ಬೆಂಗಳೂರು: ಸರ್ಕಾರ ಕೇಳಿದಷ್ಟು ಬೆಡ್ಗಳನ್ನು ಒದಗಿಸದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗಳ ಮಾಲೀಕರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಖಡಕ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಖಾಸಗಿ ಆಸ್ಪತ್ರೆಗಳ ಆಡಳಿತ ಮಂಡಳಿಗಳ ಜೊತೆ ನಡೆಸಿದ ಸಭೆಯಲ್ಲಿ ಸಚಿವರು ಪಾಲ್ಗೊಂಡಿದ್ದರು. ಇದೇ ವೇಳೆ ನಮ್ಮ ಜೊತೆ ಮಾಡಿಕೊಂಡಿರುವ ಒಪ್ಪಂದದಂತೆ ಶೇಕಡಾ 50ರಷ್ಟು ಬೆಡ್ ನೀಡಲೇಬೇಕು ಎಂದು ಆಗ್ರಹಿಸಿದ್ದಾರೆ.
ಒಂದು ವೇಳೆ ಒಪ್ಪಂದ ಪಾಲಿಸದಿದ್ದರೆ ವಿದ್ಯುತ್ ಹಾಗೂ ನೀರಿನ ಸಂಪರ್ಕ ಕಟ್ ಮಾಡಬೇಕಾಗುತ್ತದೆ ಎಂದು ವಾರ್ನಿಂಗ್ ಕೊಟ್ಟಿದ್ದಾರೆ. ಜೊತೆಗೆ, OPD ಕ್ಲೋಸ್ ಮಾಡಿಸಬೇಕಾಗುತ್ತೆ. ಇಲ್ಲಾಂದ್ರೆ, ಆಸ್ಪತ್ರೆಯ ಮಾನ್ಯತೆಯನ್ನ ರದ್ದು ಮಾಡಲೂ ಹಿಂದೆ ಮುಂದೆ ನೋಡಲ್ಲ ಎಂದು ಸೂಚನೆ ನೀಡಿದ್ದಾರೆ.
Published On - 5:41 pm, Wed, 8 July 20