ಮಂಡ್ಯ, ಡಿಸೆಂಬರ್ 19: ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್ನ ಜೆಎನ್1 ರೂಪಾಂತರಿ (Coronavirus JN1) ತಳಿಯಿಂದಾಗಿ ಸೋಂಕು ಹರಡುತ್ತಿದ್ದು, ರಾಜ್ಯದಲ್ಲಿಯೂ ಆತಂಕ ಸೃಷ್ಟಿಯಾಗಿದೆ. ಇಂಥ ಸಂದರ್ಭದಲ್ಲೇ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ವ್ಯಕ್ತಿಯೊಬ್ಬರಲ್ಲಿ ಕೋವಿಡ್-19 (Covid-19) ಸೋಂಕು ದೃಢಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ.
ಪ್ರಯಾಣದ ಇತಿಹಾಸ ಇಲ್ಲದಿದ್ದರೂ ವ್ಯಕ್ತಿಗೆ ಸೋಂಕು ತಗುಲಿದೆ. ಶಸ್ತ್ರಚಿಕಿತ್ಸೆಗಂದು ಆಸ್ಪತ್ರೆಗೆ ತೆರಳಿದ್ದಾಗ ಪರೀಕ್ಷೆ ನಡೆಸಿದ ವೇಳೆ ಕೊವಿಡ್ ಧೃಡಪಟ್ಟಿದೆ. ಸೋಂಕಿತ ವ್ಯಕ್ತಿಯಲ್ಲಿ ಯಾವ ರೋಗ ಲಕ್ಷಣಗಳು ಇರಲಿಲ್ಲ. ಇದೀಗ ವ್ಯಕ್ತಿಯ ಸಂಪರ್ಕದಲ್ಲಿದ್ದ ನಾಲ್ವರಿಗೂ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗಿದ್ದು, ಅವರಲ್ಲಿ ಯಾರಲ್ಲೂ ಸೋಂಕು ಪತ್ತೆಯಾಗಿಲ್ಲ. ಸೋಂಕಿತ ವ್ಯಕ್ತಿ ಚಿಕಿತ್ಸೆ ಪಡೆದಿದ್ದು, ಇಂದು (ಮಂಗಳವಾರ) ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.
ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರ ತಳಿಯಿಂದ ಸೋಂಕು ಹರಡುತ್ತಿದ್ದು, ಇತ್ತ ಚಾಮರಾಜನಗರ ಗಡಿಯಲ್ಲಿ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಇದೀಗ ಆರೋಗ್ಯ ಇಲಾಖೆ ಸಿಬ್ಬಂದಿ ಮಾಡಬೇಕಿದ್ದ ಕೆಲಸವನ್ನು ಅರಣ್ಯ ಇಲಾಖೆ ಸಿಬ್ಬಂದಿ ಮಾಡುತ್ತಿದ್ದಾರೆ! ಮೂಲೆಹೊಳೆ ಚೆಕ್ ಪೋಸ್ಟ್ನಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಜಾಗೃತಿ ಕಾರ್ಯ ಆರಂಭಿಸಿದ್ದಾರೆ. ಕೇರಳದಿಂದ ಬರುವ ವಾಹನ ಸವಾರರಿಗೆ ಮಾಸ್ಕ್ ಹಾಕಲು ಸೂಚನೆ ನೀಡುತ್ತಿದ್ದಾರೆ.
ಇದನ್ನೂ ಓದಿ: ಕೊರೊನಾ ಪರೀಕ್ಷೆ ಹೆಚ್ಚಿಸುತ್ತೇವೆ, ನಿರ್ಬಂಧ ಸದ್ಯಕ್ಕಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟನೆ
ದಿನ ನಿತ್ಯ ಸಾವಿರಾರು ವಾಹನ ಸವಾರರು ಮೂಲೆಹೊಳೆ ಚೆಕ್ ಪೋಸ್ಟ್ ಮೂಲಕ ರಾಜ್ಯಕ್ಕೆ ಬರುತ್ತಾರೆ. ಕಳೆದ ಎರಡು ದಿನಗಳಿಂದ ‘ಟಿವಿ9’ ನಿರಂತರ ವರದಿ ಬಿತ್ತರಿಸುತ್ತಿದೆ. ಇದರ ಪರಿಣಾಮವಾಗಿ ಆರೋಗ್ಯ ಇಲಾಖಾ ಸಿಬ್ಬಂದಿ ಕಾಟಾಚಾರಕ್ಕೆ ಚೆಕ್ ಪೋಸ್ಟ್ನಲ್ಲಿ ಬ್ಯಾನರ್ ಹಾಕಿ ತೆರಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ