ಗಾರ್ಡನ್ ಸಿಟಿಗೂ ತಟ್ಟಿದ ಡ್ರಾಗನ್ ಭೀತಿ! ಬೆಂಗಳೂರಿಂದ ಹೋಗಿದ್ದ ತೆಲಂಗಾಣ ವ್ಯಕ್ತಿಗೆ ಸೋಂಕು
ಬೆಂಗಳೂರು: ವಿಶ್ವದಾದ್ಯಂತ ಭೀತಿ ಹುಟ್ಟಿಸಿ, ಚೀನಾದಲ್ಲಿ 3000 ಜನರನ್ನ ಬಲಿ ಪಡೆದಿರುವ ಮಹಾಮಾರಿ ಕೊರೊನಾ ವೈರಸ್ ಈಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ಹರಡಿರುವ ಶಂಕೆ ವ್ಯಕ್ತವಾಗಿದ್ದು, ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಫೆಬ್ರವರಿ 19ರಂದು ದುಬೈನಿಂದ ಬೆಂಗಳೂರಿಗೆ ಬಂದಿದ್ದ ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್ ಸೋಂಕಿರುವುದು ಪತ್ತೆಯಾಗಿದೆ. ಟೆಕ್ಕಿ 3 ದಿನಗಳ ಕಾಲ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ. ನಂತರ ಬಸ್ನಲ್ಲಿ ಬೆಂಗಳೂರಿಂದ ಹೈದರಾಬಾದ್ಗೆ ತೆರಳಿದ್ದಾನೆ. ಹೀಗಾಗಿ ಸೋಂಕಿತ ಟೆಕ್ಕಿ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಗುರುತಿಸಿ ಮಾಹಿತಿ […]
ಬೆಂಗಳೂರು: ವಿಶ್ವದಾದ್ಯಂತ ಭೀತಿ ಹುಟ್ಟಿಸಿ, ಚೀನಾದಲ್ಲಿ 3000 ಜನರನ್ನ ಬಲಿ ಪಡೆದಿರುವ ಮಹಾಮಾರಿ ಕೊರೊನಾ ವೈರಸ್ ಈಗ ಸಿಲಿಕಾನ್ ಸಿಟಿ ಬೆಂಗಳೂರಿಗೂ ಹರಡಿರುವ ಶಂಕೆ ವ್ಯಕ್ತವಾಗಿದ್ದು, ದೇಶದಾದ್ಯಂತ ಕಟ್ಟೆಚ್ಚರ ವಹಿಸಲಾಗುತ್ತಿದೆ. ಫೆಬ್ರವರಿ 19ರಂದು ದುಬೈನಿಂದ ಬೆಂಗಳೂರಿಗೆ ಬಂದಿದ್ದ ತೆಲಂಗಾಣದ ಟೆಕ್ಕಿಗೆ ಕೊರೊನಾ ವೈರಸ್ ಸೋಂಕಿರುವುದು ಪತ್ತೆಯಾಗಿದೆ.
ಟೆಕ್ಕಿ 3 ದಿನಗಳ ಕಾಲ ಬೆಂಗಳೂರಿನಲ್ಲಿ ಉಳಿದುಕೊಂಡಿದ್ದ. ನಂತರ ಬಸ್ನಲ್ಲಿ ಬೆಂಗಳೂರಿಂದ ಹೈದರಾಬಾದ್ಗೆ ತೆರಳಿದ್ದಾನೆ. ಹೀಗಾಗಿ ಸೋಂಕಿತ ಟೆಕ್ಕಿ ಸಂಪರ್ಕದಲ್ಲಿ ಇದ್ದ ವ್ಯಕ್ತಿಗಳನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ಗುರುತಿಸಿ ಮಾಹಿತಿ ಕಲೆ ಹಾಕಿದ್ದಾರೆ. ಹಾಗೂ ಅವರಿಗೂ ಸೋಂಕು ಹರಡಿದೆಯಾ ಎಂದು ಪರಿಶೀಲನೆ ನಡೆಸಲಿದ್ದಾರೆ. ಈ ಹಿನ್ನೆಲೆ ತೆಲಂಗಾಣ ಆರೋಗ್ಯ ಇಲಾಖೆ ಅಧಿಕಾರಿಗಳು ಬೆಂಗಳೂರು, ಹೈದರಾಬಾದ್ನಲ್ಲಿ ಟೆಕ್ಕಿ ಸಂಪರ್ಕದಲ್ಲಿದ್ದ 80 ಜನರನ್ನು ಗುರುತಿಸಿರುವುದಾಗಿ ಕರ್ನಾಟಕದ ಅಧಿಕಾರಿಗಳಿಗೆ ಸಂಪೂರ್ಣ ಮಾಹಿತಿ ನೀಡಿದೆ.
ಸದ್ಯ ಹೈದರಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಟೆಕ್ಕಿಗೆ ಚಿಕಿತ್ಸೆ ನೀಡಲಾಗುತ್ತಿತ್ತು ಆದ್ರೆ ಈಗ ಹೈದರಾಬಾದ್ನ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಬೆಳಗ್ಗೆ ಆರೋಗ್ಯ ಅಧಿಕಾರಿಗಳ ಜೊತೆ ಸಭೆ ಕರೆದಿದ್ದೇನೆ. ಆರೋಗ್ಯ ಇಲಾಖೆ ಮುಖ್ಯ ಕಾರ್ಯದರ್ಶಿಗಳು, ಆಯುಕ್ತರು ಮತ್ತು ಹಿರಿಯ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಮ್ಮ ಸರ್ಕಾರ ಸೋಂಕು ಹರಡದಂತೆ ಎಲ್ಲ ಕ್ರಮ ಕೈಗೊಂಡಿದೆ. ಆ ವ್ಯಕ್ತಿಯ ನಿವಾಸದಲ್ಲಿ ಸದಸ್ಯರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ.
Published On - 7:24 am, Tue, 3 March 20