ಸಂಪೂರ್ಣ ವಿಶ್ವಾಸದೊಂದಿಗೆ ಲಸಿಕೆ ತೆಗೆದುಕೊಳ್ಳಿ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ

ದೇಶದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದಿರುವುದು ಹೆಮ್ಮೆಯ ವಿಚಾರ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.

ಸಂಪೂರ್ಣ ವಿಶ್ವಾಸದೊಂದಿಗೆ ಲಸಿಕೆ ತೆಗೆದುಕೊಳ್ಳಿ: ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿಕೆ
ಡಾ.ಕೆ.ಸುಧಾಕರ್​
Edited By:

Updated on: Apr 06, 2022 | 8:55 PM

ಬೆಂಗಳೂರು: ಇದೊಂದು ಐತಿಹಾಸಿಕ ಲಸಿಕಾ ಆಂದೋಲನವಾಗಿದೆ. ದೇಶಾದ್ಯಂತ ಏಕಕಾಲಕ್ಕೆ ಲಸಿಕಾ ಆಂದೋಲನಕ್ಕೆ ಚಾಲನೆ ನೀಡಲಾಗುತ್ತದೆ. ಸಂಪೂರ್ಣ ವಿಶ್ವಾಸದೊಂದಿಗೆ ಲಸಿಕೆಯನ್ನು ತೆಗೆದುಕೊಳ್ಳಿ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.

ನಮ್ಮ ದೇಶದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದಿದ್ದಾರೆ. ಇದು ಹೆಮ್ಮೆಯ ವಿಚಾರ. ಲಸಿಕಾ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಲಸಿಕೆ ವಿತರಣೆಗೆ ಚಾಲನೆ ನೀಡಿದ್ದಾರೆ ಎಂದು ಸುಧಾಕರ್ ಹೇಳಿದ್ದಾರೆ.

ಕೆಲ ವ್ಯಾಕ್ಸಿನ್ ಕಂಡುಹಿಡಿಯಲು 9 ವರ್ಷ ಬೇಕಾಗುತ್ತದೆ. ಇನ್ನು ಕೆಲವು ವ್ಯಾಕ್ಸಿನ್‌ ಕಂಡುಹಿಡಿಯಲು 25 ವರ್ಷ ತೆಗೆದುಕೊಂಡಿದ್ದಾರೆ. ಕೊರೊನಾಗೆ ಒಂದೇ ವರ್ಷದಲ್ಲಿ ಲಸಿಕೆ ಕಂಡುಹಿಡಿದಿದ್ದಾರೆ. ಈ ವಿಚಾರವಾಗಿ ಪ್ರಧಾನಿ ಹಾಗೂ ಸಿಎಂಗೆ ಅಭಿನಂದನೆ ಸಲ್ಲಿಸ್ತೇನೆ. ದೇಶದ ವಿಜ್ಞಾನಿಗಳು ಲಸಿಕೆ ಕಂಡು ಹಿಡಿದಿರುವುದು ಹೆಮ್ಮೆಯ ವಿಚಾರ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.

ರಾಜ್ಯದ ಲಸಿಕೆ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ
ವಿಕ್ಟೋರಿಯಾ ಆಸ್ಪತ್ರೆಗೆ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪಗೆ ಆಸ್ಪತ್ರೆ ಅಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿದ್ದಾರೆ. ಪ್ರಧಾನಿ‌ ನರೇಂದ್ರ ಮೋದಿ ಲಸಿಕೆ ಅಭಿಯಾನ ಚಾಲನೆ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಭಾಗವಹಿಸಿದ್ದಾರೆ. ಬಳಿಕ, ವಿಕ್ಟೋರಿಯಾ ಕೇಂದ್ರದಲ್ಲಿ ರಾಜ್ಯದ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಯಡಿಯೂರಪ್ಪ ಸಮ್ಮುಖದಲ್ಲಿ ಲಸಿಕೆ ನೀಡಲಾಗಿದೆ. ಲಸಿಕೆ ಪಡೆದವರಿಗೆ ಗುಲಾಬಿ ನೀಡಿ ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಹಾಗೂ ಆರೋಗ್ಯ, ಕುಟುಂಬ ಕಲ್ಯಾಣ ಸಚಿವ ಕೆ.ಸುಧಾಕರ್ ಭಾಗಿಯಾಗಿದ್ದಾರೆ.

ಇದಕ್ಕೂ ಮೊದಲು, ಸಿಎಂ ಅಧಿಕೃತ ನಿವಾಸಕ್ಕೆ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಭೇಟಿ ನೀಡಿ, ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಲಸಿಕೆ ಕಾರ್ಯಕ್ರಮ ಉದ್ಘಾಟನೆ ಹಾಗೂ ಸಿದ್ಧತೆ ಬಗ್ಗೆ ವಿವರಣೆ ಸಲ್ಲಿಸಿದ್ದರು. ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್ ಅಖ್ತರ್, ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಯ ಬಗ್ಗೆ ಪರಿಶೀಲನೆ ನಡೆಸಿದ್ದರು.

ವಿಕ್ಟೋರಿಯಾ ಆಸ್ಪತ್ರೆಗೆ ಆಗಮಿಸಿದ ಬಿ.ಎಸ್. ಯಡಿಯೂರಪ್ಪ, ಪ್ರಲ್ಹಾದ್ ಜೋಷಿ ಹಾಗೂ ಡಾ.ಕೆ. ಸುಧಾಕರ್

ಕೊರೊನಾಗೆ ಸಂಜೀವಿನಿ ನೀಡಲು ಸಕಲ ಸಿದ್ಧತೆ.. ದೇಶಾದ್ಯಂತ ಇಂದು ಲಸಿಕೆ ಅಸಲಿ ರನ್

 

Published On - 11:14 am, Sat, 16 January 21