ಬೆಂಗಳೂರಿನಲ್ಲಿ ಕೇವಲ 24 ದಿನಗಳಲ್ಲಿ 1,093 ಮಂದಿ ಕೊರೊನಾ ಸೋಂಕಿಗೆ ಬಲಿ

ಸಪ್ಟೆಂಬರ್ 2020ರ ಒಂದು ತಿಂಗಳಿನಲ್ಲಿ ಕೊರೊನಾ ಮೊದಲನೇ ಅಲೆಯಲ್ಲಿ 971 ಜನರು ಬಲಿಯಾಗಿದ್ದರು. ಆದರೆ ಎರಡನೇ ಅಲೆಯಲ್ಲಿ 24 ದಿನದಲ್ಲಿ 1,093 ಜನ ಸವಿಗೀಡಾಗಿದ್ದಾರೆ.

ಬೆಂಗಳೂರಿನಲ್ಲಿ ಕೇವಲ 24 ದಿನಗಳಲ್ಲಿ 1,093 ಮಂದಿ ಕೊರೊನಾ ಸೋಂಕಿಗೆ ಬಲಿ
ಪ್ರಾತಿನಿಧಿಕ ಚಿತ್ರ
Follow us
shruti hegde
|

Updated on: Apr 25, 2021 | 10:37 AM

ಬೆಂಗಳೂರು: ದೇಶದಲ್ಲಿ ಕೊರೊನಾ ಎರಡನೇ ಅಲೆ ಆರ್ಭಟ ಹೆಚ್ಚಾಗುತ್ತಲೇ ಇದೆ. ದಿನ ಸಾಗುತ್ತಿದ್ದಂತೆಯೇ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚು ದಾಖಲಾಗುತ್ತಿದೆ. ದಿನೇ ದಿನೇ ಕೊರೊನಾ ವೈರಸ್​ ದಾಖಲೆ ಸೃಷ್ಟಿಸುತ್ತಿದೆ. ಕೇವಲ 24 ದಿನಗಳಲ್ಲಿ ಒಟ್ಟು 1,093 ಜನರನ್ನು ಬಲಿ ಪಡೆದಿದೆ. ಇದೇ ರೀತಿ ಮುಂದುವರೆದರೆ ಈ ತಿಂಗಳು ಏಪ್ರಿಲ್ ಅಂತ್ಯಕ್ಕೆ 2 ಸಾವಿರ ಜನ ಕೊರೊನಾ ಸೋಂಕಿಗೆ ಬಲಿಯಾಗುವಂತೆ ಅನಿಸುತ್ತಿದೆ. ಸಪ್ಟೆಂಬರ್ 2020ರ ಒಂದು ತಿಂಗಳಿನಲ್ಲಿ ಕೊರೊನಾ ಮೊದಲನೇ ಅಲೆಯಲ್ಲಿ 971 ಜನರು ಬಲಿಯಾಗಿದ್ದರು. ಆದರೆ ಎರಡನೇ ಅಲೆಯಲ್ಲಿ 24 ದಿನದಲ್ಲಿ 1,093 ಜನ ಸವಿಗೀಡಾಗಿದ್ದಾರೆ.

ಸೋಂಕಿತ ಪ್ರಕರಣ ಸಂಖ್ಯೆಯನ್ನು ನೋಡಿದಾಗ, ಮೊದಲ ಅಲೆಯಲ್ಲಿ ಒಂದು ದಿನಕ್ಕೆ ಗರಿಷ್ಟ 5,121 ಸೋಂಕಿತರು ಪತ್ತೆಯಾಗಿದ್ದರು. ಆದರೆ ಎರಡನೇ ಅಲೆಯಲ್ಲಿ ನಿತ್ಯ 17 ಸಾವಿರದಿಂದ 18 ಸಾವಿರ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಹೀಗೆ ಮುಂದುವರೆದರೆ ಗರಿಷ್ಠ ಎಲ್ಲಿಗೆ ತಲುಪುತ್ತೆ ಎಂಬ ಅಂದಾಜು ಮಾಡಲು ಸಾಧ್ಯವಾಗುತ್ತಿಲ್ಲ. ಕೊರೊನಾ ಸೋಂಕು ತಗುಲಿ ಸಾವಿಗೀಡಾಗುತ್ತಿರುವ ಜನರ ಸಂಖ್ಯೆಯನ್ನು ನೋಡುತ್ತಿದ್ದರೆ ಭಯಾನಕ ಸ್ಥಿತಿ ನಿರ್ಮಾಣವಾಗುತ್ತಿದೆ.

ಮಾರ್ಕೆಟ್​ಗಳೆಲ್ಲಾ ಬಂದ್

ಬೆಳಗ್ಗೆ 10 ಗಂಟೆ ಬಳಿಕ ಸಂಪೂರ್ಣ ಲಾಕ್‌ಡೌನ್ ಹಿನ್ನೆಲೆಯಲ್ಲಿ ಶಿವಾಜಿನಗರದಲ್ಲಿ ತೆರದಿರುವ ಅಂಗಡಿಗಳನ್ನು ಪೊಲೀಸರು ಮುಚ್ಚಿಸುತ್ತಿದ್ದಾರೆ. ನಗರದ ಮಾರ್ಕೆಟ್​ಗಳನ್ನು ಮುಚ್ಚಿಸಲಾಗುತ್ತಿದೆ. ಹಾಗೆಯೇ ಶ್ರೀರಾಂಮಪುರ ಮಾರ್ಕೆಟ್​ನಲ್ಲಿ ಬೆಳಿಗ್ಗೆಯಿಂದಲೆ ಭರದಿಂದ ವ್ಯಾಪಾರ ವಹಿವಾಟಿನಲ್ಲಿ ಸಾರ್ವಜನಿಕರು ತೊಡಗಿದ್ದರು. ನಗರದಲ್ಲಿರುವ ಮಾಂಸದ ಅಂಗಡಿಗೆ ಜನರು ಮುತ್ತಿಗೆ ಹಾಕಿದ್ದರು. ತಕ್ಷಣವೇ ಸ್ಥಳಕ್ಕೆ ಆಗಮಿಸಿ ಪೊಲೀಸರು ಅಂಗಡಿಯನ್ನು ಬಂದ್​ ಮಾಡಿಸಿದ್ದಾರೆ.

ದಿನದಿಂದ ದಿನಕ್ಕೆ ಕೊರೊನಾ ಆರ್ಭಟ ಜೋರಾಗುತ್ತಿದೆ. ಕೊರೊನಾ ಪ್ರಕರಣಗಳ ಸಂಖ್ಯೆಯೂ ಹೆಚ್ಚುತ್ತಿದೆ. ಸಾಮಾಜಿಕ ಅಂತರ, ಮಾಸ್ಕ್​ ಧರಿಸುವುದನ್ನು ಇನ್ನೂ ಕೆಲ ಜನರು ಗಂಭೀರವಾಗಿ ಪರಿಗಣಿಸಿಲ್ಲ. ಇದೇ ರೀತಿ ಮುಂದುವರೆದರೆ ಕೊರೊನಾ ಇನ್ನೂ ಕೈಮೀರುವುದರಲ್ಲಿ ಅನುಮಾನವೇ ಇಲ್ಲ. ಹಾಗಾಗಿ ಜನರು ಕೊರೊನಾ ನಿಯಂತ್ರಣ ಮುಂಜಾಗ್ರತೆ ಕ್ರಮದ ಬಗ್ಗೆ ಗಮನಹರಿಸಲೇ ಬೇಕಾಗಿದೆ.

ಇದನ್ನೂ ಓದಿ: ರಾಯಚೂರಿನಲ್ಲಿ 539 ಕೊರೊನಾ ಸೋಂಕಿತರು ನಾಪತ್ತೆ; ಸೋಂಕಿತರ ಪತ್ತೆಗೆ ಆರೋಗ್ಯ ಇಲಾಖೆ ಹರಸಾಹಸ

(Coronavirus Desease 1,093 people Death 24 days in Bangalore)

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?