Covid-19 Karnataka Update: ಕರ್ನಾಟಕದಲ್ಲಿ ಇಂದು 39,047 ಜನರಿಗೆ ಕೊರೊನಾ ಸೋಂಕು, 137 ಸಾವು

|

Updated on: Apr 28, 2021 | 7:24 PM

ಬೆಂಗಳೂರಿನಲ್ಲಿ 22,596 ಜನರಿಗೆ ಸೋಂಕು ದೃಢಪಟ್ಟಿದ್ದು, 137 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 7,10,347ಕ್ಕೆ ಏರಿಕೆಯಾಗಿದೆ. ಈ ಪೈಕಿ 4,80,055 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Covid-19 Karnataka Update: ಕರ್ನಾಟಕದಲ್ಲಿ ಇಂದು 39,047 ಜನರಿಗೆ ಕೊರೊನಾ ಸೋಂಕು, 137 ಸಾವು
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿನ ಅಂಕಿಗಳು ಬುಧವಾರ ಮತ್ತೊಂದು ದಾಖಲೆ ಬರೆದಿವೆ. ರಾಜ್ಯದಲ್ಲಿ ಒಟ್ಟು 39,047 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 229 ಜನರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 22,596 ಜನರಿಗೆ ಸೋಂಕು ದೃಢಪಟ್ಟಿದ್ದು, 137 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 14,39,822ಕ್ಕೆ (14.39 ಲಕ್ಷ) ಏರಿಕೆಯಾಗಿದೆ. ಈ ಪೈಕಿ 10,95,883 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 229 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 15,036ಕ್ಕೆ ಏರಿಕೆಯಾಗಿದೆ. 3,28,884 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 22,596 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 7,10,347ಕ್ಕೆ ಏರಿಕೆಯಾಗಿದೆ. ಈ ಪೈಕಿ 4,80,055 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 137 ಜನರ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ ಸತ್ತವರ ಒಟ್ಟು ಸಂಖ್ಯೆ 6,139ಕ್ಕೆ ಏರಿಕೆಯಾಗಿದೆ. 224152 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ರಾಜ್ಯದಲ್ಲಿಂದು ಹೊಸದಾಗಿ 39,047 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 22,596 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಉಳಿದಂತೆ 5 ಜಿಲ್ಲೆಗಳಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೈಸೂರು 1759, ಕೋಲಾರ 1194, ತುಮಕೂರು 1174, ಬಳ್ಳಾರಿ 1106, ಹಾಸನ 1001 ಜನರಲ್ಲಿ ಸೋಂಕು ದೃಢಪಟ್ಟಿದೆ.

ಮಂಡ್ಯ 935, ಕಲಬುರಗಿ 901, ಬೆಂಗಳೂರು ಗ್ರಾಮಾಂತರ 732, ಚಿಕ್ಕಬಳ್ಳಾಪುರ 683, ದಕ್ಷಿಣ ಕನ್ನಡ 664, ಉಡುಪಿ 664, ಧಾರವಾಡ 654, ರಾಯಚೂರು 511, ಕೊಪ್ಪಳ 444, ಚಾಮರಾಜನಗರ 424, ವಿಜಯಪುರ 394, ಕೊಡಗು 388, ಬೆಳಗಾವಿ 360, ಬಾಗಲಕೋಟೆ 333, ಶಿವಮೊಗ್ಗ 333, ಉತ್ತರ ಕನ್ನಡ 301, ಯಾದಗಿರಿ 295, ಚಿಕ್ಕಮಗಳೂರು 297, ಬೀದರ್ 269, ದಾವಣಗೆರೆ 196, ರಾಮನಗರ 164, ಗದಗ 129, ಚಿತ್ರದುರ್ಗ 110, ಹಾವೇರಿ 36 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು?
ಕರ್ನಾಟಕದಲ್ಲಿ ಕೊರೊನಾ ಇಂದು ಒಟ್ಟು 229 ಜನರು ಸಾವನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 137 ಜನರು ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ನಂತರದ ಸ್ಥಾನದಲ್ಲಿ ಮೈಸೂರು ಜಿಲ್ಲೆಯಿದೆ. ಅಲ್ಲಿ ಕೊರೊನಾ ಸೋಂಕಿಗೆ 11 ಜನರ ಬಲಿಯಾಗಿದ್ದಾರೆ.

ಮೈಸೂರಿನ ಸಮೀಪದಲ್ಲಿಯೇ ಇರುವ ಮಂಡ್ಯ ಜಿಲ್ಲೆಯಲ್ಲಿ 9, ಬಳ್ಳಾರಿ 8, ಬೀದರ್ 6, ಚಿಕ್ಕಮಗಳೂರು, ರಾಮನಗರ, ಶಿವಮೊಗ್ಗ, ತುಮಕೂರು, ಯಾದಗಿರಿ ಜಿಲ್ಲೆಗಳಲ್ಲಿ ಸೋಂಕಿಗೆ ತಲಾ ಐವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ, ಧಾರವಾಡ, ಕೋಲಾರ ಜಿಲ್ಲೆಗಳಲ್ಲಿ ತಲಾ ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಚಾಮರಾಜನಗರ, ದಾವಣಗೆರೆ, ಕಲಬುರಗಿ ತಲಾ ಮೂವರು, ಬಾಗಲಕೋಟೆ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಹಾವೇರಿ ಜಿಲ್ಲೆಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ರಾಯಚೂರು ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 15,036 ಜನರು ಮೃತಪಟ್ಟಿದ್ದಾರೆ.

(Coronavirus cases in Karnataka 39047 infection 137 deaths due to covid 19 on April 28)

ಇದನ್ನೂ ಓದಿ: Coronavirus India Update: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,293 ಕೊವಿಡ್ ರೋಗಿಗಳು ಸಾವು, ದೆಹಲಿಯಲ್ಲಿ ಆಕ್ಸಿಜನ್​ಗಾಗಿ ಪರದಾಟ

ಇದನ್ನೂ ಓದಿ: 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕೊವಿಡ್ ಲಸಿಕೆ ಪಡೆಯಲು ನೋಂದಣಿ ಆರಂಭ; ಕ್ರ್ಯಾಷ್ ಆಯ್ತು ಕೊವಿನ್ ಪೋರ್ಟಲ್

Published On - 7:09 pm, Wed, 28 April 21