Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ತಡೆಗೆ ಸರ್ಕಾರದಿಂದ ನೂತನ ಮಾರ್ಗಸೂಚಿ; ಏಪ್ರಿಲ್ 30ರ ವರೆಗೆ ಈ ನಿಯಮಗಳು ಅನ್ವಯ

ಏಪ್ರಿಲ್ 1ರಿಂದ ಏಪ್ರಿಲ್ 30ರ ವರೆಗೆ ಅನ್ವಯವಾಗುವಂತೆ ಹೊಸ ನಿಯಮಾವಳಿಗಳನ್ನು ಸೂಚಿಸಲಾಗಿದೆ. ಸಂತೆ, ವಾಹನಗಳಲ್ಲಿ ದೈಹಿಕ ಅಂತರ ಪಾಲಿಸುವುದು ಕಡ್ಡಾಯ ಮಾಡಲಾಗಿದೆ. ವಿಮಾನ, ರೈಲು ಸೇವೆ, ಮೆಟ್ರೋ ರೈಲಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಕೊರೊನಾ ತಡೆಗೆ ಸರ್ಕಾರದಿಂದ ನೂತನ ಮಾರ್ಗಸೂಚಿ; ಏಪ್ರಿಲ್ 30ರ ವರೆಗೆ ಈ ನಿಯಮಗಳು ಅನ್ವಯ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ganapathi bhat

Updated on:Apr 05, 2022 | 12:59 PM

ಬೆಂಗಳೂರು: ಗಣನೀಯವಾಗಿ ಏರಿಕೆಯಾಗುತ್ತಿರುವ ಕೊರೊನಾ ಪ್ರಕರಣಗಳನ್ನು ಹತೋಟಿಗೆ ತರಲು ರಾಜ್ಯ ಸರ್ಕಾರ ನೂತನ ಮಾರ್ಗಸೂಚಿಗಳನ್ನು ಸೂಚಿಸಿದೆ. ರಾಜ್ಯ ಸರ್ಕಾರದ ಹೊಸ ನಿಯಮಾವಳಿಗಳು ನಾಳೆಯಿಂದ (ಏಪ್ರಿಲ್ 1) ಜಾರಿಗೆ ಬರಲಿವೆ. ಏಪ್ರಿಲ್ 1ರಿಂದ ಏಪ್ರಿಲ್ 30ರ ವರೆಗೆ ಅನ್ವಯವಾಗುವಂತೆ ಹೊಸ ನಿಯಮಾವಳಿಗಳನ್ನು ಸೂಚಿಸಲಾಗಿದೆ. ಸಂತೆ, ವಾಹನಗಳಲ್ಲಿ ದೈಹಿಕ ಅಂತರ ಪಾಲಿಸುವುದು ಕಡ್ಡಾಯ ಮಾಡಲಾಗಿದೆ. ವಿಮಾನ, ರೈಲು ಸೇವೆ, ಮೆಟ್ರೋ ರೈಲಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ. ಕಂಟೇನ್ಮೆಂಟ್​ ಜೋನ್​​ನಲ್ಲಿ ಅನಗತ್ಯ ಚಟುವಟಿಕೆಗೆ ಬ್ರೇಕ್ ಹಾಕುವ ಬಗ್ಗೆ ಚಿಂತಿಸಲಾಗಿದೆ. ಅಗತ್ಯ ಸರಕು ಪೂರೈಕೆ ಹಾಗೂ ತುರ್ತು ಆರೋಗ್ಯ ಸೇವೆ ಹೊರತುಪಡಿಸಿ ಜನರ ಓಡಾಟ ನಿಯಂತ್ರಿಸಲು ಕ್ರಮ ಕೈಗೊಳ್ಳಲು ಹೇಳಲಾಗಿದೆ.

‌ನಾಳೆಯಿಂದ ಜಾರಿಯಾಗಲಿರುವ ಮಾರ್ಗಸೂಚಿಗಳು: > ಕಂಟೈನ್​ಮೆಂಟ್ ವಲಯಗಳಲ್ಲಿ ಅತ್ಯಗತ್ಯ ಚಟುವಟಿಕೆಗಳಿಗೆ ಮಾತ್ರ ಅವಕಾಶ > ಕಂಟೈನ್​ಮೆಂಟ್ ವಲಯದಲ್ಲಿ ಹೊರಗಡೆ ಹೋಗುವ ಹಾಗೂ ಒಳ ಬರುವ (ವಾಹನ) ಜನರ ಚಲನವಲನಗಳನ್ನು ನಿಯಂತ್ರಿಸಲು ಕಟ್ಟು ನಿಟ್ಟಾದ ಕ್ರಮ > ಈ ಉದ್ದೇಶಕ್ಕಾಗಿ ರಚಿಸಲಾಗಿರುವ ಕಣ್ಗಾವಲು ನಿರಂತರವಾಗಿ ಮನೆ-ಮನೆ ಪರಿಶೀಲನೆ > ನಿಗದಿ ಪಡಿಸಿರುವ ಶಿಷ್ಟಾಚಾರದೊಂದಿಗೆ ಪರೀಕ್ಷೆಗಳನ್ನು ನಡೆಸುವುದು > ಕೊವಿಡ್ ವ್ಯಕ್ತಿಯ ಸಂಪರ್ಕ ಹೊಂದಿರುವವರನ್ನ ಪಟ್ಟಿ ಮಾಡೋದು, ಪತ್ತೆ, ಗುರುತು, ಮತ್ತು 14 ದಿನಗಳವರೆಗೆ ನಿಗಾ ಇಡುವುದು > ILI /SARI ಪ್ರಕರಣಗಳನ್ನು ಆರೋಗ್ಯ ಸೌಲಭ್ಯ, ಮೊಬೈಲ್ ಕ್ಲಿನಿಕ್, ಬಫರ್ ವಲಯಗಳ ಫೀವರ್ ಕ್ಲಿನಿಕ್ ಮೂಲಕ ಕಣ್ಗಾವಲಿರಿಸುವುದು > ಬಿಬಿಎಂಪಿ, ಜಿಲ್ಲಾಡಳಿತ, ತಾಲ್ಲೂಕು ಪ್ರಾಧಿಕಾರಗಳು, ಪೊಲೀಸ್, ಮತ್ತು ಸ್ಥಳೀಯ ಪ್ರಾಧಿಕಾರಗಳು ಕಂಟೈನಮೆಂಟ್ ವಲಯಗಳ‌ ಮಾರ್ಗಸೂಚಿಗಳನ್ನ ಕಡ್ಡಾಯವಾಗಿ ಪಾಲಿಸತಕ್ಕದ್ದು. ಇದಕ್ಕೆ, ಸಂಬಂಧಪಟ್ಟ ಅಧಿಕಾರಿಗಳೇ ಹೊಣೆ > ಮಾಸ್ಕ್ ಧರಿಸದಿದ್ದರೆ ದಂಡ ನಗರಪಾಲಿಕೆ ವ್ಯಾಪ್ತಿ $ 250, ಇನ್ನಿತರ ಪ್ರದೇಶದಲ್ಲಿ $ 100 > ವಾರದ ಸಂತೆ, ಸಾರಿಗೆ, ಜನಸಂದಣಿ ಪ್ರದೇಶದಲ್ಲಿ ಕಟ್ಟುನಿಟ್ಟಾಗಿ ಸಾಮಾಜಿಕ ಅಂತ ಕಾಯ್ದು ಕೊಳ್ಳುವುದು > ಇವುಗಳ ಮೇಲೆ ಬಿಬಿಎಂಪಿ, ಜಿಲ್ಲಾಪ್ರಾಧಿಕಾರಗಳು, ಸ್ಥಳೀಯ ಪ್ರಾದಿಕಾರಗಳು ಜಾರಿಗೊಳಿಸತಕ್ಕದ್ದು > ವಿಮಾನಯಾನ, ರೈಲು, ಸೇವೆ, ಮತ್ತು ಮೆಟ್ರೋ, ಸಂಚಾರಕ್ಕೆ ಈಗಾಗಲೇ ಪ್ರಮಾಣಿತ ಕಾರ್ಯ ವಿಧಾನಗಳು ಜಾರಿ ಈ ನೂತನ ಮಾರ್ಗಸೂಚಿ ಸದ್ಯದ ಆದೇಶದಂತೆ ಒಂದು ತಿಂಗಳ ಅವಧಿಗೆ (ಏಪ್ರಿಲ್ 30ರವರೆಗೆ) ಅನ್ವಯವಾಗಲಿದೆ.

ಇದನ್ನೂ ಓದಿ: Karnataka Covid-19 Update: ಕರ್ನಾಟಕದಲ್ಲಿ 4225 ಮಂದಿಗೆ ಕೊರೊನಾ ಸೋಂಕು, 26 ಸಾವು

ಇದನ್ನೂ ಓದಿ: ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ: ರೋಗ ಇಲ್ಲದಿದ್ದರೂ ಲಸಿಕೆ ಪಡೆಯಲು ಅವಕಾಶ

Published On - 10:28 pm, Wed, 31 March 21

ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಥಾಯ್ ಪ್ರಧಾನಿಯಿಂದ ಮೋದಿಗೆ ದಿ ವರ್ಲ್ಡ್ ಟಿಪಿಟಕ ಗ್ರಂಥ ಉಡುಗೊರೆ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಯಡಿಯೂರಪ್ಪ ಜೊತೆ ಬಸ್ಸಲ್ಲಿ ಹೋಗಲು ಬಿಜೆಪಿ ನಾಯಕರಲ್ಲಿ ಪೈಪೋಟಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ಬ್ಯಾಂಕಾಕ್​ನಲ್ಲಿ ಥಾಯ್ ರಾಮಾಯಣ ವೀಕ್ಷಿಸಿದ ಪ್ರಧಾನಿ ಮೋದಿ
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
ವಕ್ಫ್ ಬಿಲ್​​ ಬಗ್ಗೆ ಮಾತಾಡುವ ರಾಜ್ಯ ಬಿಜೆಪಿಗೆ ನಾಚಿಕೆಯಾಗಬೇಕು: ಮುತಾಲಿಕ್
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
RCB vs GT: ನಾನು ಮ್ಯಾಚ್ ವಿನ್ನರ್ ಸಿರಾಜ್ ಅನ್ನು ಮಾತ್ರ ನಂಬುತ್ತೇನೆ..!
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಇಳಿವಯಸ್ಸಿನಲ್ಲೂ ಯಡಿಯೂರಪ್ಪ ಪಕ್ಷದ ಅತ್ಯಂತ ಪ್ರಭಾವಿ ನಾಯಕ
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್
ಸಿದ್ದಗಂಗಾ ಮಠದ ಜೊತೆ ನನ್ನ ಕುಟಂಬಕ್ಕೆ ಅವಿನಾಭಾವ ಸಂಬಂಧ: ಪರಮೇಶ್ವರ್
ಗುಜರಾತ್​ನಲ್ಲಿ ಐಎಎಫ್​ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು
ಗುಜರಾತ್​ನಲ್ಲಿ ಐಎಎಫ್​ನ ಜಾಗ್ವಾರ್ ಯುದ್ಧ ವಿಮಾನ ಪತನ, ಪೈಲಟ್ ಸಾವು
ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ
ಸೈಟು ಹಿಂತಿರುಗಿಸಿದ್ದು ಆದ ಪ್ರಮಾದವನ್ನು ಸಿಎಂ ಅಂಗೀಕರಿಸಿದಂತೆ: ವಿಜಯೇಂದ್ರ
ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ
ಮೋದಿ, ಮೋದಿ ಎಂದು ಜೈಕಾರ ಹಾಕಿ ಮೋದಿಯನ್ನು ಸ್ವಾಗತಿಸಿದ ಬ್ಯಾಂಕಾಕ್ ಜನ