ಬೆಂಗಳೂರಿನ ಪಬ್‌ನಲ್ಲಿ 16 ಸಿಬ್ಬಂದಿಗೆ ಕೊರೊನಾ ಪಾಸಿಟಿವ್; ದೇಶದ ವಿವಿಧೆಡೆ ಸೋಂಕು ಗಣನೀಯ ಹೆಚ್ಚಳ
ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದ ನೈಟ್ಕರ್ಫ್ಯೂ ಜಾರಿಯಾಗಿದೆ. 8ರಿಂದ ಬೆಳಗ್ಗೆ 7 ಗಂಟೆವರೆಗೆ ನೈಟ್ಕರ್ಫ್ಯೂ ಇರಲಿದೆ. ಕೊರೊನಾ ತಡೆಗೆ ಮಹಾರಾಷ್ಟ್ರ ರಾಜ್ಯ ಸರ್ಕಾರ ನೈಟ್ಕರ್ಫ್ಯೂ ಜಾರಿಗೊಳಿಸಿದೆ.
ಬೆಂಗಳೂರು: ನಗರದ ಪಬ್‌ನಲ್ಲಿ 16 ಜನರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ನ್ಯೂ BEL ರಸ್ತೆಯಲ್ಲಿನ ಪಬ್ನ 16 ಸಿಬ್ಬಂದಿಗೆ ಕೊರೊನಾ ಕಾಣಿಸಿಕೊಂಡಿದೆ. ಪಬ್ನ 86 ಜನರಿಗೆ ಕೊವಿಡ್-19 ಟೆಸ್ಟ್ ಮಾಡಿಸಲಾಗಿತ್ತು. 86 ಸಿಬ್ಬಂದಿ ಪೈಕಿ 16 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಪಬ್‌ನಲ್ಲಿ ಕ್ಲೀನರ್‌ಸೇರಿದಂತೆ ಇನ್ನಿತರ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳು ಕೊವಿಡ್-19 ಸೋಂಕಿಗೆ ತುತ್ತಾಗಿದ್ದಾರೆ.
ದೇಶದ ಹಲವೆಡೆ ಕೊರೊನಾ ಪೀಡಿತರ ಪ್ರಮಾಣ ಗಣನೀಯವಾಗಿ ಹೆಚ್ಚಳ ಮಹಾರಾಷ್ಟ್ರದಲ್ಲಿ ಇಂದು 40,414 ಜನರಿಗೆ ಕೊರೊನಾ ದೃಢವಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 27,13,875ಕ್ಕೆ ಏರಿಕೆಯಾಗಿದೆ. ಈ ಪೈಕಿ 23,32,453 ಜನ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 17,874 ಸೋಂಕಿತರು ಗುಣ ಹೊಂದಿದ್ದಾರೆ. ಮಹಾರಾಷ್ಟ್ರದಲ್ಲಿಂದು ಕೊರೊನಾ ಸೋಂಕಿಗೆ 108 ಜನರ ಬಲಿಯಾಗಿದೆ. ಇದುವರೆಗೆ ಕೊರೊನಾ ಸೋಂಕಿನಿಂದ 54,181 ಜನ ಸಾವನ್ನಪ್ಪಿದ್ದಾರೆ. ಮಹಾರಾಷ್ಟ್ರದಲ್ಲಿ 3,25,901 ಜನರಲ್ಲಿ ಸೋಂಕು ಸಕ್ರಿಯವಾಗಿದೆ.
ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದ ನೈಟ್ಕರ್ಫ್ಯೂ ಜಾರಿಯಾಗಿದೆ. 8ರಿಂದ ಬೆಳಗ್ಗೆ 7 ಗಂಟೆವರೆಗೆ ನೈಟ್ಕರ್ಫ್ಯೂ ಇರಲಿದೆ. ಕೊರೊನಾ ತಡೆಗೆ ಮಹಾರಾಷ್ಟ್ರ ರಾಜ್ಯ ಸರ್ಕಾರ ನೈಟ್ಕರ್ಫ್ಯೂ ಜಾರಿಗೊಳಿಸಿದೆ.
ದೆಹಲಿಯಲ್ಲಿ ಇಂದು 1,881 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೆಹಲಿಯಲ್ಲಿ ಒಟ್ಟು ಕೊರೊನಾ ಪೀಡಿತರ ಸಂಖ್ಯೆ 6,57,715ಕ್ಕೆ ಏರಿಕೆಯಾಗಿದೆ. 6,57,715 ಸೋಂಕಿತರ ಪೈಕಿ 6,39,164 ಜನ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 952 ಸೋಂಕಿತರು ಗುಣಮುಖರಾಗಿದ್ದಾರೆ. ಹಾಗೂ ಕಳೆದ 24 ಗಂಟೆಯಲ್ಲಿ ಸೋಂಕಿಗೆ 9 ಜನ ಬಲಿಯಾಗಿದ್ದಾರೆ. ಸದ್ಯ ದೆಹಲಿಯಲ್ಲಿ 7,545 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.
ಪಂಜಾಬ್ ರಾಜ್ಯದಲ್ಲಿಂದು 2,963 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಮೂಲಕ, ಕೊರೊನಾ ಪೀಡಿತರ ಸಂಖ್ಯೆ 2,31,734ಕ್ಕೆ ಏರಿಕೆಯಾಗಿದೆ. ಈ ಪೈಕಿ 2,01,127 ಜನರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,155 ಸೋಂಕಿತರು ಗುಣಮುಖರಾಗಿದ್ದಾರೆ. ಪಂಜಾಬ್ನಲ್ಲಿ ಇಂದು ಕೊರೊನಾ ಸೋಂಕಿಗೆ 69 ಜನರ ಬಲಿಯಾಗಿದ್ದು, ಇದುವರೆಗೆ ಕೊರೊನಾ ಸೋಂಕಿನಿಂದ 6,690 ಜನರ ಸಾವನ್ನಪ್ಪಿದ್ದಾರೆ. ಪಂಜಾಬ್ ರಾಜ್ಯದಲ್ಲಿ 23,917 ಜನರಲ್ಲಿ ಸೋಂಕು ಸಕ್ರಿಯವಾಗಿದೆ.
ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಒಂದೇ ದಿನ 3082 ಮಂದಿಗೆ ಪಾಸಿಟಿವ್, 14 ಸಾವು, ಕಳೆದ 5 ತಿಂಗಳಲ್ಲೇ ಗರಿಷ್ಠ
Coronavirus Case in India: ದೇಶದಲ್ಲಿ ಕೊವಿಡ್ನಿಂದ ಒಂದೇ ದಿನ 312 ಸಾವು, 62,714 ಹೊಸ ಪ್ರಕರಣ ಪತ್ತೆ
Published On - 11:10 pm, Sun, 28 March 21