Covid-19 Karnataka Update: ಕರ್ನಾಟಕದಲ್ಲಿ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು, ಇದು ಈವರೆಗಿನ ದಾಖಲೆ

ಈ ಹಿಂದೆ ಸತತವಾಗಿ 40 ಸಾವಿರಕ್ಕೂ ಆಧಿಕ ಸಂಖ್ಯೆಯಲ್ಲಿ ಸೋಂಕಿತರ ಪ್ರಮಾಣ ವರದಿಯಾಗುತ್ತಿತ್ತು. ಆದರೆ ಎಂದಿಗೂ ಸೋಂಕಿತರ ಒಟ್ಟು ಸಂಖ್ಯೆ 50 ಸಾವಿರದ ಗಡಿ ದಾಟಿರಲಿಲ್ಲ.

Covid-19 Karnataka Update: ಕರ್ನಾಟಕದಲ್ಲಿ ಒಂದೇ ದಿನ 50 ಸಾವಿರಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು, ಇದು ಈವರೆಗಿನ ದಾಖಲೆ
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:May 05, 2021 | 8:29 PM

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇದೇ ಮೊದಲ ಬಾರಿಗೆ 50 ಸಾವಿರದ ಗಡಿ ದಾಟಿದೆ. ರಾಜ್ಯದ ವಿವಿಧೆಡೆ ಬುಧವಾರ (ಮೇ 5) ಒಟ್ಟು 50,112 ಜನರಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟು 346 ಮಂದಿ ಸಾವನ್ನಪ್ಪಿದ್ದಾರೆ. ಇಂದು ವರದಿಯಾಗಿರುವ ಸೋಂಕಿತರ ಒಟ್ಟು ಸಂಖ್ಯೆಯು ಈವರೆಗಿನ ಗರಿಷ್ಠ ಸಂಖ್ಯೆ ಎನಿಸಿದೆ.

ಕರ್ನಾಟಕದ ಒಟ್ಟು ಸೋಂಕಿತರ ಸಂಖ್ಯೆ 17,41,046ಕ್ಕೆ (17.41 ಲಕ್ಷ) ಏರಿಕೆಯಾಗಿದೆ. ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ 16,884 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 12,36,854 (12.36 ಲಕ್ಷ) ಜನರು ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಅಗಿದ್ದಾರೆ. 4,87,288 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 23,106 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ನಗರದಲ್ಲಿ ಸೋಂಕಿನಿಂದ ಒಂದೇ ದಿನ ಮೃತಪಟ್ಟವರ ಸಂಖ್ಯೆ 161. ಈವರೆಗೆ ಬೆಂಗಳೂರಿನಲ್ಲಿ 8,63,380 ಜನರಿಗೆ ಸೋಂಕು ದೃಢಪಟ್ಟಿದೆ. ಒಟ್ಟು 7006 ಮಂದಿ ಮೃತಪಟ್ಟಿದ್ದಾರೆ. 5,43,059 ಜನರು ಗುಣಮುಖರಾಗಿದ್ದಾರೆ. 3,13,314 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಒಂದೇ ದಿನ 50,112 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 23,106 ಜನರಲ್ಲಿ ಸೋಂಕು ದೃಢಪಟ್ಟಿದೆ. ಮೈಸೂರು 2,790, ತುಮಕೂರು 2,335 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ 2 ಸಾವಿರ ದಾಟಿದೆ. ಉಡುಪಿ 1,655, ಹಾಸನ 1,604, ಮಂಡ್ಯ 1,621, ದಕ್ಷಿಣ ಕನ್ನಡ 1,529, ಕೋಲಾರ 1,115, ಕಲಬುರಗಿ 1,097, ಬೆಂಗಳೂರು ಗ್ರಾಮಾಂತರ 1,033, ಧಾರವಾಡ 1,030, ಚಿಕ್ಕಬಳ್ಳಾಪುರ 1,009 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ 1 ಸಾವಿರ ದಾಟಿದೆ. ಬಳ್ಳಾರಿ 927, ಬೆಳಗಾವಿ 920, ಉತ್ತರ ಕನ್ನಡ 849, ಚಿಕ್ಕಮಗಳೂರು 830, ಕೊಡಗು 768, ಯಾದಗಿರಿ 739, ಬಾಗಲಕೋಟೆ 719, ಶಿವಮೊಗ್ಗ 702, ದಾವಣಗೆರೆ 548, ಚಾಮರಾಜನಗರ 542, ವಿಜಯಪುರ 513, ಬೀದರ್ 486, ರಾಮನಗರ 475, ರಾಯಚೂರು 427, ಹಾವೇರಿ 224, ಗದಗ 189, ಕೊಪ್ಪಳ 182, ಚಿತ್ರದುರ್ಗ ಜಿಲ್ಲೆಗಳಲ್ಲಿ 152 ಪ್ರಕರಣಗಳು ವರದಿಯಾಗಿವೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 346 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 161 ಜನರು ಮೃತಪಟ್ಟಿದ್ದಾರೆ. ಬಳ್ಳಾರಿ, ಮಂಡ್ಯ ಜಿಲ್ಲೆಗಳಲ್ಲಿ ತಲಾ 19, ಕಲಬುರಗಿ, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ 15, ತುಮಕೂರು 12, ಹಾಸನ 11, ಮೈಸೂರು 10, ಬೀದರ್, ಧಾರವಾಡ 8, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ತಲಾ ಐವರು ಮೃತಪಟ್ಟಿದ್ದಾರೆ. ವಿಜಯಪುರ, ಹಾವೇರಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತಲಾ ನಾಲ್ವರು, ಉಡುಪಿ, ರಾಯಚೂರು, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ತಲಾ ಮೂವರು ಮೃತಪಟ್ಟಿದ್ದಾರೆ. ಬೆಳಗಾವಿ, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ತಲಾ ಇಬ್ಬರು, ಚಿತ್ರದುರ್ಗ ಜಿಲ್ಲೆಯಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 16884 ಜನರು ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ನಿನ್ನೆ (ಮೇ 4) 44,631, ಮೊನ್ನೆ 44,438 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಈ ಹಿಂದೆ ಸತತವಾಗಿ 40 ಸಾವಿರಕ್ಕೂ ಆಧಿಕ ಸಂಖ್ಯೆಯಲ್ಲಿ ಸೋಂಕಿತರ ಪ್ರಮಾಣ ವರದಿಯಾಗುತ್ತಿತ್ತು. ಆದರೆ ಎಂದಿಗೂ ಸೋಂಕಿತರ ಒಟ್ಟು ಸಂಖ್ಯೆ 50 ಸಾವಿರದ ಗಡಿ ದಾಟಿರಲಿಲ್ಲ. ಇಂದು ಸೋಂಕಿತರ ಒಟ್ಟು ಸಂಖ್ಯೆ 50 ಸಾವಿರದ ಗಡಿ ದಾಟಿರುವುದು ರಾಜ್ಯದಲ್ಲಿ ಕೊವಿಡ್-19 ಸೋಂಕಿನ 2ನೇ ಅಲೆ ವ್ಯಾಪಕವಾಗಿ ಹರಡಿರುವುದು ಮತ್ತು ಸಂಕಷ್ಟ ಪರಿಸ್ಥಿತಿ ನಿರ್ಮಾಣವಾಗಿರುವುದನ್ನು ಸೂಚಿಸುತ್ತದೆ.

(Coronavirus in Karnataka Infection numbers crossed 50 thousand mark 346 deaths due to covid 19)

ಇದನ್ನೂ ಓದಿ: Coronavirus India Update: ಕಳೆದ 24 ಗಂಟೆಗಳಲ್ಲಿ 3.82 ಲಕ್ಷ ಹೊಸ ಕೊರೊನಾ ಪ್ರಕರಣ ಪತ್ತೆ, 3780 ಮಂದಿ ಸಾವು

ಇದನ್ನೂ ಓದಿ: ಕೊವಿಡ್ 3ನೇ ಅಲೆ ತಡೆ ಅಸಾಧ್ಯ, ಕೊರೊನಾವೈರಸ್ ಸೋಂಕು ಅಧಿಕ: ಕೇಂದ್ರ ಸರ್ಕಾರ

&

Published On - 7:48 pm, Wed, 5 May 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ