Covid-19 Karnataka Update: ಕರ್ನಾಟಕದಲ್ಲಿ ಇಂದು 23,558 ಮಂದಿಗೆ ಸೋಂಕು, ಕೊರೊನಾದಿಂದ 116 ಜನರ ಸಾವು

ಕರ್ನಾಟಕದಲ್ಲಿ ಇಂದು (ಏಪ್ರಿಲ್ 21) 23,558 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 116 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 13,640 ಜನರಲ್ಲಿ ಸೋಂಕು ದೃಢಪಟ್ಟಿದ್ದು, 70 ಜನರು ಸಾವನ್ನಪ್ಪಿದ್ದಾರೆ.

Covid-19 Karnataka Update: ಕರ್ನಾಟಕದಲ್ಲಿ ಇಂದು 23,558 ಮಂದಿಗೆ ಸೋಂಕು, ಕೊರೊನಾದಿಂದ 116 ಜನರ ಸಾವು
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 21, 2021 | 7:18 PM

ಬೆಂಗಳೂರು: ಕರ್ನಾಟಕದಲ್ಲಿ ಇಂದು (ಏಪ್ರಿಲ್ 21) 23,558 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು 116 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 13,640 ಜನರಲ್ಲಿ ಸೋಂಕು ದೃಢಪಟ್ಟಿದ್ದು, 70 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 12,22,202ಕ್ಕೆ (12.22 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,762 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 10,32,233 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಪ್ರಸ್ತುತ 17,6,188 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿಂದು ಒಂದೇ ದಿನ 13,640 ಜನರಿಗೆ ಸೋಂಕು ಕಾಣಿಸಿಕೊಂಡಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 5,83,675ಕ್ಕೆ ಏರಿಕೆಯಾಗಿದೆ. ಈ ಪೈಕಿ 4,53,398 ಜನರು ಗುಣಮುಖರಾಗಿ ಡಿಸ್​ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 70 ಜನರ ಬಲಿ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 5,382 ಜನರು ಸಾವನ್ನಪ್ಪಿದ್ದಾರೆ. 1,24,894 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಒಟ್ಟು 116 ಜನರು ಸಾವನ್ನಪ್ಪಿದ್ದಾರೆ. ಈ ಪೈಕಿ ಅತಿಹೆಚ್ಚು ಮಂದಿ ಅಂದರೆ 70 ಜನರು ಬೆಂಗಳೂರು ನಗರ ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ. ಕಲಬುರಗಿ, 8, ಮೈಸೂರು 7, ಬೀದರ್ 5, ಬಳ್ಳಾರಿ 4, ಹಾಸನ 3, ವಿಜಯಪುರ, ರಾಮನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಲಾ ಇಬ್ಬರು, ಉತ್ತರ ಕನ್ನಡ, ಯಾದಗಿರಿ, ತುಮಕೂರು, ಶಿವಮೊಗ್ಗ, ರಾಯಚೂರು, ಕೋಲಾರ, ಕೊಡಗು, ಹಾವೇರಿ, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿಗೆ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು ಬೆಂಗಳೂರು ನಗರ 13,640, ತುಮಕೂರು 1176, ಬಳ್ಳಾರಿ 792, ಬೆಂಗಳೂರು ಗ್ರಾಮಾಂತರ 544, ದಕ್ಷಿಣ ಕನ್ನಡ 401, ಮೈಸೂರು 975, ಕಲಬುರಗಿ 757, ಹಾಸನ 445, ಮಂಡ್ಯ 492, ಉಡುಪಿ 471, ಧಾರವಾಡ 379, ಕೋಲಾರ 369, ವಿಜಯಪುರ 335, ಬೆಳಗಾವಿ 301, ಶಿವಮೊಗ್ಗ 266, ಚಿಕ್ಕಬಳ್ಳಾಪುರ 221, ರಾಯಚೂರು 220, ಬೀದರ್ 202, ದಾವಣಗೆರೆ 200, ಚಿಕ್ಕಮಗಳೂರು 198, ಉತ್ತರ ಕನ್ನಡ 171, ಚಾಮರಾಜನಗರ 170, ಬಾಗಲಕೋಟೆ 153, ಕೊಡಗು 141, ಕೊಪ್ಪಳ 133, ಚಿತ್ರದುರ್ಗ 118, ಯಾದಗಿರಿ 99, ರಾಮನಗರ 90, ಗದಗ 72, ಹಾವೇರಿ 27.

(Coronavirus 23558 people infected 116 deaths due to covid 19 in Karnataka)

ಇದನ್ನೂ ಓದಿ: Coronavirus India Update: ದೇಶದಲ್ಲಿ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 2.95 ಲಕ್ಷ , ಕಳೆದ 24 ಗಂಟೆಗಳಲ್ಲಿ 2,203 ಮಂದಿ ಸಾವು

ಇದನ್ನೂ ಓದಿ: Covid-19 Vaccine: ಮೇ 1ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ಕೊವಿಡ್ ಲಸಿಕೆ

Published On - 6:50 pm, Wed, 21 April 21

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು