Covid-19 Karnataka Update: ಕರ್ನಾಟಕದಲ್ಲಿ ಇಂದು 40,990 ಮಂದಿಗೆ ಕೊರೊನಾ ಸೋಂಕು, 271 ಸಾವು
ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 19,353 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 162 ಜನರು ಸಾವನ್ನಪ್ಪಿದ್ದಾರೆ. ಸತತವಾಗಿ 30 ಸಾವಿರದ ಆಸುಪಾಸಿನಲ್ಲಿ ಬರುತ್ತಿದ್ದ ರಾಜ್ಯದ ಸೋಂಕಿತರ ಸಂಖ್ಯೆ ನಿನ್ನೆಯಿಂದ 40 ಸಾವಿರದ ಗಡಿ ದಾಟುತ್ತಿದೆ.
ಬೆಂಗಳೂರು: ಕರ್ನಾಟಕದಲ್ಲಿ ಶನಿವಾರ (ಮೇ 1) ಒಟ್ಟು 40,990 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 271 ಜನರು ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 19,353 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 162 ಜನರು ಸಾವನ್ನಪ್ಪಿದ್ದಾರೆ. ಸತತವಾಗಿ 30 ಸಾವಿರದ ಆಸುಪಾಸಿನಲ್ಲಿ ಬರುತ್ತಿದ್ದ ರಾಜ್ಯದ ಸೋಂಕಿತರ ಸಂಖ್ಯೆ ನಿನ್ನೆಯಿಂದ 40 ಸಾವಿರದ ಗಡಿ ದಾಟುತ್ತಿದೆ. ನಿನ್ನೆ (ಏಪ್ರಿಲ್ 30) ರಾಜ್ಯದಲ್ಲಿ 48,296 ಮಂದಿಯಲ್ಲಿ ಸೋಂಕು ದೃಢಪಟ್ಟು, 217 ಮಂದಿ ಸಾವನ್ನಪ್ಪಿದ್ದರು. ಮೊನ್ನೆ (ಏಪ್ರಿಲ್ 29) 35,024 ಮಂದಿಯಲ್ಲಿ ಸೋಂಕು ದೃಢಪಟ್ಟು, 270 ಮಂದಿ ಸಾವನ್ನಪ್ಪಿದ್ದರು. ಕಳೆದ ಮೂರು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 200ಕ್ಕೂ ಅಧಿಕ ಪ್ರಮಾಣದಲ್ಲಿ ಇರುವುದು ಮತ್ತು ಸೋಂಕಿತರ ಸಂಖ್ಯೆ ಎರಡು ದಿನಗಳಿಂದ 40 ಸಾವಿರದ ಗಡಿ ದಾಟಿರುವುದು ಗಮನಾರ್ಹ ಸಂಗತಿ.
ರಾಜ್ಯದಲ್ಲಿ ಶನಿವಾರ ಹೊಸದಾಗಿ 40,990 ಜನರಿಗೆ ಕೊರೊನಾ ದೃಢಪಡುವುದರೊಂದಿಗೆ ರಾಜ್ಯದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 15,64,132ಕ್ಕೆ (15.64 ಲಕ್ಷ) ಏರಿಕೆಯಾಗಿದೆ. ಈ ಪೈಕಿ 11,43,250 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 271 ಜನರ ಸಾವನ್ನಪ್ಪಿದ್ದಾರೆ. ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 15,794ಕ್ಕೆ ಏರಿಕೆಯಾಗಿದೆ. 4,05,068 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಲ್ಲಿ ಇಂದು ಒಂದೇ ದಿನ 19,353 ಜನರಿಗೆ ಸೋಂಕು ದೃಢಪಟ್ಟಿದೆ. ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 7,76,093ಕ್ಕೇರಿಕೆಯಾಗಿದೆ. ಈ ಪೈಕಿ 4,98,562 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 162 ಜನರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಕೊರೊನಾದಿಂದ ಈವರೆಗೆ ಒಟ್ಟು 6,537 ಜನರು ಸಾವನ್ನಪ್ಪಿದ್ದಾರೆ. 2,70,993 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಒಟ್ಟು 271 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 162 ಜನರು ಸಾವನ್ನಪ್ಪಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ 93, ಮೊನ್ನೆ 143 ಮಂದಿ ಸಾನ್ನಪ್ಪಿದ್ದರು. ಕಳೆದ ಮೂರು ದಿನಗಳ ಅಂಕಿಅಂಶ ಗಮನಿಸಿದರೆ ಇಂದು ಅತಿಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿರುವುದನ್ನು ಗಮನಿಸಬಹುದು.
ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೊರೊನಾ ಸೋಂಕಿಗೆ 12 ಜನರು ಸಾವನ್ನಪ್ಪಿದ್ದಾರೆ. ಬಳ್ಳಾರಿ, ಹಾಸನದಲ್ಲಿ ತಲಾ 8, ಮೈಸೂರು 7, ದಾವಣಗೆರೆ, ಶಿವಮೊಗ್ಗ, ಕಲಬುರಗಿ ಜಿಲ್ಲೆಗಳಲ್ಲಿ ತಲಾ 6, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಲ್ಲಿ ತಲಾ 5, ಚಿಕ್ಕಮಗಳೂರು, ಧಾರವಾಡ, ರಾಮನಗರ, ವಿಜಯಪುರ ಜಿಲ್ಲೆಗಳಲ್ಲಿ ತಲಾ 4, ಬಾಗಲಕೋಟೆ, ಚಿತ್ರದುರ್ಗ, ಕೊಡಗು ಜಿಲ್ಲೆಗಳಲ್ಲಿ ತಲಾ ಮೂವರು, ದಕ್ಷಿಣ ಕನ್ನಡ, ಹಾವೇರಿ, ರಾಯಚೂರು ಜಿಲ್ಲೆಗಳಲ್ಲಿ ತಲಾ ಇಬ್ಬರು, ಬೀದರ್, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು 15,794ಕ್ಕೆ ಏರಿಕೆಯಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 40,990 ಜನರಿಗೆ ಕೊರೊನಾ ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ 19,353 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಮೈಸೂರು 2529, ತುಮಕೂರು 2308, ಬಳ್ಳಾರಿ 1163, ಕಲಬುರಗಿ 1407, ಕೊಪ್ಪಳ 1019, ಮಂಡ್ಯ 1235 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ನಾಲ್ಕಂಕಿ ದಾಟಿದೆ.
ಬೆಂಗಳೂರು ಗ್ರಾಮಾಂತರ 940, ದಕ್ಷಿಣ ಕನ್ನಡ 933, ಬಾಗಲಕೋಟೆ 319, ಬೆಳಗಾವಿ 532, ಬೀದರ್ 360, ಚಾಮರಾಜನಗರ 548, ಚಿಕ್ಕಬಳ್ಳಾಪುರ 820, ಚಿಕ್ಕಮಗಳೂರು 500, ಚಿತ್ರದುರ್ಗ 103, ದಾವಣಗೆರೆ 386, ಧಾರವಾಡ 540, ಗದಗ 205, ಹಾಸನ 790, ಹಾವೇರಿ 168, ಕೊಡಗು 590, ಕೋಲಾರ 440, ರಾಯಚೂರು 601, ರಾಮನಗರ 577, ಶಿವಮೊಗ್ಗ 661, ಉಡುಪಿ 670, ಉತ್ತರ ಕನ್ನಡ 687, ವಿಜಯಪುರ 340, ಯಾದಗಿರಿ 266.
ಇಂದಿನ 01/05/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿhttps://t.co/mEray0CDLd @CMofKarnataka @BSYBJP @mla_sudhakar @drashwathcn @RAshokaBJP @BSBommai @CPBlr @PIBBengaluru @KarnatakaVarthe @PIBBengaluru @BBMPCOMM @BlrCityPolice @blrcitytraffic pic.twitter.com/rYFVs4RNw6
— K’taka Health Dept (@DHFWKA) May 1, 2021
ಇದನ್ನೂ ಓದಿ: Covid India Update: ದೇಶದಲ್ಲಿ ಕೊವಿಡ್ ಎರಡನೇಯ ಅಲೆ ಹೆಚ್ಚಳ; ಸೋಂಕಿತರ ಸಂಖ್ಯೆ ದ್ವಿಗುಣ
ಇದನ್ನೂ ಓದಿ: Explainer: ಕೊರೊನಾ ಲಸಿಕೆ ಹಾಕಿಸಿಕೊಂಡವರಲ್ಲಿ ಕೋವಿಡ್-19 ಸೋಂಕಿನ ಲಕ್ಷಣಗಳು ಏಕೆ ಗೋಚರಿಸುತ್ತಿವೆ?
Published On - 7:53 pm, Sat, 1 May 21