ಕೊರೊನಾ ಜೆಎನ್​1 ಭೀತಿ: ಮದ್ದೂರು ತಾಲೂಕಿನ ವ್ಯಕ್ತಿಗೆ ಕೋವಿಡ್ ಪಾಸಿಟಿವ್

ಪ್ರಯಾಣದ ಇತಿಹಾಸ ಇಲ್ಲದಿದ್ದರೂ ವ್ಯಕ್ತಿಗೆ ಸೋಂಕು ತಗುಲಿದೆ. ಶಸ್ತ್ರಚಿಕಿತ್ಸೆಗಂದು ಆಸ್ಪತ್ರೆಗೆ ತೆರಳಿದ್ದಾಗ ಪರೀಕ್ಷೆ ನಡೆಸಿದ ವೇಳೆ ಕೊವಿಡ್ ಧೃಡಪಟ್ಟಿದೆ. ಸೋಂಕಿತ ವ್ಯಕ್ತಿಯಲ್ಲಿ ಯಾವ ರೋಗ ಲಕ್ಷಣಗಳು ಇರಲಿಲ್ಲ. ಇದೀಗ ವ್ಯಕ್ತಿಯ ಸಂಪರ್ಕದಲ್ಲಿದ್ದ ನಾಲ್ವರಿಗೂ ಆರ್​ಟಿಪಿಸಿಆರ್ ಟೆಸ್ಟ್ ಮಾಡಲಾಗಿದೆ.

ಕೊರೊನಾ ಜೆಎನ್​1 ಭೀತಿ: ಮದ್ದೂರು ತಾಲೂಕಿನ ವ್ಯಕ್ತಿಗೆ ಕೋವಿಡ್ ಪಾಸಿಟಿವ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ganapathi Sharma

Updated on: Dec 19, 2023 | 9:56 AM

ಮಂಡ್ಯ, ಡಿಸೆಂಬರ್ 19: ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ (Coronavirus JN1) ತಳಿಯಿಂದಾಗಿ ಸೋಂಕು ಹರಡುತ್ತಿದ್ದು, ರಾಜ್ಯದಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಇಂಥ ಸಂದರ್ಭದಲ್ಲೇ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೋವಿಡ್-19 (Covid-19) ಸೋಂಕು ದೃಢಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ.

ಪ್ರಯಾಣದ ಇತಿಹಾಸ ಇಲ್ಲದಿದ್ದರೂ ವ್ಯಕ್ತಿಗೆ ಸೋಂಕು ತಗುಲಿದೆ. ಶಸ್ತ್ರಚಿಕಿತ್ಸೆಗಂದು ಆಸ್ಪತ್ರೆಗೆ ತೆರಳಿದ್ದಾಗ ಪರೀಕ್ಷೆ ನಡೆಸಿದ ವೇಳೆ ಕೊವಿಡ್ ಧೃಡಪಟ್ಟಿದೆ. ಸೋಂಕಿತ ವ್ಯಕ್ತಿಯಲ್ಲಿ ಯಾವ ರೋಗ ಲಕ್ಷಣಗಳು ಇರಲಿಲ್ಲ. ಇದೀಗ ವ್ಯಕ್ತಿಯ ಸಂಪರ್ಕದಲ್ಲಿದ್ದ ನಾಲ್ವರಿಗೂ ಆರ್​ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಅವರಲ್ಲಿ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ. ಸೋಂಕಿತ ವ್ಯಕ್ತಿ ಚಿಕಿತ್ಸೆ ಪಡೆದಿದ್ದು, ಇಂದು (ಮಂಗಳವಾರ) ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ಚಾಮರಾಜನಗರ ಕೇರಳ ಗಡಿಯಲ್ಲಿ ಅರಣ್ಯ ಇಲಾಖೆ ಕ್ರಮ

ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರ ತಳಿಯಿಂದ ಸೋಂಕು ಹರಡುತ್ತಿದ್ದು, ಇತ್ತ ಚಾಮರಾಜನಗರ ಗಡಿಯಲ್ಲಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಇದೀಗ ಆರೋಗ್ಯ ಇಲಾಖೆ ಸಿಬ್ಬಂದಿ ಮಾಡಬೇಕಿದ್ದ ಕೆಲಸವನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಾಡುತ್ತಿದ್ದಾರೆ! ಮೂಲೆಹೊಳೆ ಚೆಕ್ ಪೋಸ್ಟ್​​ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಜಾಗೃತಿ ಕಾರ್ಯ ಆರಂಭಿಸಿದ್ದಾರೆ. ಕೇರಳದಿಂದ ಬರುವ ವಾಹನ ಸವಾರರಿಗೆ ಮಾಸ್ಕ್ ಹಾಕಲು ಸೂಚನೆ ನೀಡುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ

ದಿನ ನಿತ್ಯ ಸಾವಿರಾರು ವಾಹನ ಸವಾರರು ಮೂಲೆಹೊಳೆ ಚೆಕ್ ಪೋಸ್ಟ್ ಮೂಲಕ ರಾಜ್ಯಕ್ಕೆ ಬರುತ್ತಾರೆ. ಕಳೆದ ಎರಡು ದಿನಗಳಿಂದ ‘ಟಿವಿ9’ ನಿರಂತರ ವರದಿ ಬಿತ್ತರಿಸುತ್ತಿದೆ. ಇದರ ಪರಿಣಾಮವಾಗಿ ಆರೋಗ್ಯ ಇಲಾಖಾ ಸಿಬ್ಬಂದಿ ಕಾಟಾಚಾರಕ್ಕೆ ಚೆಕ್ ಪೋಸ್ಟ್​​ನಲ್ಲಿ ಬ್ಯಾನರ್ ಹಾಕಿ ತೆರಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ