Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ: ತುಮಕೂರಿನಲ್ಲಿ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಬಲಿ, ನೇಣು ಬಿಗಿದುಕೊಂಡು ಶ್ರೀರಂಗಪಟ್ಟಣದಲ್ಲಿ ಮತ್ತೊಬ್ಬ ಸಾವು

ಮೃತ ಜಯಕುಮಾರ್ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದವರು. ಕರೊನಾ ದೃಢಪಟ್ಟಿದ್ರಿಂದ ನಿನ್ನೆ ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಜಯಕುಮಾರ್ ಒಮ್ಮೆ ಆಕ್ಸಿಜನ್ ಪಡೆದಿದ್ದರು. ಮತ್ತೆ ಉಸಿರಾಟದ ಸಮಸ್ಯೆ ಎದುರಾಗಿ ತಾನು ಸಾಯಬಹುದೆಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೊರೊನಾ: ತುಮಕೂರಿನಲ್ಲಿ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಬಲಿ, ನೇಣು ಬಿಗಿದುಕೊಂಡು ಶ್ರೀರಂಗಪಟ್ಟಣದಲ್ಲಿ ಮತ್ತೊಬ್ಬ ಸಾವು
ಕೊರೂನಾ ಸೋಂಕಿತ ಆತ್ಮಹತ್ಯೆಗೆ ಶರಣು: ಆಸ್ಪತ್ರೆ ಹಿಂಭಾಗ ಮರಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ಸಾವು
Follow us
ಸಾಧು ಶ್ರೀನಾಥ್​
|

Updated on:Apr 26, 2021 | 9:54 AM

ಮಂಡ್ಯ: ಕೊರೂನಾ ಕಾಟದಿಂದ ಮಾನಸಿಕ ಕ್ಷೋಭೆಯಂತಹ ದುರ್ಭರ ಪ್ರಸಂಗಗಳೂ ನಡೆಯುತ್ತಿವೆ. ಸೋಂಕಿತ ವ್ಯಕ್ತಿಯೊಬ್ಬರು ಉಸಿರಾಟದ ಸಮಸ್ಯೆಯಿಂದ ತಾನು ಸಾಯಬಹುದೆಂದು ಹೆದರಿ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಈ ದುರ್ಘಟನೆ ನಡೆದಿದೆ. ಜಯಕುಮಾರ್(45) ಮೃತ ಸೋಂಕಿತ ವ್ಯಕ್ತಿ.

ಮೃತ ಜಯಕುಮಾರ್ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದವರು. ಕರೊನಾ ದೃಢಪಟ್ಟಿದ್ರಿಂದ ನಿನ್ನೆ ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಜಯಕುಮಾರ್ ಒಮ್ಮೆ ಆಕ್ಸಿಜನ್ ಪಡೆದಿದ್ದರು. ಮತ್ತೆ ಉಸಿರಾಟದ ಸಮಸ್ಯೆ ಎದುರಾಗಿ ತಾನು ಸಾಯಬಹುದೆಂದು ಹೆದರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆಸ್ಪತ್ರೆ ಹಿಂಭಾಗದ ಮರಕ್ಕೆ ಸೀರೆಯಿಂದ ನೇಣು ಬಿಗಿದುಕೊಂಡು ಜಯಕುಮಾರ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ವೈದ್ಯಾಧಿಕಾರಿಗಳು ಮತ್ತು ಪೊಲೀಸರಿಂದ ಪರಿಶೀಲನೆ ನಡೆದಿದೆ. ಶ್ರೀರಂಗಪಟ್ಟಣ ಟೌನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ತುಮಕೂರಿನಲ್ಲಿ 6 ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ವ್ಯಕ್ತಿ ಸಾವು:

ತುಮಕೂರಿನಲ್ಲಿಯೂ ಕ್ರೂರಿ ಕೊರೊನಾ ಅಟ್ಟಹಾಸ ನಡೆಸಿದೆ. ತುಮಕೂರು ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಸೆಂಟರ್​ನಲ್ಲಿ ಡಯಾಲಿಸಿಸ್ ಸೆಂಟರ್ ಮುಖ್ಯಸ್ಥ ಕೊರೊನಾಗೆ ಬಲಿಯಾಗಿದ್ದಾರೆ. 6 ತಿಂಗಳ ಹಿಂದಷ್ಟೇ ಇವರ ಮದುವೆಯಾಗಿತ್ತು. ತುಮಕೂರು ತಾಲೂಕಿನ ಹೆಬ್ಬೂರು ಗ್ರಾಮದ 27 ವರ್ಷದ ವ್ಯಕ್ತಿ ಸಾವಿಗೀಡಾದವರು.

ಕಳೆದ ವಾರ ಸೋಂಕು ತಗುಲಿತ್ತು. ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ಉಸಿರಾಟದ ತೊಂದರೆಯಿಂದ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು‌. ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಸಂಜೆ ಜಿಲ್ಲಾಸ್ಪತ್ರೆಯಿಂದ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಆಗಿದ್ದರು. ಮಧ್ಯೆ ರಾತ್ರಿ 1.30 ರ ಸುಮಾರಿನಲ್ಲಿ ಸಾವನ್ನಪ್ಪಿದ್ದಾರೆ. ಲಿವರ್​ ಡ್ಯಾಮೇಜ್ ನಿಂದ ಮೃತಪಟ್ಟಿದ್ದಾರೆ ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. 27 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿರೋದು ತುಮಕೂರು ಜನರಲ್ಲಿ ಆತಂಕ ತಂದಿದೆ.

just married person died due to covid 19 in tumkur

ತೀವ್ರ ಉಸಿರಾಟದ ತೊಂದರೆಯಿಂದ ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು‌

(coronavirus infected person committed suicide in srirangapatna, 6 months back married person died due to covid 19 in tumkur)

ಇದನ್ನೂ ಓದಿ: Oxygen Shortage| ಆಕ್ಸಿಜನ್ ಕೊರತೆಯಿಂದ ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಸೋಂಕಿತರು ಬಲಿ

Published On - 9:31 am, Mon, 26 April 21

‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ
‘ಡೆವಿಲ್’ ಚಿತ್ರೀಕರಣ ಮುಗಿಸಿ ಬೆಂಗಳೂರಿಗೆ ವಾಪಸ್ಸಾದ ದರ್ಶನ್: ವಿಡಿಯೋ
ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ
ಯತ್ನಾಳ್ ಹೊಸ ಪಕ್ಷ ಕಟ್ಟಿದರೆ ನಾವ್ಯಾರು ಅವರ ಜೊತೆ ಹೋಗಲ್ಲ: ಬಂಗಾರಪ್ಪ
ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಮಂತ್ರಿಗಿರಿ ಬಿಡಬೇಕಾದ ವಿಷಯ ಗೊತ್ತಿಲ್ಲ: ಜಾರಕಿಹೊಳಿ
ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಅಂತ ಖರ್ಗೆ ಹೇಳಿದ್ದಾರೆ: ಪರಮೇಶ್ವರ್
ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಅಂತ ಖರ್ಗೆ ಹೇಳಿದ್ದಾರೆ: ಪರಮೇಶ್ವರ್
SSLC,PUC ಬಳಿಕ ಮುಂದೇನು?ಚಿಂತೆ ಬೇಡ,ಟಿವಿ9 ಎಜುಕೇಷನ್ EXPOದಲ್ಲಿ ಭಾಗವಹಿಸಿ
SSLC,PUC ಬಳಿಕ ಮುಂದೇನು?ಚಿಂತೆ ಬೇಡ,ಟಿವಿ9 ಎಜುಕೇಷನ್ EXPOದಲ್ಲಿ ಭಾಗವಹಿಸಿ
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯ ಮಾರಾಟ, ಇಲಾಖೆ ನಿರ್ಲಿಪ್ತ
ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯ ಮಾರಾಟ, ಇಲಾಖೆ ನಿರ್ಲಿಪ್ತ
ಚಲಿಸುತ್ತಿರುವ ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧ
ಚಲಿಸುತ್ತಿರುವ ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧ
ಸವದತ್ತಿ ಯಲ್ಲಮ್ಮಗೆ ಜಲ ದಿಗ್ಭಂಧನ: ದೇಗುಲದಲ್ಲಿ ಪ್ರವಾಹದಂತೆ ಹರಿದ ನೀರು
ಸವದತ್ತಿ ಯಲ್ಲಮ್ಮಗೆ ಜಲ ದಿಗ್ಭಂಧನ: ದೇಗುಲದಲ್ಲಿ ಪ್ರವಾಹದಂತೆ ಹರಿದ ನೀರು
ಬಡವರಿಗೆ ನಿವೇಶನಗಳನ್ನು ಮಾಡಿ ಹಂಚಲು ಬೈಲಹೊಂಗಲದಲ್ಲಿ ಖರೀದಿಯಾಗಿದ್ದ ಜಮೀನು
ಬಡವರಿಗೆ ನಿವೇಶನಗಳನ್ನು ಮಾಡಿ ಹಂಚಲು ಬೈಲಹೊಂಗಲದಲ್ಲಿ ಖರೀದಿಯಾಗಿದ್ದ ಜಮೀನು
‘ಎಷ್ಟೇ ಎತ್ತರಕ್ಕೆ ಬೆಳೆದರೂ..’; ಯಶ್ ಸಹಾಯ ನೆನೆದ ಅಜಯ್ ರಾವ್
‘ಎಷ್ಟೇ ಎತ್ತರಕ್ಕೆ ಬೆಳೆದರೂ..’; ಯಶ್ ಸಹಾಯ ನೆನೆದ ಅಜಯ್ ರಾವ್