ಆಸ್ಪತ್ರೆ ಕಟ್ಟಡದಿಂದ ಹಾರಿ, ಕೊರೊನಾ ಸೋಂಕಿತ ಆತ್ಮಹತ್ಯೆ, ಎಲ್ಲಿ?

ಬೆಂಗಳೂರು: ಆಸ್ಪತ್ರೆ ಕಟ್ಟಡದಿಂದ ಬಿದ್ದು ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷದ 466ನೇ ಕೊರೊನಾ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿರುವುದು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟ್ರಾಮಾ ಕೇರ್ 3ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೋಂಕಿತ ವ್ಯಕ್ತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಜೊತೆಗೆ, ಕಿಡ್ನಿ ವೈಫಲ್ಯದಿಂದಲೂ ಅವರು ಬಳಲುತ್ತಿದ್ದರು. ನಿನ್ನೆ ಸೋಂಕಿತ ವ್ಯಕ್ತಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು. ಆಟೋ ಡ್ರೈವರ್: ಆತ್ಮಹತ್ಯೆ ಮಾಡಿಕೊಂಡಿರುವಾತ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದರು. ಕಳೆದ 4 ವರ್ಷದಿಂದ ಅವರ ಕಿಡ್ನಿ […]

ಆಸ್ಪತ್ರೆ ಕಟ್ಟಡದಿಂದ ಹಾರಿ, ಕೊರೊನಾ ಸೋಂಕಿತ ಆತ್ಮಹತ್ಯೆ,  ಎಲ್ಲಿ?

Updated on: Apr 27, 2020 | 10:15 AM

ಬೆಂಗಳೂರು: ಆಸ್ಪತ್ರೆ ಕಟ್ಟಡದಿಂದ ಬಿದ್ದು ಕೊರೊನಾ ಸೋಂಕಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 50 ವರ್ಷದ 466ನೇ ಕೊರೊನಾ ಸೋಂಕಿತ ಆತ್ಮಹತ್ಯೆ ಮಾಡಿಕೊಂಡಿರುವುದು. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಟ್ರಾಮಾ ಕೇರ್ 3ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಸೋಂಕಿತ ವ್ಯಕ್ತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಜೊತೆಗೆ, ಕಿಡ್ನಿ ವೈಫಲ್ಯದಿಂದಲೂ ಅವರು ಬಳಲುತ್ತಿದ್ದರು. ನಿನ್ನೆ ಸೋಂಕಿತ ವ್ಯಕ್ತಿ ಡಯಾಲಿಸಿಸ್ ಮಾಡಿಸಿಕೊಂಡಿದ್ದರು.

ಆಟೋ ಡ್ರೈವರ್:
ಆತ್ಮಹತ್ಯೆ ಮಾಡಿಕೊಂಡಿರುವಾತ ಆಟೋ ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದರು. ಕಳೆದ 4 ವರ್ಷದಿಂದ ಅವರ ಕಿಡ್ನಿ ವೈಫಲ್ಯವಾಗಿತ್ತು. ಬೆಂಗಳೂರಿನಲ್ಲಿ ಅಣ್ಣನ ಮನೆಯಲ್ಲಿ ವಾಸವಾಗಿದ್ದರು. ವ್ಯಕ್ತಿಗೆ ಕೊರೊನಾ ಹಿನ್ನೆಲೆ ಕುಟುಂಬಸ್ಥರನ್ನು ಹೋಟೆಲ್ ಕ್ವಾರಂಟೈನ್ ಮಾಡಲಾಗಿದೆ.

Published On - 9:41 am, Mon, 27 April 20