ರಾಜ್ಯದಲ್ಲಿ ಇಂದು 201 ಜನರಿಗೆ ಕೊರೊನಾ ದೃಢ: ಒಟ್ಟು 974 ಜನರಲ್ಲಿ ಸೋಂಕು ಸಕ್ರಿಯ

ರಾಜ್ಯದಲ್ಲಿ ಇಂದು 201 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು 121 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.74 ರಷ್ಟಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. 

ರಾಜ್ಯದಲ್ಲಿ ಇಂದು 201 ಜನರಿಗೆ ಕೊರೊನಾ ದೃಢ: ಒಟ್ಟು 974 ಜನರಲ್ಲಿ ಸೋಂಕು ಸಕ್ರಿಯ
ಪ್ರಾತಿನಿಧಿಕ ಚಿತ್ರ
Follow us
|

Updated on:Jan 10, 2024 | 10:38 PM

ಬೆಂಗಳೂರು, ಜನವರಿ 10: ರಾಜ್ಯದಲ್ಲಿ ಇಂದು 201 ಜನರಿಗೆ ಕೊರೊನಾ ಸೋಂಕು (Corona virus) ದೃಢಪಟ್ಟಿದ್ದು, ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು 121 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 2.74 ರಷ್ಟಿದೆ. ಕಳೆದ 24 ಗಂಟೆಯಲ್ಲಿ 7,315 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 974 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. 257 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

ಜಿಲ್ಲಾವಾರು ಕೊರೊನಾ ಸೋಂಕು ದೃಢ

ತುಮಕೂರು 14, ಮೈಸೂರು ಜಿಲ್ಲೆಯಲ್ಲಿ 10 ಜನರಿಗೆ, ಚಾಮರಾಜನಗರ 8, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 7, ಬಳ್ಳಾರಿ 6, ಬೆಳಗಾವಿ 6, ಹಾಸನ 6, ಕೊಪ್ಪಳ ಜಿಲ್ಲೆಯಲ್ಲಿ 4, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 3, ಧಾರವಾಡ 3, ಗದಗ 3, ರಾಯಚೂರು 2, ಬಾಗಲಕೋಟೆ, ಮಂಡ್ಯ ಜಿಲ್ಲೆಯಲ್ಲಿ ತಲಾ 1, ಚಿತ್ರದುರ್ಗ, ದಕ್ಷಿಣ ಕನ್ನಡ, ವಿಜಯನಗರ ಜಿಲ್ಲೆಯಲ್ಲಿ ತಲಾ 1 ಕೇಸ್ ಪತ್ತೆ ಆಗಿವೆ.

ಕರ್ನಾಟಕದಲ್ಲಿ ಅತೀ ಹೆಚ್ಚು ಕೊವಿಡ್​ ಕೇಸ್​ಗಳಿವೆ: ಸಚಿವ ದಿನೇಶ್ ಗುಂಡೂರಾವ್

ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಕೊವಿಡ್​ ಸೋಂಕು ನಿಯಂತ್ರಣ ಪರಾಮರ್ಶೆ ಸಭೆ ಮಾಡಲಾಗಿದೆ. ಸಚಿವರಾದ ಮಹದೇವಪ್ಪ, ಶರಣಪ್ರಕಾಶ್ ಪಾಟೀಲ್​, ಎಂ.ಸಿ.ಸುಧಾಕರ್, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸುರಕ್ಷತಾ ಕಾಮಗಾರಿ ಕೈಗೊಳ್ಳಲು ಕೇಂದ್ರದಿಂದ 688 ಕೋಟಿ ರೂ. ಬಿಡುಗಡೆ

ಸಭೆ ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್​, ದಿನಕ್ಕೆ 6-7 ಸಾವಿರ ಕೇಸ್ ಬರುತ್ತಿವೆ. ಆದರೂ ನಾವು ಕೊವಿಡ್​​ ಟೆಸ್ಟಿಂಗ್ ಕಡಿಮೆ ಮಾಡಿಲ್ಲ. ಮಾಸ್ಕ್, ಡ್ರಗ್ಸ್ ಹಾಗೂ ಟೆಸ್ಟಿಂಗ್ ಕಿಟ್ಸ್ ನಮ್ಮಲ್ಲಿವೆ. 19 ಸೋಂಕಿತರು ಐಸಿಯುನಲ್ಲಿದ್ದಾರೆ, ನಿಗಾವಹಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಿಂದ ಮಾನಿಟರ್ ಮಾಡುತ್ತಿದ್ದಾರೆ. ಆಸ್ಪತ್ರೆಯ ಸಿಬ್ಬಂದಿಗೆ ವ್ಯಾಕ್ಸಿನ್ ಕೊಡಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಕರ್ನಾಟಕದಲ್ಲಿ ಅತೀ ಹೆಚ್ಚು ಕೊವಿಡ್​ ಕೇಸ್​ಗಳಿವೆ. ರಾಜ್ಯದಲ್ಲಿ ಇದುವರೆಗೆ ಕೊವಿಡ್​ಗೆ 26 ಜನರು ಮೃತಪಟ್ಟಿದ್ದಾರೆ. ಈ ಪೈಕಿ 21 ಡೆತ್​ಗಳ ಆಡಿಟ್​ ಮಾಡಲಾಗಿದೆ. ಈ ಪೈಕಿ 2 ಕೇಸ್ ಕೊವಿಡ್​​ನಿಂದ ಆಗಿದೆ ಅಂದಿದ್ದಾರೆ. 18 ಡೆತ್​ ಕೇಸ್​ ಕೊವಿಡ್​ಗೆ ಸಂಬಂಧವಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಕೊವಿಡ್​ ಸೋಂಕು ಕಂಟ್ರೋಲ್​ನಲ್ಲಿದೆ. ಕೊವಿಡ್​ ಬಗ್ಗೆ ರಾಜ್ಯದ ಜನ ಆತಂಕಕ್ಕೊಳಗಾಗಬಾರದು. ಸರ್ಕಾರ ಕೊವಿಡ್​ ಗಂಭೀರವಾಗಿ ತೆಗೆದುಕೊಂಡಿದೆ. ತೀವ್ರ ಸೋಂಕಿನ ಲಕ್ಷಣ ಇರುವವರಿಗೆ ಕೊವಿಡ್ ಟೆಸ್ಟ್ ಮಾಡಬೇಕು ಎಂದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 10:37 pm, Wed, 10 January 24

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ