳೆದ ಐದು ದಿನಗಳ ಹಿಂದೆ ಸೋಂಕು ಕಾಣಿಸಿಕೊಂಡಿತ್ತು. ಉಸಿರಾಟದ ತೊಂದರೆಯಿಂದ ಹರಿಹರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಅಕ್ಸಿಜನ್ ಸರಿಯಾಗಿ ಸಪ್ಲೆ ಆಗದೆ ಸೋಂಕಿತೆ ಪರದಾಡಿದ್ದಾರೆ. ಈ ವೇಳೆ ವಿಡಿಯೋ ಮಾಡಲಾಗಿದೆ. ಮಾಡಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಸ್ಪತ್ರೆಯ ನಿರ್ಲಕ್ಷ್ಯವೇ ಜಯಮ್ಮನ ಸಾವಿಗೆ ಕಾರಣ ಎಂದು ಸಂಬಂಧಿಕರು ಕಿಡಿಕಾರಿದ್ದಾರೆ.

2 ಗ್ರಾಮಗಳಲ್ಲಿ ಸ್ವಯಂ ನಿರ್ಬಂಧ ಕೊರೊನಾ ಹೆಚ್ಚಾದ ಹಿನ್ನೆಲೆ 2 ಗ್ರಾಮಗಳು ಸ್ವಯಂ ನಿರ್ಬಂಧಕ್ಕೆ ಮುಂದಾಗಿವೆ. ಜಿಲ್ಲೆಯ ಹರಿಹರ ತಾಲೂಕಿನ ಜಿಗಳಿ ಮತ್ತು ಬೇವಿನಹಳ್ಳಿ ಸ್ವಯಂ ನಿರ್ಬಂಧ ಮುಂದಾದ ಗ್ರಾಮಗಳು. ಪರಸ್ಥಳದಿಂದ ಯಾರು ಗ್ರಾಮಕ್ಕೆ ಬರುವಂತಿಲ್ಲ. ಗ್ರಾಮಸ್ಥರು ಅನಗತ್ಯವಾಗಿ ಹೊರಗೆ ಹೋಗುವಂತಿಲ್ಲ. ಕಳೆದ ಒಂದು ವಾರದಿಂದ ಹರಿಹರ ತಾಲೂಕಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾದ ಕಾರಣ ಈ ನಿರ್ಧಾರಕ್ಕೆ ಗ್ರಾಮಸ್ಥರು ಬಂದಿದ್ದಾರೆ. ಗ್ರಾಮಕ್ಕೆ ಪ್ರವೇಶ ಮಾಡುವ ರಸ್ತೆಗೆ ಮುಳ್ಳಿನ ಬೇಲಿಯನ್ನು ಹಾಕಿದ್ದು, ಆಟೋಗೆ ಧ್ವನಿ ವರ್ಧಕ ಕಟ್ಟಿಕೊಂಡು ಯುವಕರು ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ

ಚಿತ್ರದುರ್ಗದ ಜಮೀನಿನಲ್ಲಿ ಉರಗ ಪ್ರತ್ಯಕ್ಷ; ನಾಗರಹಾವಿನ 25 ಮೊಟ್ಟೆ ಮತ್ತು 21 ಮರಿಯ ಸಂರಕ್ಷಣೆ

ಹುಟ್ಟುಹಬ್ಬಕ್ಕೆ ಬಟ್ಟೆ ಕೊಡಿಸಿಲ್ಲವೆಂದು ವಿವಾಹಿತೆ ಆತ್ಮಹತ್ಯೆ.. ಗಂಡನನ್ನು ಅರೆಸ್ಟ್ ಮಾಡಿದ ಪೊಲೀಸರು

(Corona infected died from not inadequate supply of oxygen at Davanagere)

Published On - 10:43 am, Wed, 26 May 21

VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ