Covid-19 Karnataka Update: ಕರ್ನಾಟಕದಲ್ಲಿ ಇಂದು 15785 ಮಂದಿಗೆ ಸೋಂಕು, 146 ಸಾವು
ಒಟ್ಟು 15,785 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು ಒಂದೇ ದಿನ 146 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ 9,618 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 97 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸೋಮವಾರ (ಏಪ್ರಿಲ್ 19) ಒಟ್ಟು 15,785 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇಂದು ಒಂದೇ ದಿನ 146 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ 9,618 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 97 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 11,76,850ಕ್ಕೆ (11.76 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 13,497 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 5,56,253ಕ್ಕೆ (5.56 ಲಕ್ಷ) ಏರಿಕೆಯಾಗಿದೆ. ಈವರೆಗೆ ಬೆಂಗಳೂರಿನಲ್ಲಿ ಒಟ್ಟು 5220 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಪೈಕಿ 10,12,250 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,42,084 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಲ್ಲಿ 5,56,253 ಸೋಂಕಿತರ ಪೈಕಿ 4,47,854 ಜನರು ಗುಣಮುಖರಾಗಿದ್ದಾರೆ. 1,03,178 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿ ಇಂದು ಒಂದೇ ದಿನ 15,785 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 9618 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 2ನೇ ಸ್ಥಾನದಲ್ಲಿ ತುಮಕೂರು 652, 3ನೇ ಸ್ಥಾನದಲ್ಲಿ ಮೈಸೂರು 568 ಇದೆ. ಕಲಬುರಗಿ 513, ಹಾಸನ 320, ಬೀದರ್ 318, ವಿಜಯಪುರ 302 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಉಳಿದಂತೆ ಧಾರವಾಡ 283, ಮಂಡ್ಯ 279, ಬಳ್ಳಾರಿ 248, ರಾಯಚೂರು 228, ದಕ್ಷಿಣ ಕನ್ನಡ 218, ದಾವಣಗೆರೆ 199, ಯಾದಗಿರಿ 190, ಬೆಂಗಳೂರು ಗ್ರಾಮಾಂತರ 180, ಚಿಕ್ಕಬಳ್ಳಾಪುರ 175, ಶಿವಮೊಗ್ಗ 169, ಉಡುಪಿ 163, ಕೋಲಾರ 146, ಚಿಕ್ಕಮಗಳೂರು 142, ಬೆಳಗಾವಿ 115, ಚಾಮರಾಜನಗರ 108, ಉತ್ತರ ಕನ್ನಡ 106, ಕೊಪ್ಪಳ 100, ಕೊಡಗು 97, ಬಾಗಲಕೋಟೆ 97, ಚಿತ್ರದುರ್ಗ 74, ರಾಮನಗರ 71, ಗದಗ 70, ಹಾವೇರಿ ಜಿಲ್ಲೆಯಲ್ಲಿ 36 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ ಒಟ್ಟು 146 ಜನರ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 97 ಜನರು ಮೃತಪಟ್ಟಿದ್ದಾರೆ. ಹಾಸನ 11, ಮೈಸೂರು 8, ಬೆಂಗಳೂರು ಗ್ರಾಮಾಂತರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ತಲಾ 6, ಧಾರವಾಡ 3, ಬೀದರ್, ಚಿಕ್ಕಬಳ್ಳಾಪುರ, ಯಾದಗಿರಿ ಜಿಲ್ಲೆಗಳಲ್ಲಿ ತಲಾ ಇಬ್ಬರು, ಬಳ್ಳಾರಿ, ಬೆಳಗಾವಿ, ಹಾವೇರಿ, ಕೊಡಗು, ಕೋಲಾರ, ರಾಮನಗರ, ತುಮಕೂರು, ವಿಜಯಪುರ, ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾಗೆ ತಲಾ ಒಬ್ಬರು ಒಬ್ಬರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,497 ಜನರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಕೊರೊನಾದಿಂದ ಮೃತಪಟ್ಟ ಮುಸ್ಲಿಮರ ಅಂತ್ಯಸಂಸ್ಕಾರಕ್ಕೆ ಪ್ರತ್ಯೇಕ ಸ್ಥಳಾವಕಾಶ ಕೇಳಿದ ಜಮೀರ್ ಅಹ್ಮದ್
ಇದನ್ನೂ ಓದಿ: ಲಾಕ್ಡೌನ್ ಮಾಡುವುದಿದ್ದರೆ ಮೊದಲು ಜನರ ಅಕೌಂಟ್ಗೆ 25,000 ರೂ ಹಾಕಿ; ಸಭೆಯಲ್ಲಿ ಪ್ರತಿಪಕ್ಷಗಳ ಒತ್ತಾಯ
(Coronavirus 15785 People infected 146 died from covid-19 in Karnataka)
Published On - 6:41 pm, Mon, 19 April 21