AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Naga Panchami 2021: ಜಿಲ್ಲೆಗಳಲ್ಲಿ ನಾಗರಪಂಚಮಿ ಹಬ್ಬದ ಸಂಭ್ರಮ, ಉಲ್ಲಂಘನೆಯಾಗುತ್ತಿದೆ ಕೊರೊನಾ ನಿಯಮ

ರಾಜ್ಯದ ಅನೇಕ ಕಡೆಗಳಿಂದ ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಭಕ್ತರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಕೊವಿಡ್ 3ನೇ ಅಲೆ ನಿಯಂತ್ರಿಸಲು ಪ್ರವೇಶ ನಿರ್ಬಂಧಿಸಿ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

Naga Panchami 2021: ಜಿಲ್ಲೆಗಳಲ್ಲಿ ನಾಗರಪಂಚಮಿ ಹಬ್ಬದ ಸಂಭ್ರಮ, ಉಲ್ಲಂಘನೆಯಾಗುತ್ತಿದೆ ಕೊರೊನಾ ನಿಯಮ
ಚಿಕ್ಕಬಳ್ಳಾಪುರ ನಗರದ ಮುಜರಾಯಿ ಇಲಾಖೆ ವ್ಯಾಪ್ತಿಯ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಪುರೋಹಿತರಿಂದಲೇ ಕೊವಿಡ್ ನಿಯಮಗಳ ಉಲ್ಲಂಘನೆಯಾಗಿದೆ
Follow us
TV9 Web
| Updated By: ಆಯೇಷಾ ಬಾನು

Updated on:Aug 13, 2021 | 10:09 AM

ಮೈಸೂರು: ಶ್ರಾವಣ ಮಾಸದ(Shravana Masa)  ಶುಕ್ಲಪಕ್ಷ, ಪಂಚಮಿ ತಿಥಿಯಲ್ಲಿ ಬರುವ ನಾಗರಪಂಚಮಿ(Nagara Panchami) ಹಬ್ಬ, ಹಾಗೂ ಮೊದಲ ಶ್ರಾವಣ ಶುಕ್ರವಾರ ಹಿನ್ನೆಲೆ ಇಂದು ಭಕ್ತರು ದೇವಸ್ಥಾನಗಳತ್ತ ಮುಖ ಮಾಡಿದ್ದಾರೆ. ಆದ್ರೆ ಕೊರೊನಾ ಮೂರನೇ ಭೀತಿ ಹಿನ್ನೆಲೆಯಲ್ಲಿ ದೇವಸ್ಥಾನದ ಬಾಗಿಲುಗಳನ್ನು ಮುಚ್ಚಲಾಗಿದೆ. ಆದರೂ ಕೆಲವರು ದೇವಾಲಯದ ಬಾಗಿಲುಗಳ ಮುಂದೆಯೇ ಪೂಜೆ ಮಾಡಿ ಹಾಲೆರೆದು ಹೋಗುತ್ತಿದ್ದಾರೆ.

ರಾಜ್ಯದ ಅನೇಕ ಕಡೆಗಳಿಂದ ಹೆಚ್ಚಿನ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದು ಭಕ್ತರಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಕೊವಿಡ್ 3ನೇ ಅಲೆ ನಿಯಂತ್ರಿಸಲು ಪ್ರವೇಶ ನಿರ್ಬಂಧಿಸಿ ಮೈಸೂರು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ. ಇಂದು ಹಾಗೂ ಮುಂದಿನ ಶುಕ್ರವಾರ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಚಾಮುಂಡೇಶ್ವರಿ ದೇಗುಲದ ಪೂಜೆಗಳು, ಧಾರ್ಮಿಕ ಆಚರಣೆಗಳು ಎಂದಿನಂತೆ ನಡೆಯಲಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದಲ್ಲಿ ನಾಗರಪಂಚಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಗುಂಡಪ್ಪ ಬಡಾವಣೆಯಲ್ಲಿರುವ ಹುತ್ತಗಳಿಗೆ, ನಾಗರಕಲ್ಲುಗಳಿಗೆ ಹಾಲು ಎರೆದು ಪೂಜೆ ಸಲ್ಲಿಸಿ ಹೆಂಗಳೆಯರು, ಗೃಹಿಣಿಯರು ಸಂಭ್ರಮಿಸುತ್ತಿದ್ದಾರೆ. ಈ ವೇಳೆ ಕೊರೊನಾ ನಿಯಮ ಸಂಪೂರ್ಣ ಮರೆಯಾಗಿದೆ. ಇನ್ನು ಚಿಕ್ಕಬಳ್ಳಾಪುರ ನಗರದ ಮುಜರಾಯಿ ಇಲಾಖೆ ವ್ಯಾಪ್ತಿಯ ಸುಬ್ರಮಣ್ಯಸ್ವಾಮಿ ದೇವಸ್ಥಾನದಲ್ಲಿ ಪುರೋಹಿತರಿಂದಲೇ ಕೊವಿಡ್ ನಿಯಮಗಳ ಉಲ್ಲಂಘನೆಯಾಗಿದೆ.

Naga Panchami 2021

ಜಿಲ್ಲೆಗಳಲ್ಲಿ ನಾಗರಪಂಚಮಿ ಹಬ್ಬದ ಸಂಭ್ರಮ

ಇದನ್ನೂ ಓದಿ: ಕಲಬುರಗಿ: ನಾಗರ ಪಂಚಮಿ ಹಬ್ಬದ ದಿನ ಕೊಬ್ಬರಿ ಕುಬ್ಬಸ ನೀಡಿ, ಜೋಕಾಲಿ ಆಡುವುದು ವಾಡಿಕೆ

Published On - 10:08 am, Fri, 13 August 21

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?