ಬೆಂಗಳೂರು: ಕರ್ನಾಟಕದಲ್ಲಿ ಇಂದು ಹೊಸದಾಗಿ 14,738 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಟ್ಟು ಸೋಂಕಿತರ ಸಂಖ್ಯೆ 11,09,650ಕ್ಕೆ (11.09 ಲಕ್ಷ) ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 66 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,112 ಜನರು ಸಾವನ್ನಪ್ಪಿದ್ದಾರೆ. ಸೋಂಕಿತರ ಪೈಕಿ 9,99,958 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 96,561 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ನಗರ, ಕಲಬುರ್ಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳು ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿರುವುದು ರಾಜ್ಯ ಸರ್ಕಾರ ಬಿಡುಗಡೆ ಮಾಡಿರುವ ಅಂಕಿಅಂಶಗಳನ್ನು ಗಮನಿಸಿದಾಗ ತಿಳಿಯುತ್ತದೆ.
ಬೆಂಗಳೂರಲ್ಲಿ ಇಂದು ಒಂದೇ ದಿನ 10,497 ಜನರಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,12,521ಕ್ಕೆ (5.12 ಲಕ್ಷ) ಏರಿಕೆಯಾಗಿದೆ. ಈ ಪೈಕಿ 4,35,730 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 30 ಜನರು ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 4,963 ಜನರ ಸಾವನ್ನಪ್ಪಿದ್ದಾರೆ. 71,827 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಒಟ್ಟು 66 ಜನರ ಸಾವನ್ನಪ್ಪಿದ್ದಾರೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ 30 ಜನರು ಮೃತಪಟ್ಟಿದ್ದಾರೆ. ಉಳಿದಂತೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಲಾ 6, ಮೈಸೂರು ಜಿಲ್ಲೆಯಲ್ಲಿ 5, ಹಾಸನದಲ್ಲಿ 4, ಧಾರವಾಡ ಜಿಲ್ಲೆಯಲ್ಲಿ 3, ಬೀದರ್, ತುಮಕೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಇಬ್ಬರು, ಬೆಳಗಾವಿ, ಕಲಬುರಗಿ, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಬ್ವರು ಸಾವನ್ನಪ್ಪಿದ್ದಾರೆ. ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 13,112 ಜನರ ಸಾವನ್ನಪ್ಪಿದ್ದಾರೆ.
ಇಂದಿನ 15/04/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/euaq1dhiDf@mla_sudhakar @DVSadanandGowda @ShobhaBJP @PCMohanMP @Tejasvi_Surya @CTRavi_BJP @kiranshaw @WFRising @citizenkamran @BangaloreBuzz @RCBTweets @NammaKarnataka_ pic.twitter.com/tBfQmjNUGH
— K’taka Health Dept (@DHFWKA) April 15, 2021
ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ರಾಜ್ಯದಲ್ಲಿಂದು ಹೊಸದಾಗಿ 14,738 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ 10,497, ಕಲಬುರಗಿ 624, ತುಮಕೂರು 387, ಬೀದರ್ 363, ಮೈಸೂರು 327, ಮಂಡ್ಯ 211, ಬಳ್ಳಾರಿ 200, ಹಾಸನ 186, ಧಾರವಾಡ 179, ಬೆಂಗಳೂರು ಗ್ರಾಮಾಂತರ 171, ದಕ್ಷಿಣ ಕನ್ನಡ 166, ವಿಜಯಪುರ 136, ಬೆಳಗಾವಿ 135, ಚಿಕ್ಕಬಳ್ಳಾಪುರ 127, ಕೊಪ್ಪಳ 118, ಉಡುಪಿ 111, ಉತ್ತರ ಕನ್ನಡ 89, ಕೋಲಾರ 89, ಯಾದಗಿರಿ 88, ಶಿವಮೊಗ್ಗ 74, ಕೊಡಗು 66, ಚಿಕ್ಕಮಗಳೂರು 62, ರಾಮನಗರ 62, ದಾವಣಗೆರೆ 60, ರಾಯಚೂರು 48, ಚಾಮರಾಜನಗರ 39, ಗದಗ 34, ಚಿತ್ರದುರ್ಗ 33, ಬಾಗಲಕೋಟೆ 29, ಹಾವೇರಿ 27 ಜನರಲ್ಲಿ ಸೋಂಕು ದೃಢಪಟ್ಟಿದೆ.
Coronavirus infection found in 14738 people 66 people died of covid-19
ಇದನ್ನೂ ಓದಿ: Delhi Weekend Curfew: ಕೊರೊನಾ ತಡೆಗೆ ದೆಹಲಿಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ
Published On - 6:52 pm, Thu, 15 April 21