Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 16,068 ಜನರಿಗೆ ಕೊರೊನಾ ಸೋಂಕು ದೃಢ; 364 ಮಂದಿ ನಿಧನ

ಬೆಂಗಳೂರಲ್ಲಿ ಇಂದು ಒಂದೇ ದಿನ 3,221 ಜನರಿಗೆ ಸೋಂಕು ದೃಢವಾಗಿದೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 206 ಜನರು ಮೃತಪಟ್ಟಿದ್ದಾರೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 11,77,496ಕ್ಕೆ ಏರಿಕೆಯಾಗಿದೆ.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 16,068 ಜನರಿಗೆ ಕೊರೊನಾ ಸೋಂಕು ದೃಢ; 364 ಮಂದಿ ನಿಧನ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ganapathi bhat

Updated on:Jun 04, 2021 | 8:05 PM

ಬೆಂಗಳೂರು: ಕರ್ನಾಟಕದಲ್ಲಿ ಇಂದು (ಜೂನ್ 4) ಹೊಸದಾಗಿ 16,068 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 26,69,514ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 23,58,412 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ 364 ಜನರ ಸಾವು ಸಂಭವಿಸಿದೆ. ತನ್ಮೂಲಕ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 30,895 ಜನರ ಸಾವನ್ನಪ್ಪಿದ್ದಾರೆ. 2,80,186 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಲ್ಲಿ ಇಂದು ಒಂದೇ ದಿನ 3,221 ಜನರಿಗೆ ಸೋಂಕು ದೃಢವಾಗಿದೆ. ನಗರದಲ್ಲಿ ಇಂದು ಕೊರೊನಾ ಸೋಂಕಿಗೆ 206 ಜನರು ಮೃತಪಟ್ಟಿದ್ದಾರೆ. ಈ ಮೂಲಕ, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 11,77,496ಕ್ಕೆ ಏರಿಕೆಯಾಗಿದೆ. ಅದರಲ್ಲಿ 10,31,834 ಜನರು ಗುಣಮುಖ ಹೊಂದಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 14,482 ಜನರ ಸಾವು ಸಂಭವಿಸಿದೆ. 1,31,179 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾವಾರು ಕೊರೊನಾ ಪ್ರಕರಣಗಳ ವಿವರ ಬೆಂಗಳೂರು ನಗರ 3221, ಮೈಸೂರು 1265, ಹಾಸನ 974, ತುಮಕೂರು 857, ದಕ್ಷಿಣ ಕನ್ನಡ 806, ಬೆಳಗಾವಿ 792, ಚಿತ್ರದುರ್ಗ 702, ಶಿವಮೊಗ್ಗ 636, ದಾವಣಗೆರೆ 620, ಉತ್ತರ ಕನ್ನಡ 559, ಚಿಕ್ಕಮಗಳೂರು 595, ಉಡುಪಿ 561, ಮಂಡ್ಯ 526, ಬೆಂಗಳೂರು ಗ್ರಾಮಾಂತರ 429, ಬಳ್ಳಾರಿ 423, ಚಿಕ್ಕಬಳ್ಳಾಪುರ 400, ಕೊಡಗು 388, ಕೋಲಾರ 304, ಕೊಪ್ಪಳ 299, ಚಾಮರಾಜನಗರ 296, ಧಾರವಾಡ 235, ಬಾಗಲಕೋಟೆ 208, ಗದಗ 194, ವಿಜಯಪುರ 190, ರಾಯಚೂರು 184, ರಾಮನಗರ 146, ಹಾವೇರಿ 100, ಯಾದಗಿರಿ 93, ಕಲಬುರಗಿ 46 ಮತ್ತು ಬೀದರ್ ಜಿಲ್ಲೆಯಲ್ಲಿ 19 ಕೊರೊನಾ ಪ್ರಕರಣಗಳು ಕಂಡುಬಂದಿದೆ.

ಕೊರೊನಾದಿಂದ ಮೃತಪಟ್ಟವರ ಜಿಲ್ಲಾವಾರು ವಿವರ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 206 ಜನರ ಬಲಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ 18 ಜನರು, ಕೋಲಾರ ಜಿಲ್ಲೆಯಲ್ಲಿ 10 ಜನರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 9 ಜನರು, ಹಾಸನ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು ತಲಾ 9 ಜನ, ಬಳ್ಳಾರಿ, ದಾವಣಗೆರೆ ಜಿಲ್ಲೆಯಲ್ಲಿಂದು ತಲಾ 8 ಜನರು, ಶಿವಮೊಗ್ಗ ಜಿಲ್ಲೆಯಲ್ಲಿ 8 ಜನರು, ಹಾವೇರಿ ಜಿಲ್ಲೆಯಲ್ಲಿ 7 ಜನರು, ಬೆಳಗಾವಿ, ಕಲಬುರಗಿ ಜಿಲ್ಲೆಯಲ್ಲಿಂದು ತಲಾ 6 ಜನ, ಕೊಪ್ಪಳ, ತುಮಕೂರು ಜಿಲ್ಲೆಯಲ್ಲಿಂದು ತಲಾ 4, ಚಾಮರಾಜನಗರ, ಧಾರವಾಡ ಜಿಲ್ಲೆಯಲ್ಲಿ ತಲಾ 4, ಚಿಕ್ಕಬಳ್ಳಾಪುರ, ರಾಯಚೂರು ಜಿಲ್ಲೆಯಲ್ಲಿ ತಲಾ 4, ಚಿಕ್ಕಮಗಳೂರು, ರಾಮನಗರ ಜಿಲ್ಲೆಯಲ್ಲಿ ತಲಾ 4, ಉಡುಪಿ, ಗದಗ ಜಿಲ್ಲೆಯಲ್ಲಿ ಇಂದು ತಲಾ 3, ಮಂಡ್ಯ, ವಿಜಯಪುರ ಜಿಲ್ಲೆಯಲ್ಲಿಂದು ತಲಾ 2, ಬೀದರ್ ​​ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿಗೆ 2, ಯಾದಗಿರಿ, ಚಿತ್ರದುರ್ಗ ಜಿಲ್ಲೆಯಲ್ಲಿ ತಲಾ 1, ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 1 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಲಸಿಕೆ ನೀಡಿಕೆಯಲ್ಲಿ ಅಮೆರಿಕಾವನ್ನು ಹಿಂದಿಕ್ಕಿದ ಭಾರತ; ಶೀಘ್ರವೇ ಮಕ್ಕಳಿಗೂ ಲಸಿಕೆ: ವಿ ಕೆ ಪೌಲ್

ಕೊರೊನಾ ಲಸಿಕೆ ಖರೀದಿಗಾಗಿ ಗ್ಲೋಬಲ್ ಟೆಂಡರ್ ವಿಫಲ: ಒಗ್ಗೂಡಲು ಎಲ್ಲ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಜಗನ್ ಮೋಹನ್ ರೆಡ್ಡಿ

Published On - 7:52 pm, Fri, 4 June 21

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್