ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧೆಡೆ 1,203 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 11 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬುಲೆಟಿನ್ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,00,214 ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾ ಸೋಂಕಿನಿಂದ 11,929 ಮಂದಿ ಸಾವಿಗೀಡಾಗಿದ್ದಾರೆ. ಚೇತರಿಕೆ ಪ್ರಮಾಣ ದಿನದಿಂದ ಏರಿಕೆಯಾಗುತ್ತಿರುವುದು ಜನರಲ್ಲಿ ಭರವಸೆ ಮೂಡಿಸಿದೆ.
ಕೊರೊನಾ ಸೋಂಕಿತರಾಗಿದ್ದ ಒಟ್ಟು 8,70,002 ಮಂದಿ ಈವರೆಗೆ ಚೇತರಿಸಿಕೊಂಡಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 1,82,54 ಸಕ್ರಿಯ ಪ್ರಕರಣಗಳಿದ್ದು, ಐಸಿಯುನಲ್ಲಿ 244 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ 606 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ರಾಮನಗರದಲ್ಲಿ ಅತಿಕಡಿಮೆ ಅಂದರೆ ಇಬ್ಬರಲ್ಲಿ ಸೋಂಕು ದೃಡಪಟ್ಟಿದೆ. ಉಳಿದಂತೆ ಮೈಸೂರು (59), ಮಂಡ್ಯ (25), ಹಾಸನ (26) ಸೇರಿ ಅನೇಕ ಜಿಲ್ಲೆಗಳಲ್ಲಿ ಒಂದೇ ದಿನ ಸೋಂಕಿತರ ಸಂಖ್ಯೆ ಎರಡಂಕಿ ದಾಟಿದೆ.
ಕೊರೊನಾ ಲಸಿಕೆ ಬಾಬತ್ತಿನಲ್ಲಿ APAC ರಾಷ್ಟ್ರಗಳಿಗೆ ADB ಸಂಸ್ಥೆಯಿಂದ 9 ಶತಕೋಟಿ ಡಾಲರ್ ಯೋಜನೆ ಜಾರಿ