ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ (ಮೇ 3) ಒಟ್ಟು 44,438 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 239 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 22,112 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 115 ಜನರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16,46,303ಕ್ಕೆ (16.46 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ 239 ಜನರ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 16,250ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 11,85,299 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 4,44,734 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 22,112 ಜನರಿಗೆ ಸೋಂಕು ದೃಢಪಟ್ಟಿದೆ. ನಗರದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 8,19,404ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿಂದು ಕೊರೊನಾ ಸೋಂಕಿಗೆ 115 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 6716ಕ್ಕೆ ಏರಿಕೆಯಾಗಿದೆ. 8,19,404 ಸೋಂಕಿತರ ಪೈಕಿ 5,17,770 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,94,917 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದಿನ 03/05/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/3IkBReDU6R @CMofKarnataka @BSYBJP @mla_sudhakar @drashwathcn @RAshokaBJP @BSBommai @CPBlr @PIBBengaluru @KarnatakaVarthe @PIBBengaluru @BBMPCOMM @BlrCityPolice @blrcitytraffic pic.twitter.com/wNb0Zw8SXB
— K’taka Health Dept (@DHFWKA) May 3, 2021
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ, 22,112 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಮೈಸೂರು 2685, ತುಮಕೂರು 2361 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ 2 ಸಾವಿರ ಮೀರಿದೆ. ಮಂಡ್ಯ 1367, ಹಾಸನ 1673, ಧಾರವಾಡ 1021, ಕಲಬುರಗಿ 1083 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಬಾಗಲಕೋಟೆ 569, ಬಳ್ಳಾರಿ 990, ಬೆಳಗಾವಿ 559, ಬೆಂಗಳೂರು ಗ್ರಾಮಾಂತರ 815, ಬೀದರ್ 396, ಚಾಮರಾಜನಗರ 724, ಚಿಕ್ಕಬಳ್ಳಾಪುರ 886, ಚಿಕ್ಕಮಗಳೂರು 206, ಚಿತ್ರದುರ್ಗ 151, ದಕ್ಷಿಣ ಕನ್ನಡ 793, ದಾವಣಗೆರೆ 104, ಗದಗ 191, ಹಾವೇರಿ 330, ಕೊಡಗು 628, ಕೋಲಾರ 656, ಕೊಪ್ಪಳ 617, ರಾಯಚೂರು 529, ರಾಮನಗರ 492, ಶಿವಮೊಗ್ಗ 584, ಉಡುಪಿ 529, ಉತ್ತರ ಕನ್ನಡ 776, ವಿಜಯಪುರ 274, ಯಾದಗಿರಿ 337 ಜನರಲ್ಲಿ ಸೋಂಕು ದೃಢಪಟ್ಟಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು?
ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 239 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ 115, ಚಾಮರಾಜನಗರ 19, ಮೈಸೂರು 14, ಹಾಸನ 13, ಬಳ್ಳಾರಿ 13, ತುಮಕೂರು 8, ಶಿವಮೊಗ್ಗ 7, ಕಲಬುರಗಿ, ಚಿಕ್ಕಬಳ್ಳಾಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಐವರು ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ, ಧಾರವಾಡ, ಚಿತ್ರದುರ್ಗ ಜಿಲ್ಲೆಗಳಲ್ಲಿ ತಲಾ ನಾಲ್ವರು, ಬೀದರ್, ದಾವಣಗೆರೆ, ಕೋಲಾರ, ರಾಮನಗರ, ವಿಜಯಪುರ ಜಿಲ್ಲೆಗಳಲ್ಲಿ ಸೋಂಕಿನಿಂದ ತಲಾ ಮೂವರು ಸಾವನ್ನಪ್ಪಿದ್ದಾರೆ. ಹಾವೇರಿ, ರಾಯಚೂರು ಜಿಲ್ಲೆಯಲ್ಲಿ ತಲಾ ಇಬ್ಬರು, ಯಾದಗಿರಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 16,250.
(Coronavirus 44438 people infected 239 died of covid-19 infection in Karnataka on May 3)
ಇದನ್ನೂ ಓದಿ: Coronavirus India Update: ದೇಶದಲ್ಲಿ 3.68 ಲಕ್ಷ ಹೊಸ ಕೊವಿಡ್ ಪ್ರಕರಣ, 2 ಕೋಟಿ ಸನಿಹಕ್ಕೆ ಸೋಂಕಿತರ ಸಂಖ್ಯೆ
ಇದನ್ನೂ ಓದಿ: Explainer: ಏನಿದು ವೈದ್ಯಕೀಯ ಆಮ್ಲಜನಕ? ಇದನ್ನು ಉತ್ಪಾದಿಸುವುದು ಹೇಗೆ?
Published On - 8:07 pm, Mon, 3 May 21