ರಾಜ್ಯದಲ್ಲಿ ಮಹಾಮಾರಿ ಕೊರೊನಾ​ಗೆ ಮತ್ತೊಂದು ಬಲಿ, ಮೃತರ ಸಂಖ್ಯೆ 20ಕ್ಕೆ ಏರಿಕೆ!

ರಾಜ್ಯದಲ್ಲಿ ಮಹಾಮಾರಿ ಕೊರೊನಾ​ಗೆ ಮತ್ತೊಂದು ಬಲಿ, ಮೃತರ ಸಂಖ್ಯೆ 20ಕ್ಕೆ ಏರಿಕೆ!
ಸಾಂದರ್ಭಿಕ ಚಿತ್ರ

ಕಲಬುರಗಿ: ಮಹಾಮಾರಿ ಕೊರೊನಾ ವೈರಸ್​ಗೆ ರಾಜ್ಯದಲ್ಲಿ ಮತ್ತೊಬ್ಬರು ಬಲಿಯಾಗಿದ್ದಾರೆ. ಕಲಬುರಗಿಯಲ್ಲಿ ಕೊರೊನಾ ಸೋಂಕಿನಿಂದ 57 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ. ಈವರೆಗೆ ಕಲಬುರಗಿ ಜಿಲ್ಲೆಯಲ್ಲಿ ಐವರು, ರಾಜ್ಯದಲ್ಲಿ 20 ಜನ ಸಾವಿಗೀಡಾಗಿದ್ದಾರೆ.

ಕಲಬುರಗಿಯ ESI ಆಸ್ಪತ್ರೆಯಲ್ಲಿ ಆಳಂದ ಮೂಲದ 422ನೇ ಸೋಂಕಿತ ಮೃತಪಟ್ಟಿದ್ದಾರೆ. ಏಪ್ರಿಲ್ 22ರಂದು ಈತನಿಗೆ ಕೊರೊನಾ ತಗುಲಿರುವುದು ದೃಢಪಟ್ಟಿತ್ತು. ಕೆಲ ವರ್ಷದಿಂದ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ.ಕೆ.ಸುಧಾಕರ್​ ಟ್ವೀಟ್ ಮಾಡಿದ್ದಾರೆ.

ಚಿಕಿತ್ಸೆಗಾಗಿ ಮಹಾರಾಷ್ಟ್ರದ ಸೊಲ್ಲಾಪುರಕ್ಕೆ ಹೋಗಿ ಬಂದಿದ್ದರು. ಬಳಿಕ ವ್ಯಕ್ತಿಗೆ ಕೊರೊನಾ ಸೋಂಕು ಲಕ್ಷಣ ಕಂಡುಬಂದಿತ್ತು. ನಂತರ ಕಲಬುರಗಿ ನಗರದ ಇಎಸ್​ಐ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈತ ಆಳಂದ ಪಟ್ಟಣದಲ್ಲಿ ಸೆಂಟ್ರಿಂಗ್ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ಇಂದು ಚಿಕಿತ್ಸೆ ಫಲಿಸದೆ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದಾರೆ.

Published On - 7:04 pm, Mon, 27 April 20

Click on your DTH Provider to Add TV9 Kannada