ದೇಶದಲ್ಲಿ ಕೊರೊನಾ 4ನೇ ಅಲೆ ಭೀತಿ, ಬೆಂಗಳೂರು ಸೇರಿ 5 ಮಹಾನಗರದಲ್ಲಿ ಹೆಚ್ಚುತ್ತಿರುವ ಸೋಂಕು ಪ್ರಕರಣಗಳು

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Apr 29, 2022 | 10:15 AM

ಭಾರತದಲ್ಲಿ ಕೊರೊನಾ ಸೋಂಕಿನ 4ನೇ ಅಲೆ ಕಾಣಿಸಿಕೊಳ್ಳುವ ಭೀತಿ ಎದುರಾಗಿದ್ದು, ಐದು ಪ್ರಮುಖ ಮಹಾನಗರಗಳಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ.

ದೇಶದಲ್ಲಿ ಕೊರೊನಾ 4ನೇ ಅಲೆ ಭೀತಿ, ಬೆಂಗಳೂರು ಸೇರಿ 5 ಮಹಾನಗರದಲ್ಲಿ ಹೆಚ್ಚುತ್ತಿರುವ ಸೋಂಕು ಪ್ರಕರಣಗಳು
ಸಾಂಕೇತಿಕ ಚಿತ್ರ
Follow us on

ದೆಹಲಿ: ಭಾರತದಲ್ಲಿ ಕೊರೊನಾ ಸೋಂಕಿನ 4ನೇ ಅಲೆ ಕಾಣಿಸಿಕೊಳ್ಳುವ ಭೀತಿ ಎದುರಾಗಿದ್ದು, ಐದು ಪ್ರಮುಖ ಮಹಾನಗರಗಳಲ್ಲಿ ದಿನದಿಂದ ದಿನಕ್ಕೆ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ. 2 ಮಹಾನಗರಗಳಲ್ಲಿ ಒಂದೇ ದಿನ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ದೆಹಲಿಯಲ್ಲಿ ಪ್ರಸ್ತುತ 4,508 ಸಕ್ರಿಯ ಸೋಂಕು ಪ್ರಕರಣಗಳಿದ್ದರೆ, ಬೆಂಗಳೂರಿನಲ್ಲಿ 1,648 ಕೊರೊನಾ ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಅತಿಹೆಚ್ಚು ಸೋಂಕಿತರು ಇರುವ ನಗರಗಳ ಪೈಕಿ ದೆಹಲಿ ಮೊದಲ ಸ್ಥಾನದಲ್ಲಿದ್ದರೆ, ಬೆಂಗಳೂರು ಎರಡನೇ ಸ್ಥಾನದಲ್ಲಿದೆ. ಮುಂಬೈ (549 ಸೋಂಕಿತರು), ಚೆನ್ನೈ (244) ಮತ್ತು ಕೊಲ್ಕತ್ತಾ (272) ನಂತರದ ಸ್ಥಾನದಲ್ಲಿವೆ.

ಭಾರತದ ವಿವಿಧೆಡೆ ಕಳೆದ 24 ಗಂಟೆಗಳಲ್ಲಿ 3,377 ಜನರಲ್ಲಿ ಸೋಂಕು ದೃಢಪಟ್ಟಿದೆ. 2,496 ಸೋಂಕಿತರು ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 60 ಜನರು ಸೋಂಕಿನಿಂದ ಜೀವ ಕಳೆದುಕೊಂಡಿದ್ದಾರೆ. ಪ್ರಸ್ತುತ ದೇಶದಲ್ಲಿ 17,801 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ದೇಶದ ಒಟ್ಟಾರೆ ಪಾಸಿಟಿವಿಟಿ ಪ್ರಮಾಣವು ಶೇ 0.71ರಷ್ಟಿದೆ.

ಕರ್ನಾಟಕದಲ್ಲಿ ನಿನ್ನೆ ಒಟ್ಟು 154 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 116 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ಒಟ್ಟು 10,319 ಮಂದಿಯ ಮಾದರಿಯನ್ನು ತಪಾಸಣೆಗೆ ಒಳಪಡಿಸಲಾಯಿಉತ. ಸರಾಸರಿ ಪಾಸಿಟಿವಿಟಿ ಪ್ರಮಾಣ ಶೇ 1.49 ಮುಟ್ಟಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 39,47,363 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 39,0,5,513 ಮಂದಿ ಚೇತರಿಸಿಕೊಂಡಿದ್ದಾರೆ. ಒಟ್ಟು 40,057 ಮಂದಿ ಸಾವನ್ನಪ್ಪಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 1,751 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: Health Tips: ಕೊರೊನಾ ವೈರಸ್ Vs ಅಲರ್ಜಿ; ಎರಡನ್ನೂ ಗುರುತಿಸುವುದು ಹೇಗೆ? ಯಾವಾಗ ಪರೀಕ್ಷೆ ಮಾಡಿಸಿಕೊಳ್ಳಬೇಕು?

ಇದನ್ನೂ ಓದಿ: ಭಾರತದಲ್ಲಿ ಕೊರೊನಾದಿಂದಾದ ಸಾವುಗಳ ಸಂಖ್ಯೆ ಮುಚ್ಚಿಡ ಲಾಗಿದೆಯೇ? ಮೇ 5ಕ್ಕೆ WHO ಕೊರೊನಾ ಸಾವಿನ ವರದಿ ಬಿಡುಗಡೆ