ಬೆಂಗಳೂರು, ಡಿ.21: ರಾಜ್ಯದಲ್ಲಿ ಇಂದು ಹೊಸದಾಗಿ 24 ಜನರಿಗೆ ಕೊರೊನಾ (Corona) ಸೋಂಕು ಕಂಡುಬಂದಿದೆ. ಅದರಲ್ಲಿ ಬೆಂಗಳೂರು ನಗರದಲ್ಲೇ ಹೊಸದಾಗಿ 23 ಜನರಲ್ಲಿ ಸೋಂಕು ಕಾಣಿಸಿಕೊಂಡರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರಿಗೆ ಕೊರಾನಾ ಸೋಂಕು ಹರಡಿದೆ. ಇನ್ನು ರಾಜ್ಯದಲ್ಲಿ ಇಂದು 11 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್‌ಗಳ ಸಂಖ್ಯೆ 105ಕ್ಕೆ ಏರಿಕೆಯಾಗಿದ್ದು, 85 ಜನರು ಹೋಂ ಐಸೋಲೇಷನ್‌ನಲ್ಲಿದ್ದಾರೆ. ಇನ್ನುಳಿದಂತೆ 20 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನಲೆ ರಾಜ್ಯದಲ್ಲಿ ಶೇಕಡಾ 1.6 ರಷ್ಟು ಕೊರೊನಾ ಪಾಸಿಟಿವಿಟಿ ದರ ಏರಿಕೆಯಾಗಿದೆ.
ಕೇರಳದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿದ್ದಂತೆ ರಾಜ್ಯದಲ್ಲೂ ಕೋವಿಡ್ ಆತಂಕ ಶುರುವಾಗಿದೆ. ವರ್ಷದ ಮೊದಲ ವಾರದ ಬಳಿಕ ರಾಜ್ಯದಲ್ಲಿ ಕೊರೊನಾ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಂದು ನಡೆದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಭೆಯಲ್ಲಿ IISC ತಜ್ಞರು ಹಾಗೂ TAC ಎಕ್ಸ್ಪರ್ಟ್ ತಂಡವು ವರದಿ ನೀಡಿದೆ. ಜನವರಿ ಮೊದಲ ವಾರದಲ್ಲಿ ಅತಿ ಹೆಚ್ಚು ಕೇಸ್ ದಾಖಲಾಗುವ ಸಾಧ್ಯತೆಯಿದೆ. ಹಾಗೆಯೇ ಫೆಬ್ರವರಿ ಕೊನೆಯ ವಾರ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಇದನ್ನೂ ಓದಿ:ಕೊರೊನಾ ಆರ್ಭಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆರ್ಟಿಪಿಸಿಆರ್ ಟಸ್ಟ್ಗೆ ವಿಟಿಎಮ್ ಕೊರತೆ
ಇನ್ನು ನಿನ್ನೆ ಈ ಕುರಿತು ಮಾತನಾಡಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ‘ಪ್ರತಿದಿನ ಒಂದೂವರೆ ಸಾವಿರಕ್ಕೂ ಹೆಚ್ಚು ಟೆಸ್ಟಿಂಗ್ಗೆ ಸೂಚಿಸಲಾಗಿದ್ದು, ವಲಯವಾರು ಅಧಿಕಾರಿಗಳು ಇತ್ತ ಗಮನಹರಿಸಬೇಕು. ರಾಜ್ಯದಲ್ಲಿ ಇರುವಂತೆ ರಾಜಧಾನಿಯಲ್ಲೂ ಮುಂಜಾಗೃತೆ ತೆಗೆದುಕೊಳ್ಳಬೇಕು. ಬೆಂಗಳೂರು ವ್ಯಾಪ್ತಿಯಲ್ಲಿ ಏನೆಲ್ಲಾ ಸಿದ್ಧತೆ ಆಗಿದೆ ಎಂದು ಮಾಹಿತಿ ಪಡೆದಿದ್ದೇನೆ. ಬೆಂಗಳೂರು ಹೆಚ್ಚು ಜನವಿರುವ ಪ್ರದೇಶವಾಗಿದ್ದು, ಏನೆಲ್ಲಾ ಕ್ರಮ ತೆಗೆದುಕೊಂಡಿದೆ ಪರಿಶೀಲಿಸುತ್ತಿದ್ದೇವೆ ಎಂದು ತಿಳಿಸಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ