AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಇಂದು 2,298 ಕೊರೊನಾ ಕೇಸ್ ಪತ್ತೆ; ಬೆಂಗಳೂರಲ್ಲೇ 1,398 ಕೊವಿಡ್ ಪಾಸಿಟಿವ್!

ಬೆಂಗಳೂರಲ್ಲಿ ಇಂದು ಒಂದೇ ದಿನ 1,398 ಜನರಿಗೆ ಸೋಂಕು ಪತ್ತೆಯಾಗಿದೆ. ತನ್ಮೂಲಕ ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,21,236ಕ್ಕೆ ಏರಿದೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 7 ಜನರು ಸಾವನ್ನಪ್ಪಿದ್ದಾರೆ.

ಕರ್ನಾಟಕದಲ್ಲಿ ಇಂದು 2,298 ಕೊರೊನಾ ಕೇಸ್ ಪತ್ತೆ; ಬೆಂಗಳೂರಲ್ಲೇ 1,398 ಕೊವಿಡ್ ಪಾಸಿಟಿವ್!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 05, 2022 | 1:15 PM

Share

ಬೆಂಗಳೂರು: ರಾಜ್ಯದಲ್ಲಿ ಇಂದು (ಮಾರ್ಚ್ 24) ಹೊಸದಾಗಿ 2,298 ಜನರಿಗೆ ಕೊರೊನಾ ಕಾಣಿಸಿಕೊಂಡಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9,75,955ಕ್ಕೆ ಏರಿಕೆಯಾಗಿದೆ ಹಾಗೂ ಕೊರೊನಾ ಸೋಂಕಿನಿಂದ 12 ಜನರ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಕೊರೊನಾಗೆ 12,461 ಜನರು ಬಲಿಯಾಗಿದ್ದಾರೆ. ಸೋಂಕಿತರ ಪೈಕಿ 9,46,589 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 16,886 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 1,398 ಜನರಿಗೆ ಸೋಂಕು ಪತ್ತೆಯಾಗಿದೆ. ತನ್ಮೂಲಕ ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 4,21,236ಕ್ಕೆ ಏರಿದೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 7 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೊನಾಗೆ ಇದುವರೆಗೆ 4,563 ಜನರು ಬಲಿಯಾಗಿದ್ದಾರೆ. ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಭಾರತದಲ್ಲಿ ರೂಪಾಂತರ ಕೊರೊನಾ ವೈರಾಣು ಪತ್ತೆಯಾಗಿದೆ. ಕರ್ನಾಟಕದ ನೆರೆಯ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ರೂಪಾಂತರಿ ಕೊರೊನಾ ಸೋಂಕು ಹರಡುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಮಹಾರಾಷ್ಟ್ರದಲ್ಲಿ ಸಾರ್ಸ್ ಕೋವ್-2 ಎಂಬ ಕೊರೊನಾ ರೂಪಾಂತರಿ ತಳಿ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ವೈರಸ್‌ನ ಇ484ಕ್ಯೂ, ಎಲ್‌452ಆರ್‌ ರೂಪಾಂತರಿ ಪತ್ತೆಯಾಗಿದ್ದು, ಟೆಸ್ಟಿಂಗ್ ವೇಳೆ ಶೇ. 15ರಿಂದ 20ರಷ್ಟು ಮಾದರಿಗಳಲ್ಲಿ ಈ ವೈರಾಣು ಕಾಣಿಸಿಕೊಂಡಿದೆ.

2020ರ ಕೊವಿಡ್-19 ತಳಿಗೂ ಈ ವರ್ಷದ ಕೊವಿಡ್ ತಳಿಗೂ ಹೋಲಿಕೆ ಮಾಡಲಾಗಿದೆ. ಕೊರೊನಾ ವೈರಸ್‌ನ ಇ484ಕ್ಯು ಮತ್ತು ಎಲ್‌452ಆರ್‌ ರೂಪಾಂತರಗಳು ಹೆಚ್ಚಿರುವುದು ಪತ್ತೆಯಾಗಿದೆ ಎಂದು ರೂಪಾಂತರ ವೈರಸ್ ಬಗ್ಗೆ ಆರೋಗ್ಯ ಸಚಿವಾಯ ಮಾಹಿತಿ ಹಂಚಿಕೊಂಡಿದೆ.

ಕೇರಳದ 14 ಜಿಲ್ಲೆಯ 2,032 ಮಾದರಿಗಳನ್ನು ಟೆಸ್ಟ್ ಗೆ ಒಳಪಡಿಸಲಾಗಿತ್ತು. ಈ ಪೈಕಿ ಕೊರೊನಾ ವೈರಸ್‌ನ n440k ರೂಪಾಂತರ ತಳಿಯು 11 ಜಿಲ್ಲೆಗಳ 123 ಮಾದರಿಗಳಲ್ಲಿ ಪತ್ತೆಯಾಗಿದೆ. ಈ ರೂಪಾಂತರ ವೈರಸ್‌ ತಳಿ 16 ರಾಷ್ಟ್ರಗಳಲ್ಲಿ ಪತ್ತೆಯಾಗಿದೆ. ಆದರೆ, ಕೊರೊನಾ ಪ್ರಕರಣಗಳ ದಿಢೀರ್‌ ಏರಿಕೆಗೂ ರೂಪಾಂತರ ತಳಿಗಳಿಗೂ ನೇರ ಸಂಬಂಧ ಇರೋದನ್ನು ಖಚಿತ ಪಡಿಸಲು ಸಾಧ್ಯವಿಲ್ಲ. ಇದಕ್ಕೆ ಇನ್ನಷ್ಟು ವಿಶ್ಲೇಷಣೆಗಳು ಆಗಬೇಕಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿರುವ ನಗರಗಳಲ್ಲಿ ಬೆಂಗಳೂರು ಹೆಸರು! ದೇಶದಲ್ಲಿ ಅತಿಹೆಚ್ಚು ಕೊವಿಡ್-19 ಪ್ರಕರಣಗಳು ಕಂಡುಬಂದಿರುವ ಹತ್ತು ಜಿಲ್ಲೆಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಗುರುತಿಸಿದೆ. ಪುಣೆ, ನಾಗ್ಪುರ, ಮುಂಬೈ, ಥಾಣೆ, ನಾಸಿಕ್, ಔರಂಗಾಬಾದ್, ನಂದೆಡ್, ಜಾಲ್​ಗಾಂವ್, ಅಕೊಲ ಮತ್ತು ಬೆಂಗಳೂರು ನಗರ ಈ ಪಟ್ಟಿಯಲ್ಲಿದೆ. ಮಹಾರಾಷ್ಟ್ರದ ಒಂಭತ್ತು ಜಿಲ್ಲೆ ಹಾಗೂ ಕರ್ನಾಟಕ ರಾಜಧಾನಿ ಬೆಂಗಳೂರನ್ನು ಕೂಡ ಗುರುತಿಸಲಾಗಿದೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಜಾರಿಗೊಳಿಸಿದೆ. ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯಗೊಳಿಸಲಾಗಿದೆ. ನೂತನ ನಿಯಮಾವಳಿ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ: ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಹೊಸ ನಿಯಮಾವಳಿ: ಮಾಸ್ಕ್ ಹಾಕದಿದ್ದರೆ ₹ 250 ದಂಡ!

ಇದನ್ನೂ ಓದಿ: ಭಾರತದಲ್ಲಿ ರೂಪಾಂತರಿ ಕೊರೊನಾ ಪತ್ತೆ, ಅತಿಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆಗಳ ಪಟ್ಟಿಯಲ್ಲಿ ಬೆಂಗಳೂರು

Published On - 8:08 pm, Wed, 24 March 21

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್