ಆನೇಕಲ್​ನ ಶ್ರೀ ಚೈತನ್ಯ ವಸತಿ ಕಾಲೇಜಿನ ಮೂವರಿಗೆ ಕೊರೊನಾ ದೃಢ; ಆಂತಕದಲ್ಲಿ ಪೋಷಕರು

ಆನೇಕಲ್​ನ ಶ್ರೀ ಚೈತನ್ಯ ವಸತಿ ಕಾಲೇಜಿನ ಮೂವರಿಗೆ ಕೊರೊನಾ ದೃಢಪಟ್ಟಿದೆ. ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.

ಆನೇಕಲ್​ನ ಶ್ರೀ ಚೈತನ್ಯ ವಸತಿ ಕಾಲೇಜಿನ ಮೂವರಿಗೆ ಕೊರೊನಾ ದೃಢ; ಆಂತಕದಲ್ಲಿ ಪೋಷಕರು
ಸಾಂದರ್ಭಿಕ ಚಿತ್ರ
Follow us
shruti hegde
|

Updated on:Mar 16, 2021 | 1:18 PM

ಆನೇಕಲ್: ಸರ್ಜಾಪುರ ರಸ್ತೆಯ ದೊಡ್ಡಕನ್ನೇಲಿ ಬಳಿಯಿರುವ ಶ್ರೀ ಚೈತನ್ಯ ವಸತಿ ಕಾಲೇಜಿನ ಮೂವರಿಗೆ ಕೊರೊನಾ ದೃಢಪಟ್ಟಿದೆ. ಕಾಲೇಜಿನಲ್ಲಿ ಒಟ್ಟು 750 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕೊರೊನಾ ದೃಢಪಟ್ಟಿರುವ ಹಿನ್ನೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ.

ಪ್ರಥಮ‌ ಪಿಯುಸಿ 8 ವಿದ್ಯಾರ್ಥಿಗಳಿಗೆ ಮತ್ತು ದ್ವಿತೀಯ ಪಿಯುಸಿಯ 3 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಕೇವಲ‌ 3 ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿದೆ ಎಂದು ಆಡಳಿತ ಮಂಡಳಿಯವರು ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ಗೊಂದಲ ಎದುರಾಗಿದೆ. ಬೇರೆಡೆಯಿಂದ ಬರುತ್ತಿರುವವರೇ ಬೆಂಗಳೂರಿಗೆ ಕಂಟಕವಾಗುತ್ತಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಕೊರೊನಾ ಪಾಸಿಟಿವ್​ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳಿಗೆ ಬಿಬಿಎಂಪಿಯಿಂದ ಕೊರೊನಾ ಟೆಸ್ಟ್ ಮಾಡಲಾಗುತ್ತಿದೆ. ಕಾಲೇಜು ಮತ್ತು ಹಾಸ್ಟೆಲ್‌ನಲ್ಲಿ ಸ್ಯಾನಿಟೈಸ್ ಮಾಡಿಸಲಾಗುತ್ತಿದೆ.

ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಭೀತಿ ಹಿನ್ನೆಲೆ; ಕೇರಳ-ಕರ್ನಾಟಕ ಗಡಿ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ರಾಜ್ಯದಲ್ಲಿ ಕೊರೊನಾ 2ನೇ ಅಲೆಯ ಭೀತಿ ಹಿನ್ನೆಲೆಯಲ್ಲಿ ಕೇರಳ-ಕರ್ನಾಟಕ ಗಡಿ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ನಡೆಸಲಾಗುತ್ತಿದೆ. ಮೈಸೂರಿನ ಹೆಚ್​.ಡಿ.ಕೋಟೆ ತಾಲೂಕಿನ ಬಾವಲಿ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ಕೈಗೊಳ್ಳಲಾಗಿದೆ. ಹಾಗೂ ಕೇರಳದಿಂದ ಬರುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.

ತಪಾಸಣೆ ವೇಳೆ ದೇಹದ ಉಷ್ಣಾಂಶ ಹೆಚ್ಚಿದ್ದರೂ ರಾಜ್ಯ ಪ್ರವೇಶ ನೀಡಲಾಗುತ್ತಿಲ್ಲ. ಹೆಚ್​.ಡಿ.ಕೋಟೆ ತಾಲೂಕು ಆರೋಗ್ಯಾಧಿಕಾರಿ ಡಾ.ರವಿಕುಮಾರ್ ನೇತೃತ್ವದಲ್ಲಿ ಕಟ್ಟುನಿಟ್ಟಾಗಿ ತಪಾಸಣೆ ನಡೆಯುತ್ತಿದೆ.

ಇದನ್ನೂ ಓದಿ: ಹೆಚ್ಚಿದ ಕೊರೊನಾ ಪ್ರಕರಣ; ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮುಂದೂಡಿಕೆ

ಇದನ್ನೂಓದಿ: ಬೆಂಗಳೂರು ಪೊಲೀಸರ ಆತ್ಮಸ್ಥೈರ್ಯವನ್ನೆ ನುಂಗಿತ ಕ್ರೂರಿ ಕೊರೊನಾ?

Published On - 1:06 pm, Tue, 16 March 21