Covid-19 Karanataka Update: ಕರ್ನಾಟಕದಲ್ಲಿ ಒಂದೇ ದಿನ 2,792 ಮಂದಿಯಲ್ಲಿ ಕೊರೊನಾ ಸೋಂಕು ದೃಢ

ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ 16 ಜನರ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 12,520ಕ್ಕೆ ಏರಿಕೆಯಾಗಿದೆ.

Covid-19 Karanataka Update: ಕರ್ನಾಟಕದಲ್ಲಿ ಒಂದೇ ದಿನ 2,792 ಮಂದಿಯಲ್ಲಿ ಕೊರೊನಾ ಸೋಂಕು ದೃಢ
ಕೊರೊನಾ ಸೋಂಕು
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Mar 29, 2021 | 11:13 PM

ಬೆಂಗಳೂರು: ಕರ್ನಾಟಕದಲ್ಲಿ ಸೋಮವಾರ (ಮಾರ್ಚ್ 29) ಹೊಸದಾಗಿ 2,792 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 9,89,804ಕ್ಕೆ (9.89 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ 16 ಜನರ ಸಾವನ್ನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 12,520ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 9,53,416 (9.53 ಲಕ್ಷ) ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 23,849 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 1,742 ಜನರಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 4,29,915ಕ್ಕೆ (4.29 ಲಕ್ಷ) ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 9 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಬೆಂಗಳೂರಲ್ಲಿ ಕೊರೊನಾಗೆ ಈವರೆಗೆ 4,590 ಜನರು ಸಾವನ್ನಪ್ಪಿದಂತೆ ಆಗಿದೆ.

ಉಡುಪಿ ಜಿಲ್ಲೆಯಲ್ಲಿ ಇಂದು 71 ಜನರಿಗೆ ಕೊರೊನಾ ದೃಢಪಟ್ಟಿದೆ. ಮಣಿಪಾಲದ ಎಂಐಟಿ ಕ್ಯಾಂಪಸ್​​ನಲ್ಲಿಂದು 41 ಕೇಸ್​ ಪತ್ತೆಯಾಗಿದೆ. ಎಂಐಟಿ ಕ್ಯಾಂಪಸ್​ನಲ್ಲಿ ಸೋಂಕಿತರ ಸಂಖ್ಯೆ 953ಕ್ಕೇರಿಕೆಯಾಗಿದೆ.

ಮೈಸೂರು ಜಿಲ್ಲೆಯಲ್ಲಿಂದು 110 ಜನರಿಗೆ ಕೊರೊನಾ ದೃಢಪಟ್ಟಿದೆ. ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 55,557ಕ್ಕೆ ಏರಿಕೆಯಾಗಿದೆ. ಈ ಪೈಕಿ 53,888 ಜನರು ಗುಣಮುಖರಾಗಿದ್ದಾರೆ. ಸೋಂಕಿತರ ಸಂಪರ್ಕದಿಂದ 77 ಜನರಿಗೆ ಕೊರೊನಾ ಬಂದಿರುವುದು ದೃಢಪಟ್ಟಿದೆ. ನೆಗಡಿ, ಕೆಮ್ಮು, ಜ್ವರವಿದ್ದ 27 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. 6 ಸೋಂಕಿತರಲ್ಲಿ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಮೈಸೂರು ಜಿಲ್ಲೆಯಲ್ಲಿಂದು ಕೊರೊನಾದಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಈವರೆಗೆ ಕೊರೊನಾದಿಂದ 1,051 ಜನರ ಸಾವನ್ನಪ್ಪಿದ್ದಾರೆ.

ಹಾಸನ ಜಿಲ್ಲೆಯಲ್ಲಿ ಇಂದು ಕೊರೊನಾಗೆ ಮೂವರು ಬಲಿಯಾಗಿದ್ದಾರೆ. ತಿಂಗಳುಗಳ ಬಳಿಕ ಕೊರೊನಾಗೆ ಒಂದೇ ದಿನ ಮೂವರು ಬಲಿ. ಜಿಲ್ಲೆಯಲ್ಲಿ ಇಂದು ಹೊಸದಾಗಿ 35 ಜನರಿಗೆ ಸೋಂಕು ದೃಢಪಟ್ಟಿದೆ. ಹಾಸನ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,341ಕ್ಕೆ ಏರಿಕೆಯಾಗಿದೆ. ಹಾಸನ ಜಿಲ್ಲೆಯಲ್ಲಿ ಈವರೆಗೆ ಕೊರೊನಾಗೆ 471 ಜನರು ಕೊರೊನಾದಿಂದ ಮೃತಪಟ್ಟಿದ್ದಾರೆ.

Covid-19-Karnataka

ಕರ್ನಾಟಕದಲ್ಲಿ ಮಾರ್ಚ್ 29, 2021ರ ಕೊರೊನಾ ಸೋಂಕು ಪ್ರಕರಣಗಳ ವಿವರ

ಇದನ್ನೂ ಓದಿ: Tv9 Digital Live | ಕೊರೊನಾ 2ನೇ ಅಲೆಯಿಂದ ಮಕ್ಕಳನ್ನು ಕಾಪಾಡುವುದು ಹೇಗೆ?

ಇದನ್ನೂ ಓದಿ: ಕೊರೊನಾ ನಿಯಂತ್ರಣಕ್ಕೆ ಜನರ ಅಸಹಕಾರ; ಸೂಕ್ತ ಕ್ರಮ ಕೈಗೊಳ್ಳಲು ಪೊಲೀಸರಿಗೆ ಸಿಎಂ ಸೂಚನೆ

Published On - 11:09 pm, Mon, 29 March 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ