ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ 1,210 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 16 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬುಲೆಟಿನ್ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,99,011ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾ ಸೋಂಕಿನಿಂದ 11,928 ಮಂದಿ ಸಾವಿಗೀಡಾಗಿದ್ದಾರೆ. ಚೇತರಿಕೆ ಪ್ರಮಾಣ ದಿನದಿಂದ ಏರಿಕೆಯಾಗುತ್ತಿರುವುದು ಜನರಲ್ಲಿ ಭರವಸೆ ಮೂಡಿಸಿದೆ.
ಕೊರೊನಾ ಸೋಂಕಿತರಾಗಿದ್ದ ಒಟ್ಟು 8,68,471 ಮಂದಿ ಈವರೆಗೆ ಚೇತರಿಸಿಕೊಂಡಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 18,593 ಸಕ್ರಿಯ ಪ್ರಕರಣಗಳಿದ್ದು, ಐಸಿಯುನಲ್ಲಿ 253 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ 635 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಹಾವೇರಿಯಲ್ಲಿ ಅತಿಕಡಿಮೆ ಅಂದರೆ ಒಬ್ಬರಲ್ಲಿ ಸೋಂಕು ದೃಡಪಟ್ಟಿದೆ. ಉಳಿದಂತೆ ಮೈಸೂರು (44), ಮಂಡ್ಯ (26), ಹಾಸನ (45), ತುಮಕೂರು (27), ಚಿಕ್ಕಬಳ್ಳಾಪುರ (52), ಬೆಂಗಳೂರು ಗ್ರಾಮಾಂತರ (35) ಜಿಲ್ಲೆಗಳಲ್ಲಿ ಒಂದೇ ದಿನ ಸೋಂಕಿತರ ಸಂಖ್ಯೆ ಎರಡಂಕಿ ದಾಟಿದೆ.
Explainer | ಫೈಝರ್ ಲಸಿಕೆ ಹಾಕಿಸಿಕೊಂಡವರು ಕೊರೊನಾ ಸೋಂಕಿನಿಂದ ಎಷ್ಟು ಸೇಫ್?