Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಂಡವಪುರ ತಾಲ್ಲೂಕಿನ ಒಂದೇ ಗ್ರಾಮದ 28 ಜನರಿಗೆ ಕೊರೊನಾ ಸೋಂಕು: ಇಡೀ ಗ್ರಾಮಕ್ಕೆ ದಿಗ್ಬಂಧನ

ಗ್ರಾಮಕ್ಕೆ ಹೊರಜಗತ್ತಿನ ಸಂಪರ್ಕ ಕಲ್ಪಿಸುವ ಮೂರು ರಸ್ತೆಗಳಿಗೆ ಮಣ್ಣು ಸುರಿದು ಗ್ರಾಮವನ್ನು ಸೀಲ್​ಡೌನ್ ಮಾಡಲಾಗಿದೆ. 70 ಮನೆಗಳಿರುವ ಗ್ರಾಮದಲ್ಲಿ 100 ಜನರಲ್ಲಿ ಕೋವಿಡ್-19 ಟೆಸ್ಟ್ ಮಾಡಲಾಯಿತು. ಉಳಿದವರು ಸೋಂಕು ತಪಾಸಣೆಗೆ ಹೆದರಿ ಹಿಂದೇಟು ಹಾಕುತ್ತಿದ್ದಾರೆ.

ಪಾಂಡವಪುರ ತಾಲ್ಲೂಕಿನ ಒಂದೇ ಗ್ರಾಮದ 28 ಜನರಿಗೆ ಕೊರೊನಾ ಸೋಂಕು: ಇಡೀ ಗ್ರಾಮಕ್ಕೆ ದಿಗ್ಬಂಧನ
ಮಂಡ್ಯದ ಕೋವಿಡ್ ಸೋಂಕಿತರ ಚಿಕಿತ್ಸಾ ಕೇಂದ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 28, 2021 | 7:50 PM

ಮಂಡ್ಯ: ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ವಳಗೆರೆ ದೇವರಹಳ್ಳಿ ಗ್ರಾಮದಲ್ಲಿ ಸುಮಾರು 28 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬೆಳವಣಿಗೆಯ ನಂತರ ಇಡೀ ಗ್ರಾಮಕ್ಕೆ ತಾಲ್ಲೂಕು ಆಡಳಿತ ದಿಗ್ಬಂಧನ ವಿಧಿಸಿದೆ. ಮುಂದಿನ 14 ದಿನಗಳ ಕಾಲ ಗ್ರಾಮದಿಂದ ಯಾರೂ ಹೊರಗೆ ಹೋಗುವಂತಿಲ್ಲ, ಗ್ರಾಮಕ್ಕೂ ಹೊರಗಿನಿಂದ ಯಾರೂ ಬರುವಂತಿಲ್ಲ ಎಂದು ರಸ್ತೆಗಳನ್ನು ನಿರ್ಬಂಧಿಸಲಾಗಿದೆ.

ಗ್ರಾಮಕ್ಕೆ ಹೊರಜಗತ್ತಿನ ಸಂಪರ್ಕ ಕಲ್ಪಿಸುವ ಮೂರು ರಸ್ತೆಗಳಿಗೆ ಮಣ್ಣು ಸುರಿದು ಗ್ರಾಮವನ್ನು ಸೀಲ್​ಡೌನ್ ಮಾಡಲಾಗಿದೆ. 70 ಮನೆಗಳಿರುವ ಗ್ರಾಮದಲ್ಲಿ 100 ಜನರಲ್ಲಿ ಕೋವಿಡ್-19 ಟೆಸ್ಟ್ ಮಾಡಲಾಯಿತು. ಈ ವೇಳೆ 28 ಜನರಲ್ಲಿ ಸೋಂಕು ದೃಢಪಟ್ಟಿತು. ಗ್ರಾಮದಲ್ಲಿ ಇನ್ನೂ ಹಲವರಿಗೆ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ. ಆದರೆ ತಪಾಸಣೆಗೆ ಒಳಗಾಗಲು ಗ್ರಾಮಸ್ಥರು ನಿರಾಕರಿಸುತ್ತಿದ್ದಾರೆ. ಹೀಗಾಗಿ ತಾಲ್ಲೂಕು ಆಡಳಿತವು ಗ್ರಾಮಕ್ಕೆ ದಿಗ್ಬಂಧನ ಹಾಕಿದೆ.

ಪಾಂಡವಪುರ ತಾಲ್ಲೂಕಿನ ಕೋಡಾಲ ಗ್ರಾಮದಲ್ಲಿ 20ಕ್ಕೂ ಹೆಚ್ಚು ಜನರಲ್ಲಿ ಸೋಂಕು ದೃಢಪಟ್ಟಿದೆ. ಗ್ರಾಮದ ಎಲ್ಲ ನಿವಾಸಿಗಳನ್ನೂ ತಪಾಸಣೆಗೆ ಒಳಪಡಿಸಲು ತಾಲ್ಲೂಕು ಆಡಳಿತ ನಿರ್ಧರಿಸಿದೆ. ಈ ಕುರಿತು ಗ್ರಾಮದಲ್ಲಿ ಮೈಕ್ ಹಿಡಿದು ಪಂಚಾಯ್ತಿ ಸಿಬ್ಬಂದಿ ಡಂಗೂರ ಸಾರುತ್ತಿದ್ದಾರೆ. ಭಯ ಪಡದೆ ಎಲ್ಲರೂ ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಬೇಕೆಂದು ಮನವಿ ಮಾಡುತ್ತಿದ್ದಾರೆ.

ತಾಲ್ಲೂಕಿನ ಕ್ಯಾತನಹಳ್ಳಿ ಹಾಗೂ ಶೆಟ್ಟಹಳ್ಳಿ ಗ್ರಾಮಗಳಲ್ಲಿ 20ಕ್ಕೂ ಹೆಚ್ಚು ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇಷ್ಟು ದಿನ ನಗರ ಪ್ರದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದ ಸೋಂಕಿತರ ಸಂಖ್ಯೆ ಗ್ರಾಮೀಣ ಪ್ರದೇಶಗಳಿಗೂ ವಿಸ್ತರಿಸಿರುವುದನ್ನು ತಾಲ್ಲೂಕು ಆಡಳಿತ ಗಂಭೀರವಾಗಿ ತೆಗೆದುಕೊಂಡಿದೆ. ತಪಾಸಣೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.

ಕೋವಿಡ್ ಕೇಂದ್ರಕ್ಕೆ ಸಚಿವ ಭೇಟಿ ಮಂಡ್ಯ ನಗರದ ಒಕ್ಕಲಿಗರ ಭವನದಲ್ಲಿರುವ ಕೋವಿಡ್-19 ಕೇಂದ್ರಕ್ಕೆ ಸಚಿವ ನಾರಾಯಣಗೌಡ ಬುಧವಾರ ಭೇಟಿ ನೀಡಿದರು. ಈ ವೇಳೆ ಸೋಂಕಿತರಿಗೆ ಒದಗಿಸಿರುವ ಊಠ ಮತ್ತು ಇತರ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಯೋಗಾಸನಗಳನ್ನು ಕಲಿಯಲು, ಮಾಡಲು ಗಮನಕೊಡಿ. ಬೇಗ ಗುಣಮುಖರಾಗಿ ಎಂದು ಸಚಿವರು ಹಾರೈಸಿದರು. ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಸಿಬ್ಬಂದಿಗೆ ಧನ್ಯವಾದ ತಿಳಿಸಿದರು.

ಪಶ್ಚಿಮವಾಹಿನಿಯಲ್ಲಿ ಜನವೋ ಜನ ಶ್ರೀರಂಗಪಟ್ಟಣ ಸಮೀಪದ ಪಶ್ಚಿಮವಾಹಿನಿ ಬಳಿ ಅಸ್ತಿ ಬಿಡಲು ಜನರ ಜಮಾವಣೆಯಾಗಿದ್ದಾರೆ. ಮೃತರ ಅಸ್ತಿ ಬಿಡಲು ಬೆಂಗಳೂರು ಸೇರಿದಂತೆ ವಿವಿಧೆಡೆಯಿಂದ ನೂರಾರು ಜನರು ಬಂದಿದ್ದಾರೆ.

(Coronavirus infection to many in Pandavapura taluk villages seal down)

ಇದನ್ನೂ ಓದಿ: Covid-19 Karnataka Update: ಕರ್ನಾಟಕದಲ್ಲಿ ಇಂದು 39,047 ಜನರಿಗೆ ಕೊರೊನಾ ಸೋಂಕು, 137 ಸಾವು

ಇದನ್ನೂ ಓದಿ: ಕೊರೊನಾ ಸೋಂಕಿನ ಹರಡುವಿಕೆಗೆ ಮಂಡ್ಯದ ಜನ ಹೈರಾಣು; ಲಸಿಕೆ ಪಡೆದುಕೊಳ್ಳಲು ಸಾಲುಗಟ್ಟಿ ನಿಂತ ಸಾರ್ವಜನಿಕರು

Published On - 7:49 pm, Wed, 28 April 21

ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
Daily Horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಅನುಗ್ರಹ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಕೇಕ್ ಕಟ್ ಮಾಡಿ ಮೊದಲ ಪೀಸನ್ನು ಶಿವಕುಮಾರ್​ಗೆ ನೀಡಿದ ಸಿದ್ದರಾಮಯ್ಯ
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮ್ಯಾಜಿಸ್ಟ್ರೇಟ್ 50,000 ರೂ. ಲಂಚ ಕೇಳಿದ್ದಕ್ಕೆ ಮರ ಹತ್ತಿದ ವೃದ್ಧೆ!
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?
ಮತ್ತೆ ಜೈಲಿಗೆ ಹೋದ ರಜತ್ ಬಗ್ಗೆ ಕೇಳಿದ್ದಕ್ಕೆ ವಿನಯ್ ಗೌಡ ಹೇಳಿದ್ದೇನು?