ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳ; ಗ್ರಾಮ ಪಂಚಾಯತಿ ಅಧಿಕಾರಿಗಳ ಜೊತೆ ಬಿ.ಎಸ್. ಯಡಿಯೂರಪ್ಪ ಸಂವಾದ

ಬೆಳಗಾವಿ, ಬಳ್ಳಾರಿ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿನ‌ ಆಯ್ದ ಕೆಲ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಿಡಿಒಗಳ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಬುಧವಾರ ಸಂವಾದ ನಡೆಸಿದರು.

ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳ; ಗ್ರಾಮ ಪಂಚಾಯತಿ ಅಧಿಕಾರಿಗಳ ಜೊತೆ ಬಿ.ಎಸ್. ಯಡಿಯೂರಪ್ಪ ಸಂವಾದ
ಗ್ರಾಮ ಪಂಚಾಯತಿ ಅಧಿಕಾರಿಗಳ ಜೊತೆ ಬಿ.ಎಸ್. ಯಡಿಯೂರಪ್ಪ ಸಂವಾದ
Follow us
TV9 Web
| Updated By: ganapathi bhat

Updated on:Aug 21, 2021 | 9:46 AM

ಬೆಂಗಳೂರು: ಕೊರೊನಾ 2ನೇ ಅಲೆ ಮೊದಲಿಗಿಂತಲೂ ಹೆಚ್ಚು ಹಾನಿಕಾರಕವಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ತ್ವರಿತವಾಗಿ ವ್ಯಾಪಿಸುತ್ತಿದೆ. ಹಾಗಾಗಿ, ತುರ್ತು ನಿಯಂತ್ರಣಾ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕ ಎಂದು ತಿಳಿಸಿದರು. ಬೆಳಗಾವಿ, ಬಳ್ಳಾರಿ, ಶಿವಮೊಗ್ಗ, ಮೈಸೂರು ಜಿಲ್ಲೆಗಳಲ್ಲಿನ‌ ಆಯ್ದ ಕೆಲ ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಪಿಡಿಒಗಳ ಜೊತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ಮೂಲಕ ಬುಧವಾರ ಸಂವಾದ ನಡೆಸಿದರು.

ಮಾರ್ಗಸೂಚಿ, ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಹೆಚ್ಚು ಜನ ಸೇರುವ ಕಾರ್ಯಕ್ರಮಗಳನ್ನು ತಡೆಯಬೇಕು. ಕಾರ್ಯಕ್ರಮಗಳ ನಿಷೇಧ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ. ಹೆಲ್ಪ್ ​ಡೆಸ್ಕ್ ಹಾಗೂ ಸಹಾಯವಾಣಿ ಪ್ರಾರಂಭಿಸಬೇಕು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಸಭೆಯಲ್ಲಿ ಮುಖ್ಯಮಂತ್ರಿಗಳು ಕೆಲವು ಸೂಚನೆ ನೀಡಿದರು.

ಕೊರೊನಾ ಟಾಸ್ಕ್​ಫೋರ್ಸ್​ ಜೊತೆಗೆ ಕಾರ್ಯನಿರ್ವಹಿಸಲು ನೆರವು ಪಡೆಯಬಹುದು. ಸ್ಥಳೀಯ ಸ್ವಯಂಸೇವಾ ಸಂಸ್ಥೆ, ದಾನಿಗಳ ನೆರವು ಪಡೆಯಬಹುದು. ಮಕ್ಕಳು, ಮಹಿಳೆಯರು, ವಿಶೇಷ ಚೇತನರು ಹಾಗೂ ವೃದ್ಧರು ತೊಂದರೆಯಲ್ಲಿದ್ರೆ ಊಟದ ವ್ಯವಸ್ಥೆ ಮಾಡಬೇಕು. ಸೋಂಕಿತರು ಮೃತಪಟ್ಟು ಅವರು ಮಕ್ಕಳು ಅನಾಥರಾದರೆ ಅವರನ್ನು ಯಾರೂ ದತ್ತು ತೆಗೆದುಕೊಳ್ಳಲು ಬಿಡಬಾರದು. ಆ ಮಕ್ಕಳನ್ನು ಮಕ್ಕಳ ರಕ್ಷಣಾ ಸಮಿತಿಗಳಿಗೆ ಸೇರಿಸಬೇಕು. ಮನೆಗಳು ಸಣ್ಣದಿರುವ ಕುಟುಂಬಗಳಲ್ಲಿನ ಸೋಂಕಿತರನ್ನು ಕಡ್ಡಾಯವಾಗಿ ಕೊವಿಡ್​ ಕೇರ್​ ಸೆಂಟರ್​ಗೆ ದಾಖಲಿಸಬೇಕು ಎಂದು ಸಭೆಯಲ್ಲಿ ಯಡಿಯೂರಪ್ಪ ಸೂಚಿಸಿದರು.

ಗ್ರಾಮೀಣ ಪ್ರದೇಶದ ಹೋಂ ಐಸೋಲೇಟ್ ಕೊವಿಡ್ ಸೋಂಕಿತರಿಗೆ ಆಹಾರ ಮತ್ತು ಔಷಧಿ ಕಿಟ್ ನೀಡಿ ಗ್ರಾಮೀಣ ಪ್ರದೇಶಗಳಲ್ಲಿ ಹೋಮ್ ಐಸೋಲೇಷನ್​ನಲ್ಲಿರುವ ಕೊವಿಡ್ ಸೋಂಕಿತರ ಕುಟುಂಬಗಳಿಗೆ ಆಹಾರ ಮತ್ತು ಔಷಧಿ ಕೊರತೆ ಆಗದಂತೆ ನೋಡಿಕೊಳ್ಳಿ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಪ್ರದೇಶದಲ್ಲಿ ಸೋಂಕಿತರ ಮನೆಗಳನ್ನು ಕಂಟೇನ್ಮೆಂಟ್ ಜೋನ್​ಗಳೆಂದು ಪರಿಗಣಿಸಲು ಸೂಚಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆ ಕುಟುಂಬಗಳಿಗೆ ಅಗತ್ಯ ಔಷಧಿ ಹಾಗೂ ಪಡಿತರ ವ್ಯವಸ್ಥೆ ಮಾಡಬೇಕು. ಆಹಾರ ಎಂದರೆ ಕೇವಲ ಅಕ್ಕಿ ಅಷ್ಟೇ ಅಲ್ಲ, ಬೇಳೆ, ಬೆಲ್ಲ, ಎಣ್ಣೆ, ಉಪ್ಪು ನೀಡಿ. ಒಟ್ಟಿನಲ್ಲಿ ಹೋಮ್ ಐಸೋಲೇಷನ್ ನಲ್ಲಿರುವ ಕುಟುಂಬಗಳು ಮನೆಯಿಂದ ಹೊರ ಬಾರದೆ ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದನ್ನು ಖಾತ್ರಿಪಡಿಸಿಕೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಕಿತರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚು ನಿಗಾ ವಹಿಸಿಕೊಳ್ಳಬೇಕು. ಉಸಿರಾಟದಲ್ಲಿ ಸ್ವಲ್ಪ ಏರುಪೇರು ಕಂಡು ಬಂದರೂ ತಕ್ಷಣ ಕೋವಿಡ್ ಕೇರ್ ಸೆಂಟರ್​ಗೆ ದಾಖಲಾಗಬೇಕು. ಮನೆಯಲ್ಲಿ ಐಸೋಲೇಷನ್ ಆಗಲು ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಇಲ್ಲದಿದ್ದರೂ ತಡ ಮಾಡದೇ ಕೋವಿಡ್ ಕೇರ್ ಸೆಂಟರ್​ಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗುವಂತೆ ಗ್ರಾಮೀಣ ಪ್ರದೇಶದ ಜನರಿಗೆ ಅರಿವು ಮೂಡಿಸಿ ಎಂದು ಸಭೆಯಲ್ಲಿ ಬೊಮ್ಮಾಯಿ ಗ್ರಾಮ ಪಂಚಾಯಿತಿಗಳ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಮನವಿ ಮಾಡಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 26,811 ಕೊರೊನಾ ಸೋಂಕಿತರು ಪತ್ತೆ; 530 ಮಂದಿ ಸಾವು

ಕೊವಿಡ್​ 19ನಿಂದ ಮೃತಪಟ್ಟ ಪತ್ರಕರ್ತರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 10 ಲಕ್ಷ ರೂ.ಗೆ ಏರಿಸಿದ ತಮಿಳುನಾಡಿನ ಸರ್ಕಾರ

Published On - 9:29 pm, Wed, 26 May 21