ಬೆಂಗಳೂರು: ಕಿಲ್ಲರ್ ಕೊರೊನಾ ಸಮಯದಲ್ಲಿ ಕೊರೊನಾ ವಾರಿಯರ್ ಆಗಿ ಮಹಾಮಾರಿ ವಿರುದ್ಧ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ನಲ್ಲೊಬ್ಬರಾದ ಆಶಾ ಕಾರ್ಯಕರ್ತೆಯರ ಬಹುದಿನದ ಬೇಡಿಕೆಯನ್ನು ಸರ್ಕಾರ ಇನ್ನೂ ಈಡೇರಿಸಿಲ್ಲ. ಹೀಗಾಗಿ ನೊಂದ ಆಶಾ ಕಾರ್ಯಕರ್ತೆಯರು ನಾಳೆಯಿಂದ ರಾಜ್ಯಾದ್ಯಂತ ಸೇವೆ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ.
10 ಬಾರಿ ಮನವಿ ಪತ್ರ ನೀಡಿದ್ರು ಸರ್ಕಾರ ಕ್ಯಾರೆ ಎಂದಿಲ್ಲ ಈ ಹಿಂದೆ ಮಾಸಿಕ ಗೌರವ ಧನ 12 ಸಾವಿರಕ್ಕೆ ಹೆಚ್ಚಳ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ ಮಾಡಿದ್ದರು. 10 ಬಾರಿ ಮನವಿ ಪತ್ರ ನೀಡಿದ್ರು ಸರ್ಕಾರ ಕ್ಯಾರೆ ಎಂದಿಲ್ಲ. ಹೀಗಾಗಿ ನಾಳೆ ಬೆಳಗ್ಗೆಯಿಂದ ಆರೋಗ್ಯ ಸೇವೆ ಸ್ಥಗಿತಗೊಳಿಸಿ ಹೋರಾಟ ಮಾಡಲು ಮುಂದಾಗಿದ್ದಾರೆ. ಸರ್ಕಾರಕ್ಕೆ ನಾಳೆಯಿಂದ ದೊಡ್ಡ ಸಂಕಷ್ಟ ಎದುರಾಗಲಿದೆ.
ರಾಜ್ಯದಲ್ಲಿ ಕೆಲಸ ಮಾಡ್ತಿರುವ 42 ಸಾವಿರ ಆಶಾ ಕಾರ್ಯಕರ್ತೆಯರಿಂದ ನಾಳೆ ಧರಣಿ ನಡೆಯಲಿದೆ. ಕೊರೊನಾ ತಡೆಯಲು ಆಶಾ ಕಾರ್ಯಕರ್ತೆಯರ ಪರಿಶ್ರಮ ಅಪಾರ. ಅವರು ಮನೆ ಮನೆಗೆ ತೆರಳಿ ಸಮೀಕ್ಷೆ, ಸೋಂಕು ಪತ್ತೆ ಹಚ್ಚವಲ್ಲಿ ಅತಿ ಮುಖ್ಯ ಪಾತ್ರ ವಹಿಸಿದ್ದಾರೆ.
ಆದರೂ ಕಡಿಮೆ ವೇತನದಲ್ಲಿ ದುಡಿಯುತ್ತಿದ್ದಾರೆ. ಇಷ್ಟೆಲ್ಲಾ ಪರಿಶ್ರಮ ಪಟ್ಟರೂ ಅವರಿಗೆ ವೇತನ ಹೆಚ್ಚಳವಾಗಿಲ್ಲ. ಹೀಗಾಗಿ ವೇತನ ಹೆಚ್ಚಳಕ್ಕೆ ಅಗ್ರಹಿಸಿ ನಾಳೆಯಿಂದ ರಾಜ್ಯ ಆಶಾ ಕಾರ್ಯಕರ್ತೆಯರ ಸಂಘದ ಕಾರ್ಯದರ್ಶಿ ನಾಗಲಕ್ಷ್ಮಿ ಸಮ್ಮುಖದಲ್ಲಿ ಧರಣಿಗೆ ಮುಂದಾಗಿದ್ದಾರೆ.