ರಾಜ್ಯದಲ್ಲಿಂದು 296 ಜನರಿಗೆ ಕೊರೊನಾ ಸೋಂಕು ದೃಢ: ಮೈಸೂರಿನಲ್ಲಿ ಓರ್ವ ವ್ಯಕ್ತಿ ಸಾವು

ರಾಜ್ಯದಲ್ಲಿ ಇಂದು 296 ಜನರಿಗೆ ಕೊರೊನಾ ಸೋಂಕು (Corona Virus) ದೃಢಪಟ್ಟಿದ್ದು, ಮೈಸೂರಿನಲ್ಲಿ ಓರ್ವ ವ್ಯಕ್ತಿ ಬಲಿ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು 131 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಆ ಮೂಲಕ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 5.89 ರಷ್ಟಿದೆ.

ರಾಜ್ಯದಲ್ಲಿಂದು 296 ಜನರಿಗೆ ಕೊರೊನಾ ಸೋಂಕು ದೃಢ: ಮೈಸೂರಿನಲ್ಲಿ ಓರ್ವ ವ್ಯಕ್ತಿ ಸಾವು
ಕೊರೊನಾ ಸೋಂಕು
Follow us
ಗಂಗಾಧರ​ ಬ. ಸಾಬೋಜಿ
|

Updated on: Jan 01, 2024 | 8:49 PM

ಬೆಂಗಳೂರು, ಜನವರಿ 01: ರಾಜ್ಯದಲ್ಲಿ ಇಂದು 296 ಜನರಿಗೆ ಕೊರೊನಾ ಸೋಂಕು (Corona Virus) ದೃಢಪಟ್ಟಿದ್ದು, ಮೈಸೂರಿನಲ್ಲಿ ಓರ್ವ ವ್ಯಕ್ತಿ ಬಲಿ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು 131 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ. ಆ ಮೂಲಕ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 5.89 ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 5,021 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 1,245 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. 50 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಜಿಲ್ಲಾವಾರು ಕೊವಿಡ್ ಕೇಸ್​ ಪತ್ತೆ

ಮೈಸೂರು 29, ಹಾಸನ 17, ತುಮಕೂರು ಜಿಲ್ಲೆಯಲ್ಲಿ 16, ದಕ್ಷಿಣ ಕನ್ನಡ 13, ಬಳ್ಳಾರಿ 11, ಮಂಡ್ಯ ಜಿಲ್ಲೆಯಲ್ಲಿ 9, ಕೋಲಾರ 7, ಶಿವಮೊಗ್ಗ 7, ಚಿಕ್ಕಬಳ್ಳಾಪುರ 6, ಗದಗ 6, ಬೆಂಗಳೂರು ಗ್ರಾಮಾಂತರ 5, ಚಾಮರಾಜನಗರ ಜಿಲ್ಲೆಯಲ್ಲಿ 5, ದಾವಣಗೆರೆ 4, ಧಾರವಾಡ 4, ಕಲಬುರಗಿ 4, ಕೊಪ್ಪಳ 4, ವಿಜಯನಗರ 4 ಕೇಸ್​​.

ಇದನ್ನೂ ಓದಿ: ಕರ್ನಾಟಕದಲ್ಲಿ ನಿನ್ನೆ 229 ಜನರಿಗೆ ಕೊರೊನಾ ಸೋಂಕು ದೃಢ

ಬಾಗಲಕೋಟೆ 3, ಬೆಳಗಾವಿ 2, ಬೀದರ್ 2, ಚಿಕ್ಕಮಗಳೂರು, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ ಇಬ್ಬರಿಗೆ, ರಾಯಚೂರು, ರಾಮನಗರ, ಉಡುಪಿ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ಪತ್ತೆ ಆಗಿದೆ.

ಮತ್ತೆ ವ್ಯಾಕ್ಸಿನ್ ನೀಡಲು ಮುಂದಾದ ರಾಜ್ಯ ಸರ್ಕಾರ

ಜನವರಿ 2ರಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಶುರು ಮಾಡಲು ಸರ್ಕಾರ ಮುಂದಾಗಿದೆ. ರಾಜ್ಯಾದ್ಯಂತ ಉಚಿತ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ದೇಶದಲ್ಲಿ ಕೊರೊನಾ JN.1 ರೂಪಾಂತರಿ ಹಾವಳಿ ಹಿನ್ನಲೆ ಆರೋಗ್ಯ ಇಲಾಖೆ ವ್ಯಾಕ್ಸಿನ್ ಮೊರೆ ಹೋಗಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮತ್ತೆ ವ್ಯಾಕ್ಸಿನ್ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

ರಾಜ್ಯದಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳಿಗೆ ವ್ಯಾಕ್ಸಿನ್ ನೀಡಲು ಪ್ಲಾನ್ ಮಾಡಿದೆ. ಹೀಗಾಗಿ ಈಗ ಮತ್ತೆ ಯಾರು ಲಸಿಕೆ ಪಡೆದಿಲ್ಲ ಅವರೆಲ್ಲ ಮುನ್ನೆಚ್ಚರಿಕಾ ದೃಷ್ಠಿಯಿಂದ ವ್ಯಾಕ್ಸಿನ್ ಪಡೆಯುವಂತೆ ಸೂಚಿಸಿದೆ. ಕೋಮಾರ್ಬಿಟಿಸ್ ಹಾಗೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಮೂರನೇ ಡೋಸ್ ಪಡೆಯುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ
ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ