ಮಂಗಳೂರಿನಲ್ಲಿ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್

ಮಂಗಳೂರಿನ ಬಳ್ಳಾಲ್ ಭಾಗ್ ಬಳಿ ಇರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಪತ್ತೆಯಾಗಿದೆ.

ಮಂಗಳೂರಿನಲ್ಲಿ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್
ಸಾಂದರ್ಭಿಕ ಚಿತ್ರ
Follow us
shruti hegde
|

Updated on: Mar 18, 2021 | 11:44 AM

ಮಂಗಳೂರು: ಕೊರೊನಾ ಪಾಸಿಟಿವ್​ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಬಳ್ಳಾಲ್ ಭಾಗ್ ಬಳಿ ಇರುವ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್​ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಮತ್ತು ಹಾಸ್ಟೆಲ್​ಅನ್ನು ಕಂಟೈನ್ ಮೆಂಟ್ ಝೋನ್ ಆಗಿ ಘೋಷಣೆ ಮಾಡಲಾಗಿದೆ.

ಇತ್ತೀಚೆಗೆ ಕೊವಿಡ್‌ ಸೋಂಕಿನ ಹರಡುವಿಕೆ ಪ್ರಮಾಣ ಕಡಿಮೆಯಾಗಿತ್ತು. ಈ ಮೊದಲು ಸೀಲ್‌ಡೌನ್‌, ಲಾಕ್‌ಡೌನ್, ನೈಟ್‌ ಕರ್ಫ್ಯೂ, ಬಂದ್ ಹೇಳುವ ಮಾತನ್ನು ಕೇಳಿ ಕೇಳಿ ಒಂದು ವರ್ಷದಿಂದ ಜನ ಸುಸ್ತಾಗಿದ್ದರು. ಆದರೆ ಈಗ ಮತ್ತೆ ಗಡಿ ಜಿಲ್ಲೆಗಳಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಹಲವು ತಿಂಗಳುಗಳ ಬಳಿಕ ಮತ್ತೆ ಮಂಗಳೂರಿನಲ್ಲಿ ಸೀಲ್‌ಡೌನ್‌ ಮಾದರಿಯಲ್ಲಿ ಬಂದ್ ಮಾಡಲಾಗಿದೆ.

ಕರಾವಳಿಯಲ್ಲಿ ಕೇರಳ ಕೊರೊನಾದ ಆತಂಕ ಕೊರೊನಾ ಮಹಾಮಾರಿಯಿಂದಾಗಿ ಯೆನೆಪೋಯ ವಿವಿಯ 9 ಶಿಕ್ಷಣ ಸಂಸ್ಥೆಗಳಿಗೆ ಬೀಗ ಹಾಕಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕೂಡ ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆ. ಮಂಗಳೂರಿನ ತಲಪಾಡಿ ಸೇರಿದಂತೆ 24ಕ್ಕೂ ಹೆಚ್ಚು ಕೇರಳ ಸಂಪರ್ಕ ಬೆಸೆಯುವ ಗಡಿಗಳಿವೆ. ಇನ್ನು, ಕಾಲೇಜುಗಳನ್ನು ಆರಂಭ ಮಾಡಿದ ಮೇಲೆ ಈ ಕೊರೊನಾ ಹಾವಳಿ ಮತ್ತೆ ಹೆಚ್ಚಾಗುತ್ತಿದೆ.

ಮಂಗಳೂರು ಶಿಕ್ಷಣಕ್ಕೆ ಹೇಳು ಮಾಡಿಸಿದ ಜಿಲ್ಲೆ. ಆದ್ದರಿಂದ ಕೇರಳದಿಂದ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇಲ್ಲಿಗೆ ಬಂದು ಶಿಕ್ಷಣ ಪಡೆಯುತ್ತಾರೆ. ಅದರಿಂದ ರಾಜ್ಯ ಸರ್ಕಾರ ಕಾಲೇಜುಗಳಿಗೆ ಗೈಡ್‌ಲೈನ್ಸ್‌ ನಿರ್ಮಿಸಿ ಅದರ ಅಡಿಯಲ್ಲಿ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಅವಕಾಶ ನೀಡಿತ್ತು. ಆದರೆ ಈಗ ಮಂಗಳೂರಿನಲ್ಲಿ ಶಿಕ್ಷಣ ಸಂಸ್ಥೆಗಳು ಮತ್ತೆ ಬಾಗಿಲು ಹಾಕುವ ಪರಿಸ್ಥಿತಿ ನಿರ್ಮಾಣ ಆಗಿದೆ. ಯೆನೆಪೋಯ ವಿವಿ 9ಶಿಕ್ಷಣ ಸಂಸ್ಥೆಗಳನ್ನ ಬಂದ್ ಮಾಡಲಾಗಿದೆ. ಇದಕ್ಕೆ ಕಾರಣ, ಎರಡರಿಂದ ಮೂರು ದಿನದಲ್ಲಿ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌ ಬಂದಿದೆ.

ಇನ್ನು, ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿ ಸೇರಿ ವಿವಿಧ ಅಧಿಕಾರಿಗಳ ತಂಡ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ದೂರು ಬಂದಿರೋ ಶಿಕ್ಷಣ ಸಂಸ್ಥೆಗಳ ಮೇಲೆ ತನಿಖೆ ನಡೆಸಲಾಗುತ್ತಿದೆ. ಕೊವಿಡ್​ಗೆ ಸಂಬಂಧಿಸಿ ನಿರ್ಲಕ್ಷ್ಯ ತೋರಿಸವರಿಗೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವುದಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ಸಮುದ್ರದ ಮಧ್ಯದಲ್ಲಿ ಮಂಗಳೂರು ಯುವಕ: ಕೊರೊನಾ ಭೀತಿ, ಮದುವೆ ಮುಂದೂಡಿಕೆ!

ಇದನ್ನೂ ಓದಿ: ಕಿಲ್ಲರ್ ಕೊರೊನಾ ಅಟ್ಟಹಾಸಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಬಲಿ!

ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ