ಗದಗ ರಾಜೀವ್ ಗಾಂಧಿ ಆಯುರ್ವೇದ ಕಾಲೇಜಿನಲ್ಲಿ 30 ವಿದ್ಯಾರ್ಥಿಗಳಿಗೆ ಕೊರೊನಾ! ಹರಿಯಾಣದಿಂದ ಬಳ್ಳಾರಿಗೆ ಬಂದ ನೂರಾರು ವಿದ್ಯಾರ್ಥಿಗಳು

ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿರುವ ರಾಜೀವ್ ಗಾಂಧಿ ಆಯುರ್ವೇದ ಕಾಲೇಜಿನಲ್ಲಿ (Rajiv Gandhi Ayurvedic College) ಮೂವರು ವೈದ್ಯರು ಸೇರಿ 30 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಗದಗ ರಾಜೀವ್ ಗಾಂಧಿ ಆಯುರ್ವೇದ ಕಾಲೇಜಿನಲ್ಲಿ 30 ವಿದ್ಯಾರ್ಥಿಗಳಿಗೆ ಕೊರೊನಾ! ಹರಿಯಾಣದಿಂದ ಬಳ್ಳಾರಿಗೆ ಬಂದ ನೂರಾರು ವಿದ್ಯಾರ್ಥಿಗಳು
ರಾಜೀವ್ ಗಾಂಧಿ ಆಯುರ್ವೇದ ಕಾಲೇಜು
Follow us
TV9 Web
| Updated By: sandhya thejappa

Updated on:Jan 16, 2022 | 11:45 AM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಆತಂಕವೂ ಹೆಚ್ಚಾಗುತ್ತಿದೆ. ನಿನ್ನೆ ಒಂದೇ ದಿನ ಕರ್ನಾಟಕದಲ್ಲಿ 32,793 ಕೇಸ್ ಪತ್ತೆಯಾಗಿತ್ತು. ಇದರಲ್ಲಿ ಬೆಂಗಳೂರಿನಲ್ಲಿ 22,284 ಜನರಿಗೆ ಕೊರೊನಾ ಸೋಂಕಿರುವ ದೃಢಪಟ್ಟಿದೆ. ಆದರೆ ಇಂದು ಬೆಂಗಳೂರಿನಲ್ಲಿ ಕೊವಿಡ್ ಕೇಸ್ ಇಳಿಕೆಯಾಗುವ ಸಾದ್ಯತೆಯಿದ್ದು, 21,092 ಕೇಸ್ ಪತ್ತೆಯಾಗಬಹುದೆಂದು ಅಂದಾಜಿಲಾಗಿದೆ.

ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿರುವ ರಾಜೀವ್ ಗಾಂಧಿ ಆಯುರ್ವೇದ ಕಾಲೇಜಿನಲ್ಲಿ (Rajiv Gandhi Ayurvedic College) ಮೂವರು ವೈದ್ಯರು ಸೇರಿ 30 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಮಾಜಿ ಶಾಸಕ ಜಿಎಸ್ ಪಾಟೀಲ್ ಒಡೆತನದ ಕಾಲೇಜು ಇದಾಗಿದ್ದು, ಸೋಂಕಿತ ವಿದ್ಯಾರ್ಥಿಗಳಿಗೆ ಮೆಡಿಕಲ್ ಕಾಲೇಜಿನಲ್ಲೇ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ, ದ್ವಿತೀಯ ಸೋಂಕಿತರು ಹಾಸ್ಟೆಲ್​ನಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಜನವರಿ 23 ವರೆಗೆ ಕಾಲೇಜತ್ತ ಸುಳಿಯದಂತೆ ವಿದ್ಯಾರ್ಥಿಗಳಿಗೆ ನಿರ್ಬಂಧ ಹೇರಲಾಗಿದೆ.

ಹೊರ ರಾಜ್ಯದಿಂದ ಬಳ್ಳಾರಿಗೆ ಬಂದ ನೂರಾರು ವಿದ್ಯಾರ್ಥಿಗಳು                                                                                              ಹರಿಯಾಣದಿಂದ ಬಳ್ಳಾರಿಗೆ ನೂರಾರು ವಿದ್ಯಾರ್ಥಿಗಳ ಆಗಮಿಸಿದ್ದಾರೆ. ಕೊವಿಡ್ ನೆಗೆಟಿವ್ ರಿಪೋರ್ಟ್ ಇಲ್ಲದೆ ಬಳ್ಳಾರಿಗೆ ಆಗಮಿಸಿದ್ದು, ಜಿಲ್ಲಾಡಳಿತ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಕೇವಲ 2 ಡೋಸ್ ಲಸಿಕೆ ಪಡೆದ ಸರ್ಟಿಫಿಕೆಟ್ ಮಾತ್ರ ವಿದ್ಯಾರ್ಥಿಗಳ ಬಳಿ ಇದೆ. ಆದರೆ ಕೊವಿಡ್ ನೆಗೆಟಿವ್ ರಿಪೋರ್ಟ್ ಇಲ್ಲ. ನರ್ಸಿಂಗ್ ಎಕ್ಸಾಂ ಇದೆ ಅಂತ ವಿದ್ಯಾರ್ಥಿಗಳು ಬಂದಿದ್ದಾರೆ. ಸದ್ಯ ವಿದ್ಯಾರ್ಥಿಗಳು ಲಾಡ್ಜ್ಗಳಲ್ಲಿ ತಂಗಿದ್ದಾರೆ.

ಪೊಲೀಸರಿಗೆ ಕೊವಿಡ್                                                                                                                                                                                ಚಿಕ್ಕಮಗಳೂರಿನಲ್ಲಿ 27 ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ಮೂವರು ಅಧಿಕಾರಿಗಳು ಹಾಗೂ 24 ಸಿಬ್ಬಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರಲ್ಲಿ ಕೊರೊನಾ ಲಕ್ಷಣಗಳು ಇರಲಿಲ್ಲ. ಸೋಂಕು ದೃಢಪಟ್ಟವರು ಹೋಂ ಐಸೋಲೇಶನ್ನನ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಮಿಷನರೇಟ್​ನಲ್ಲಿ ಕೊರೊನಾ ಸ್ಫೋಟ                                                                                                                                                          ಹುಬ್ಬಳ್ಳಿ-ಧಾರವಾಡ ಕಮಿಷನರೇಟ್​ನಲ್ಲಿ ಕೊರೊನಾ ಸ್ಫೋಟಗೊಂಡಿದೆ. 9 ಇನ್ಸ್​ಪೆಕ್ಟರ್​ಗಳು, 150ಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಸೋಂಕು ತಗುಲಿದೆ. ಆದರೆ ಯಾರೊಬ್ಬರಿಗೂ ತೀವ್ರವಾದ ಸಮಸ್ಯೆಯಿಲ್ಲ. ಪೊಲೀಸರ ಆರೋಗ್ಯದ ಬಗ್ಗೆ ಪೊಲೀಸ್ ಕಮೀಷನರ್ ಲಾಬುರಾಮ್ ಪ್ರತಿದಿನ ಮಾಹಿತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ

ಪರಿಸರಕ್ಕೆ ಮಾರಕವಾಗುವ ವಸ್ತುವಿನಿಂದ ನಿರ್ಮಾಣ ಕ್ಷೇತ್ರಕ್ಕೆ ಕೊಡುಗೆ ನೀಡಿದ ಧಾರವಾಡ ಯುವಕ; ದೇಶದಲ್ಲೇ ಇದು ಮೊದಲ ಪ್ರಯತ್ನ

Indian Flag: ಜೈಸಲ್ಮೇರ್ ಗಡಿಯಲ್ಲಿ ಭಾರತದ ಅತ್ಯಂತ ದೊಡ್ಡ ಖಾದಿ ರಾಷ್ಟ್ರ ಧ್ವಜ ಪ್ರದರ್ಶನ

Published On - 11:44 am, Sun, 16 January 22

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ