Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಅನ್​ಲಾಕ್​ ಆದರೂ ಸಾರಿಗೆ ಸಂಚಾರ ಡೌಟ್

ಜೂನ್ 14ರ ನಂತರ ಕೇವಲ ಅಗತ್ಯವಸ್ತುಗಳ ಖರೀದಿ ಸಮಯ ವಿಸ್ತರಣೆ ಮಾಡಲಾಗುತ್ತೆ. ಅಂದುಕೊಂಡಂತೆ ಕೊವಿಡ್ ಪಾಸಿಟಿವಿಟಿ ದರ ಕಡಿಮೆಯಾಗದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಸ್ ಸಂಚಾರಕ್ಕೆ ಅನುಮತಿ ಸಿಗುವುದು ಡೌಟ್ ಆಗಿದೆ. ಕೇವಲ ಆಟೋ, ಟ್ಯಾಕ್ಸಿ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಅನ್​ಲಾಕ್​ ಆದರೂ ಸಾರಿಗೆ ಸಂಚಾರ ಡೌಟ್
ಬಿಎಂಟಿಸಿ ಬಸ್​ (ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: sandhya thejappa

Updated on: Jun 10, 2021 | 11:52 AM

ಬೆಂಗಳೂರು: ಮಹಾಮಾರಿ ಕೊರೊನಾ ಹೆಚ್ಚಾಗಿದ್ದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಲಾಕ್​ಡೌನ್ ಹೇರಲಾಗಿತ್ತು. ಸದ್ಯ ಈಗ ಕೊರೊನಾ ಸೋಂಕಿನ ಸಾವು-ನೋವು ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಜೂನ್ 14ರ ಬಳಿಕ ಹಂತ ಹಂತವಾಗಿ ಅನ್‌ಲಾಕ್ ಮಾಡಲು ಸರ್ಕಾರ ಚಿಂತಿಸಿದೆ. ಆದರೆ ಅನ್​ಲಾಕ್ ಆದ ಬಳಿಕ ಸಾರಿಗೆ ಸಂಚಾರ ಶುರುವಾಗಲಿದೆ ಎಂದು ನಿರೀಕ್ಷಿಸುತ್ತಿದ್ದವರಿಗೆ ಸರ್ಕಾರ ಶಾಕ್ ಕೊಡಲಿದೆ. ಅನ್​ಲಾಕ್​ ಆದರೂ ಬೆಂಗಳೂರಿನಲ್ಲಿ ಬಸ್ ಸಂಚಾರಕ್ಕೆ ಅನುಮತಿ ಸಿಗುವುದು ಡೌಟ್ ಆಗಿದೆ.

ಜೂನ್ 14ರ ನಂತರ ಕೇವಲ ಅಗತ್ಯವಸ್ತುಗಳ ಖರೀದಿ ಸಮಯ ವಿಸ್ತರಣೆ ಮಾಡಲಾಗುತ್ತೆ. ಅಂದುಕೊಂಡಂತೆ ಕೊವಿಡ್ ಪಾಸಿಟಿವಿಟಿ ದರ ಕಡಿಮೆಯಾಗದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಸ್ ಸಂಚಾರಕ್ಕೆ ಅನುಮತಿ ಸಿಗುವುದು ಡೌಟ್ ಆಗಿದೆ. ಕೇವಲ ಆಟೋ, ಟ್ಯಾಕ್ಸಿ ಸಂಚಾರಕ್ಕೆ ಅನುಮತಿ ಸಿಗುವ ಸಾಧ್ಯತೆ ಇದೆ. ಬಟ್ಟೆ, ಚಿನ್ನದಂಗಡಿಗೆ ವಾರದಲ್ಲಿ 3 ದಿನ ಅವಕಾಶ ಸಿಗುವ ಸಾಧ್ಯತೆ ವ್ಯಕ್ತವಾಗಿದೆ. ಬೆಂಗಳೂರಿನ ನಾಲ್ಕು ವಲಯದಲ್ಲಿ ಕೊರೊನಾ ಪಾಸಿಟಿವ್ ರೇಟ್ ಶೇಕಡಾ 5ಕ್ಕಿಂತ ಮೇಲಿದೆ. ಹೀಗಾಗಿ ಬಿಎಂಟಿಸಿ ಬಸ್ ಸಂಚಾರ ಬೇಡ ಎಂಬ ಚರ್ಚೆ ಶುರುವಾಗಿದೆ. ಬೊಮ್ಮನಹಳ್ಳಿ ವಲಯದಲ್ಲಿ ಶೇಕಡಾ 5.2ಇದೆ. ಪೂರ್ವ ವಲಯದಲ್ಲಿ ಶೇಕಡಾ 5..3, ಮಹಾದೇವಪುರ ವಲಯ-5.6, ಆರ್ ಆರ್ ನಗರ- 5.4 ಇದೆ. ಕಳೆದ ಹತ್ತು ದಿನದಲ್ಲಿ ಈ ವಲಯಗಳಲ್ಲಿ ಪಾಸಿಟಿವ್ ರೇಟ್ ಕಡಿಮೆಯಾಗಿಲ್ಲ. ಹೀಗಾಗಿ ಆಟೋ, ಓಲಾ, ಉಬರ್​ಗೆ ಅವಕಾಶ ಕೊಟ್ಟು ಬಸ್ ಸೇವೆ ಬೇಡ ಎಂದು ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಬೆಂಗಳೂರು ಅನ್​ಲಾಕ್​ಗೆ ಅಧಿಕಾರಿಗಳಿಂದ ನೀಲನಕ್ಷೆ ಸಿದ್ಧ ಅಗತ್ಯ ವಸ್ತುಗಳ ಖರೀದಿ ಸಮಯ ವಿಸ್ತರಣೆ ಕುರಿತು ಚರ್ಚೆ ನಡೆದಿದೆ. ಬೆಳಗ್ಗೆ 6-12 ಗಂಟೆಯವರೆಗೆ ಖರೀದಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ಬಾರ್-ರೆಸ್ಟೋರೆಂಟ್​ಗಳಲ್ಲಿ ಸಂಜೆಯವರೆಗೆ ಪಾರ್ಸೆಲ್ ನೀಡುವುದಕ್ಕೆ ಅನುಮತಿ ನೀಡಲಾಗುತ್ತೆ. ಪಾರ್ಕ್​ಗಳಲ್ಲಿ ಬೆಳಗ್ಗೆ 5ರಿಂದ 8 ಗಂಟೆಯವರೆಗೆ ಅವಕಾಶ ಸಿಗುವ ಸಾಧ್ಯತೆ ಇದೆ. ಜನಸಂದಣಿ ಕಾರ್ಯಕ್ರಮಗಳಿಗೆ ಸಂಪೂರ್ಣ ನಿರ್ಬಂಧ. ಜೂನ್ ಅಂತ್ಯದವರೆಗೂ ರಾತ್ರಿ ಕರ್ಫ್ಯೂ ಜಾರಿಯಾಗಬಹುದು. ಷರತ್ತುಬದ್ಧ ಅನ್​ಲಾಕ್ ಪ್ರಕ್ರಿಯೆಗೆ ಅಧಿಕಾರಿಗಳ ಪ್ರಸ್ತಾಪಿಸಿದ್ದು ನಿನ್ನೆ ಸಚಿವ ಅಶೋಕ್ ನೇತೃತ್ವದಲ್ಲಿ ಪೂರ್ವಭಾವಿ ಚರ್ಚೆ ನಡೆದಿದೆ.

ಇದನ್ನೂ ಓದಿ: CM on Lockdown Relaxation : ಶೇ.5ಕ್ಕಿಂತ ಪಾಸಿಟಿವಿಟಿ ರೇಟ್ ಬರೋ ಜಿಲ್ಲೆಗಳಲ್ಲಿ ಅನ್​ಲಾಕ್..?

ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ