27 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ; ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ಹೆಚ್ಚಿದ ಆತಂಕ

| Updated By: ಸಾಧು ಶ್ರೀನಾಥ್​

Updated on: Jan 07, 2021 | 12:15 PM

ಒಟ್ಟು 400 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಇದರಲ್ಲಿ ಕೇರಳಾದಿಂದ ಬಂದಿದ್ದ 27 ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಪಶ್ಚಿಮ ಬಂಗಾಳದ 1 ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಅಧಿಕಾರಿಗಳು ಸೋಂಕಿತರನ್ನು ಹಾಸ್ಟೆಲ್​ಗಳಲ್ಲಿ ‌ಕ್ವಾರಂಟೇನ್ ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ

27 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ; ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ಹೆಚ್ಚಿದ ಆತಂಕ
ದೇವರಾಜ ಅರಸು ಮೆಡಿಕಲ್ ಕಾಲೇಜ್
Follow us on

ಕೋಲಾರ: ದೇವರಾಜ ಅರಸು ಮೆಡಿಕಲ್ ಕಾಲೇಜಿಗೆ ಕೊರೊನಾ ಮಾರಿ ಮತ್ತೆ ವಕ್ಕರಿಸಿದ್ದು, ಕೇರಳಾದಿಂದ ಬಂದಿದ್ದ 27 ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಪಶ್ಚಿಮ ಬಂಗಾಳದ 1 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ರಾಜ್ಯದಲ್ಲಿ ರೂಪಾಂತರಿ ಕೊರೊನಾದ ಹಾವಳಿ ಹೆಚ್ಚುತ್ತಿರುವ ಸಂದರ್ಭದಲ್ಲೇ, ರಾಜ್ಯ ಸರ್ಕಾರ ಶಾಲಾ ಕಾಲೇಜುಗಳನ್ನು ತೆರೆಯಲು ನಿರ್ಧರಿಸಿದೆ. ಹೀಗಾಗಿ ಕಾಲೇಜುಗಳಿಗೆ ವಾಪಾಸ್ಸಾಗುತ್ತಿರುವ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವುದು ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ಒಟ್ಟು 400 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಇದರಲ್ಲಿ ಕೇರಳಾದಿಂದ ಬಂದಿದ್ದ 27 ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ಪಶ್ಚಿಮ ಬಂಗಾಳದ ಒಬ್ಬ ವಿದ್ಯಾರ್ಥಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಅಧಿಕಾರಿಗಳು ಸೋಂಕಿತರನ್ನು ಹಾಸ್ಟೆಲ್​ಗಳಲ್ಲಿ ‌ಕ್ವಾರಂಟೇನ್ ಮಾಡಿ ಚಿಕಿತ್ಸೆ ನೀಡುತ್ತಿದ್ದಾರೆ. ಆದರೆ ಸೋಂಕು ಪತ್ತೆಯಾಗಿರುವುದರಿಂದ ನರ್ಸಿಂಗ್ ಕಾಲೇಜು ಸಿಬ್ಬಂದಿಯಲ್ಲಿ ಆತಂಕ ಹೆಚ್ಚಾಗಿದೆ. ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳಿಂದ ಮುಂದುವರೆದಿದೆ.

ಒಂದೇ ಶಾಲೆಯ ಇಬ್ಬರು ಶಿಕ್ಷಕರಿಗೆ ಕೊರೊನಾ ಪಾಸಿಟಿವ್: ಜ.8ರವರೆಗೆ ಶಾಲೆ ಬಂದ್