Covid-19 Karnataka Update: ಕರ್ನಾಟಕದಲ್ಲಿ 9808 ಮಂದಿಗೆ ಸೋಂಕು, 179 ಸಾವು

ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,87,146ಕ್ಕೆ ಏರಿಕೆಯಾಗಿದೆ. ಈ ಪೈಕಿ 10,70,062 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,118 ಜನರು ಮೃತಪಟ್ಟಿದ್ದಾರೆ.

Covid-19 Karnataka Update: ಕರ್ನಾಟಕದಲ್ಲಿ 9808 ಮಂದಿಗೆ ಸೋಂಕು, 179 ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Jun 08, 2021 | 8:45 PM

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ ಸೋಂಕಿತರ ಒಟ್ಟು ಸಂಖ್ಯೆ 10 ಸಾವಿರದ ಗಡಿಯಿಂದ ಕೆಳಗಿಳಿದಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 9808 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 179 ಜನರು ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ 2028 ಜನರಿಗೆ ಸೋಂಕು ದೃಢಪಟ್ಟಿದ್ದು, 44 ಜನರು ಸಾವನ್ನಪ್ಪಿದ್ದಾರೆ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 27,17,289ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 24,60,165 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 32,099 ಜನರು ಸಾವನ್ನಪ್ಪಿದ್ದಾರೆ. 2,25,004 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 11,87,146ಕ್ಕೆ ಏರಿಕೆಯಾಗಿದೆ. ಈ ಪೈಕಿ 10,70,062 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,118 ಜನರು ಮೃತಪಟ್ಟಿದ್ದಾರೆ. 10,1965 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 9808 ಜನರಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಅತಿಹೆಚ್ಚು ಅಂದರೆ, 2028 ಜನರಲ್ಲಿ ಸೋಂಕು ದೃಢಪಟ್ಟಿದೆ. ಬಳ್ಳಾರಿ 212, ಬೆಳಗಾವಿ 443, ಬಾಗಲಕೋಟೆ 46, ಬೆಂಗಳೂರು ಗ್ರಾಮಾಂತರ 125, ಬೀದರ್ 10, ಚಾಮರಾಜನಗರ 106, ಚಿಕ್ಕಬಳ್ಳಾಪುರ 173, ಚಿಕ್ಕಮಗಳೂರು 287, ಚಿತ್ರದುರ್ಗ 196, ದಕ್ಷಿಣ ಕನ್ನಡ 525, ದಾವಣಗೆರೆ 384, ಧಾರವಾಡ 275, ಗದಗ 78, ಹಾಸನ 659, ಹಾವೇರಿ 211, ಕಲಬುರಗಿ 63, ಕೊಡಗು 196, ಕೋಲಾರ 298, ಕೊಪ್ಪಳ 165, ಮಂಡ್ಯ 387, ಮೈಸೂರು 974, ರಾಯಚೂರು 56, ರಾಮನಗರ 42, ಶಿವಮೊಗ್ಗ 703, ತುಮಕೂರು 589, ಉಡುಪಿ 205, ಉತ್ತರ ಕನ್ನಡ 187, ವಿಜಯಪುರ 152, ಯಾದಗಿರಿ 33 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಒಟ್ಟು 179 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು ಜನರು, ಅಂದರೆ ಕೊರೊನಾ ಸೋಂಕಿಗೆ 44 ಜನರು ಮೃತಪಟ್ಟಿದ್ದಾರೆ. ಮೈಸೂರು 15, ಹಾವೇರಿ 11, ಶಿವಮೊಗ್ಗ 10, ಹಾಸನ, ಧಾರವಾಡದಲ್ಲಿ ತಲಾ 9, ಬೆಂಗಳೂರು ಗ್ರಾಮಾಂತರ 8, ತುಮಕೂರು 6, ಬಾಗಲಕೋಟೆ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ತಲಾ ಐವರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಕಲಬುರಗಿ, ಕೋಲಾರ, ಕೊಪ್ಪಳ ಜಿಲ್ಲೆಗಳಲ್ಲಿ ತಲಾ ನಾಲ್ವರು, ಚಿಕ್ಕಮಗಳೂರು, ಮಂಡ್ಯ, ಕೊಡಗು, ಚಾಮರಾಜನಗರ ತಲಾ ಮೂವರು, ಗದಗ, ರಾಮನಗರ, ಉಡುಪಿ, ವಿಜಯಪುರ, ಯಾದಗಿರಿ ಜಿಲ್ಲೆಯಲ್ಲಿ ಇಬ್ಬರು, ಬೀದರ್​​​ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 32,099ಕ್ಕೆ ಏರಿಕೆಯಾಗಿದೆ.

(Coronavirus Infection Numbers of Karnataka 9808 Infected 179 Deaths from Covid 19)

ಇದನ್ನೂ ಓದಿ: 12 ರಾಜ್ಯಗಳ ಒತ್ತಾಯದಿಂದ ಹೊಸ ಲಸಿಕೆ ಖರೀದಿ ನೀತಿ ಜಾರಿ: ನೀತಿ ಆಯೋಗ ಸದಸ್ಯ ವಿ.ಕೆ.ಪೌಲ್

ಇದನ್ನೂ ಓದಿ: ಲಸಿಕೆ ಪಡೆದ ಆ ಯುವಕನ ರೀತಿಯೇ ವೈರಲ್​ ಆಯ್ತು ಪ್ರಶಾಂತ್​ ನೀಲ್ ಫೋಟೋ​; ಆದರೆ ಕಾರಣ ಬೇರೆ

Published On - 8:45 pm, Tue, 8 June 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?