AY 4.2 Coronavirus: ಕರ್ನಾಟಕದಲ್ಲಿ ಹೊಸ ತಳಿಯ 2 ಕೊವಿಡ್ ಪ್ರಕರಣ ಪತ್ತೆ

| Updated By: ganapathi bhat

Updated on: Oct 27, 2021 | 9:20 PM

Covid19 AY 4.2: ರಾಜ್ಯದ ಇತರೆಡೆಯ ನಾಲ್ವರಲ್ಲಿ ಈ ರೂಪಾಂತರಿ ಪತ್ತೆಯಾಗಿರುವುದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಣದೀಪ್ ದೃಢಪಡಿಸಿದ್ದರು. ಹೊಸ ರೂಪಾಂತರಿಯಿಂದ ರಾಜ್ಯದಲ್ಲಿ ಈವರೆಗೆ ಯಾರೊಬ್ಬರೂ ಸಾವನ್ನಪ್ಪಿಲ್ಲ ಎಂದು ಅವರು ಹೇಳಿದ್ದರು.

AY 4.2 Coronavirus: ಕರ್ನಾಟಕದಲ್ಲಿ ಹೊಸ ತಳಿಯ 2 ಕೊವಿಡ್ ಪ್ರಕರಣ ಪತ್ತೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಹೊಸ ತಳಿಯ 2 ಕೊವಿಡ್ ಪ್ರಕರಣ ಪತ್ತೆ ಆಗಿದೆ. ಇಬ್ಬರಲ್ಲಿ AY 4.2 ತಳಿಯ ಕೊರೊನಾ ಸೋಂಕು ದೃಢವಾಗಿದೆ. ಹೊಸ ತಳಿ ಬಗ್ಗೆ ಎಚ್ಚರವಹಿಸುವಂತೆ ಕೇಂದ್ರ ಈಗಾಗಲೇ ನಿರ್ದೇಶನ ನೀಡಿದೆ. ವಿದೇಶಗಳಲ್ಲಿ ಕಂಡು ಬರುತ್ತಿರುವ ಕೊರೊನಾ ವೈರಾಣುವಿನ ಡೆಲ್ಟಾ ಎವೈ 4.2 ರೂಪಾಂತರಿ ಕರ್ನಾಟಕದಲ್ಲಿ ಪತ್ತೆಯಾಗಿತ್ತು. ಈ ಮೊದಲು, ಬೆಂಗಳೂರಿನ ಮೂವರು ಮತ್ತು ರಾಜ್ಯದ ಇತರೆಡೆಯ ನಾಲ್ವರಲ್ಲಿ ಈ ರೂಪಾಂತರಿ ಪತ್ತೆಯಾಗಿರುವುದನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಡಿ.ರಣದೀಪ್ ದೃಢಪಡಿಸಿದ್ದರು. ಹೊಸ ರೂಪಾಂತರಿಯಿಂದ ರಾಜ್ಯದಲ್ಲಿ ಈವರೆಗೆ ಯಾರೊಬ್ಬರೂ ಸಾವನ್ನಪ್ಪಿಲ್ಲ ಎಂದು ಅವರು ಹೇಳಿದ್ದರು.

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ನಿಯಂತ್ರಣದಲ್ಲಿವೆ. ವಿದೇಶಗಳಿಂದ ಬರುವ ಪ್ರವಾಸಿಗರು ಕನಿಷ್ಠ 72 ಗಂಟೆ ಮೊದಲು ಮಾಡಿಸಿಕೊಂಡಿರುವ ಆರ್​ಟಿ-ಪಿಸಿಆರ್ ಪರೀಕ್ಷೆಯ ವರದಿ ಹಾಜರುಪಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ವರದಿಗಳನ್ನು ಏರ್​ ಸುವಿಧಾ ಪೋರ್ಟಲ್​ನಲ್ಲಿ ಈ ವರದಿಗಳನ್ನು ಅಪ್​ಲೋಡ್ ಮಾಡಬೇಕು. ಇಷ್ಟು ಬಿಟ್ಟರೆ ರಾಜ್ಯದಲ್ಲಿ ಕ್ವಾರಂಟೈನ್​ನಂಥ ಕ್ರಮಗಳನ್ನು ಜಾರಿಗೊಳಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.

ಕರ್ನಾಟಕ ಕೊರೊನಾ ವರದಿ
ಕರ್ನಾಟಕ ರಾಜ್ಯದಲ್ಲಿ ಇಂದು (ಅಕ್ಟೋಬರ್ 27) ಹೊಸದಾಗಿ 282 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29,86,835 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 29,40,339 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 13 ಜನರ ಸಾವು ಸಂಭವಿಸಿದೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 38,037 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 8,430 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 142 ಜನರಿಗೆ ಕೊವಿಡ್-19 ಸೋಂಕು ದೃಢಪಟ್ಟಿದೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,51,155 ಕ್ಕೆ ಏರಿಕೆಯಾಗಿದೆ. 12,51,155 ಸೋಂಕಿತರ ಪೈಕಿ 12,28,469 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಮಂದಿ ಸಾವನ್ನಪ್ಪಿದ್ದಾರೆ. ಅದರಂತೆ, ನಗರದಲ್ಲಿ ಕೊರೊನಾದಿಂದ ಈವರೆಗೆ 16,259 ಜನರ ಸಾವು ಸಂಭವಿಸಿದೆ. ಬೆಂಗಳೂರಲ್ಲಿ 6,426 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಇದನ್ನೂ ಓದಿ: Karnataka Covid19 Update: ಕರ್ನಾಟಕದಲ್ಲಿ ಹೊಸದಾಗಿ 282 ಜನರಿಗೆ ಕೊರೊನಾ ದೃಢ; 13 ಮಂದಿ ಸಾವು

ಇದನ್ನೂ ಓದಿ: ಮಡಿಕೇರಿ: ನವೋದಯ ವಿದ್ಯಾಲಯದಲ್ಲಿ ಒಟ್ಟು 31 ಮಕ್ಕಳಿಗೆ ಕೊರೊನಾ ದೃಢ; ಶಾಲೆ ಸೀಲ್​ಡೌನ್

Published On - 9:19 pm, Wed, 27 October 21