ರೂಪಾಂತರಿ ಕೊರೊನಾ ನಿಯಂತ್ರಿಸಲು ಹೊಸ ಮಾರ್ಗಸೂಚಿ ಪ್ರಕಟಿಸುತ್ತೇವೆ: ಸಚಿವ ಡಾ.ಕೆ.ಸುಧಾಕರ್
ಬ್ರಿಟನ್ನಿಂದ ಬಂದ 2,500 ಜನ ಪೈಕಿ 1,638 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 14 ಜನರಿಗೆ ಪಾಸಿಟಿವ್ ಇರುವುದು ತಿಳಿದುಬಂದಿದೆ. ಪರೀಕ್ಷೆಯ ಮಾದರಿಯನ್ನು ನಿಮ್ಹಾನ್ಸ್ ಲ್ಯಾಬ್ಗೆ ಕಳುಹಿಸಲಾಗಿದ್ದು, ಜೆನೆಟಿಕ್ ಸೀಕ್ವೆನ್ಸಿಂಗ್ ಮಾಡಲಾಗುತ್ತಿದೆ.
ಬೆಂಗಳೂರು: ಹೊಸ ಪ್ರಭೇದದ ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಗೃಹ ಇಲಾಖೆಯೊಂದಿಗೆ ಸಭೆ ನಡೆಸಿ ಹೊಸ ಮಾರ್ಗಸೂಚಿ ರೂಪಿಸಲಾಗುವುದು. ಹೊಸ ವರ್ಷಕ್ಕೆ ಹೊಸ ಮಾರ್ಗಸೂಚಿ ತಯಾರಾಗಬೇಕಿದೆ. ಇದಕ್ಕಾಗಿ ಗೃಹ ಇಲಾಖೆಯ ಜೊತೆ ಸಭೆ ನಡೆಸುತ್ತೇವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಕೊವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ ನಡೆಯುತ್ತಿದೆ. ಈ ಲಸಿಕೆಯನ್ನು ಪ್ರಾಯೋಗಿಕವಾಗಿ ಪಡೆಯಬಹುದು. ಕೊರೊನಾ ವಾರಿಯರ್ಗಳಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಲಸಿಕೆ ಪಡೆದು ಪ್ರಯೋಗದಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದ್ದೇವೆ. ಸ್ವಯಂಪ್ರೇರಿತರಾಗಿ ಕ್ಲಿನಿಕಲ್ ಟ್ರಯಲ್ನಲ್ಲಿ ಪಾಲ್ಗೊಂಡರೆ ಸಹಕಾರಿ ಎಂದು ಅಭಿಪ್ರಾಯಪಟ್ಟಿದ್ದಾರೆ.
ಬ್ರಿಟನ್ನಿಂದ ಬಂದ 2,500 ಜನ ಪೈಕಿ 1,638 ಜನರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 14 ಜನರಿಗೆ ಪಾಸಿಟಿವ್ ಇರುವುದು ತಿಳಿದುಬಂದಿದೆ. ಪರೀಕ್ಷೆಯ ಮಾದರಿಯನ್ನು ನಿಮ್ಹಾನ್ಸ್ ಲ್ಯಾಬ್ಗೆ ಕಳುಹಿಸಲಾಗಿದ್ದು, ಜೆನೆಟಿಕ್ ಸೀಕ್ವೆನ್ಸಿಂಗ್ ಮಾಡಲಾಗುತ್ತಿದೆ. ಜೆನೆಟಿಕ್ ಸೀಕ್ವೆನ್ಸಿಂಗ್ ಪ್ರಕ್ರಿಯೆಗೆ 48 ಗಂಟೆ ಬೇಕಾಗಿರುವ ಕಾರಣ ವರದಿ ಬಂದ ಕೂಡಲೇ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಇಡೀ ದೇಶದಲ್ಲಿ ಬ್ರಿಟನ್ನಿಂದ ಒಟ್ಟು 38,500 ಜನರು ಬಂದಿದ್ದಾರೆ. ಎಲ್ಲ ರಾಜ್ಯಗಳಲ್ಲೂ ತಪಾಸಣೆ ನಡೆಯುತ್ತಿದ್ದು, ಅಷ್ಟನ್ನೂ ಕಲೆಹಾಕಿ ಅಂತಿಮ ವರದಿಯನ್ನು ಐಸಿಎಂಆರ್ ಪ್ರಕಟಿಸಲಿದೆ. ವಿಮಾನ ನಿಲ್ದಾಣದಲ್ಲಿ ಸೂಕ್ತ ತಪಾಸಣೆ ವ್ಯವಸ್ಥೆ ಇರುವುದರಿಂದ ಭಯಪಡಬೇಕಾಗಿಲ್ಲ ಎಂದು ಹೇಳಿದ್ದಾರೆ.
ಇನ್ಸ್ಟಂಟ್ ಇಮ್ಯೂನಿಟಿ.. ಕೊರೊನಾದಿಂದ ಗಂಭೀರ ಸ್ಥಿತಿಗೆ ಹೋದವರನ್ನೂ ಗುಣಪಡಿಸಬಲ್ಲ ಹೊಸ ಔಷಧಿ !