AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿಂದು ಹೊಸದಾಗಿ 24 ಜನರಿಗೆ ಕೊರೊನಾ ಸೋಂಕು; ಇಲ್ಲಿದೆ ವಿವರ

ರಾಜ್ಯದಲ್ಲಿ ಇಂದು ಹೊಸದಾಗಿ 24 ಜನರಿಗೆ ಕೊರೊನಾ (Corona) ಸೋಂಕು ಕಂಡುಬಂದಿದೆ. ಅದರಲ್ಲಿ ಬೆಂಗಳೂರು ನಗರದಲ್ಲೇ ಹೊಸದಾಗಿ 23 ಜನರಲ್ಲಿ ಸೋಂಕು ಕಾಣಿಸಿಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಕೊರಾನಾ ಸೋಂಕು ಹರಡಿದೆ. ಇನ್ನು ರಾಜ್ಯದಲ್ಲಿ ಇಂದು 11 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ.

ಕರ್ನಾಟಕದಲ್ಲಿಂದು ಹೊಸದಾಗಿ 24 ಜನರಿಗೆ ಕೊರೊನಾ ಸೋಂಕು; ಇಲ್ಲಿದೆ ವಿವರ
ಪ್ರಾತಿನಿಧಿಕ ಚಿತ್ರ
Vinayak Hanamant Gurav
| Edited By: |

Updated on: Dec 21, 2023 | 7:09 PM

Share

ಬೆಂಗಳೂರು, ಡಿ.21: ರಾಜ್ಯದಲ್ಲಿ ಇಂದು ಹೊಸದಾಗಿ 24 ಜನರಿಗೆ ಕೊರೊನಾ (Corona) ಸೋಂಕು ಕಂಡುಬಂದಿದೆ. ಅದರಲ್ಲಿ ಬೆಂಗಳೂರು ನಗರದಲ್ಲೇ ಹೊಸದಾಗಿ 23 ಜನರಲ್ಲಿ ಸೋಂಕು ಕಾಣಿಸಿಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಕೊರಾನಾ ಸೋಂಕು ಹರಡಿದೆ. ಇನ್ನು ರಾಜ್ಯದಲ್ಲಿ ಇಂದು 11 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್‌ಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದ್ದು, 85 ಜನರು ಹೋಂ ಐಸೋಲೇಷನ್‌ನಲ್ಲಿದ್ದಾರೆ. ಇನ್ನುಳಿದಂತೆ 20 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಶೇಕಡಾ 1.6 ರಷ್ಟು ಕೊರೊನಾ ಪಾಸಿಟಿವಿಟಿ ದರ ಏರಿಕೆಯಾಗಿದೆ.

ಜನವರಿ ಮೊದಲ ವಾರದಲ್ಲಿ ಹೆಚ್ಚಾಗಲಿದೆ ಕೊರೊನಾ- ಸಿಎಂಗೆ ತಜ್ಞರ ವರದಿ

ಕೇರಳದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದ್ದಂತೆ ರಾಜ್ಯದಲ್ಲೂ ಕೋವಿಡ್ ಆತಂಕ ಶುರುವಾಗಿದೆ. ವರ್ಷದ ಮೊದಲ ವಾರದ ಬಳಿಕ ರಾಜ್ಯದಲ್ಲಿ ಕೊರೊನಾ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಂದು ನಡೆದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ IISC ತಜ್ಞರು ಹಾಗೂ TAC ಎಕ್ಸ್​ಪರ್ಟ್​​ ತಂಡವು ವರದಿ ನೀಡಿದೆ. ಜನವರಿ ಮೊದಲ ವಾರದಲ್ಲಿ ಅತಿ ಹೆಚ್ಚು ಕೇಸ್ ದಾಖಲಾಗುವ ಸಾಧ್ಯತೆಯಿದೆ. ಹಾಗೆಯೇ ಫೆಬ್ರವರಿ ಕೊನೆಯ ವಾರ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ:ಕೊರೊನಾ ಆರ್ಭಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆರ್​ಟಿಪಿಸಿಆರ್​​ ಟಸ್ಟ್​​ಗೆ ವಿಟಿಎಮ್ ಕೊರತೆ

ಇನ್ನು ನಿನ್ನೆ ಈ ಕುರಿತು ಮಾತನಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ‘ಪ್ರತಿದಿನ ಒಂದೂವರೆ ಸಾವಿರಕ್ಕೂ ಹೆಚ್ಚು ಟೆಸ್ಟಿಂಗ್​ಗೆ ಸೂಚಿಸಲಾಗಿದ್ದು, ವಲಯವಾರು ಅಧಿಕಾರಿಗಳು ಇತ್ತ ಗಮನಹರಿಸಬೇಕು. ರಾಜ್ಯದಲ್ಲಿ ಇರುವಂತೆ ರಾಜಧಾನಿಯಲ್ಲೂ ಮುಂಜಾಗೃತೆ ತೆಗೆದುಕೊಳ್ಳಬೇಕು. ಬೆಂಗಳೂರು ವ್ಯಾಪ್ತಿಯಲ್ಲಿ ಏನೆಲ್ಲಾ ಸಿದ್ಧತೆ ಆಗಿದೆ ಎಂದು ಮಾಹಿತಿ ಪಡೆದಿದ್ದೇನೆ. ಬೆಂಗಳೂರು ಹೆಚ್ಚು ಜನವಿರುವ ಪ್ರದೇಶವಾಗಿದ್ದು, ಏನೆಲ್ಲಾ ಕ್ರಮ ತೆಗೆದುಕೊಂಡಿದೆ ಪರಿಶೀಲಿಸುತ್ತಿದ್ದೇವೆ ಎಂದು ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್