Karnataka - Bengaluru Covid 19 Cases LIVE Updates: ಸದ್ಯ ಕೊರೊನಾ ಸೋಂಕು ಗಣನೀಯ ಪ್ರಮಾಣದಲ್ಲಿ ಏರುತ್ತಿರುವ ರಾಜ್ಯಗಳಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಈಗಾಗಲೇ ಲಾಕ್‌ಡೌನ್ ವಿಧಿಸುವ ಸಂಭಾವ್ಯತೆಗಳ ಕುರಿತು ಅಧಿಕೃತ ಸುಳಿವು ನೀಡಿದ್ದಾರೆ.
ಕೊವಿಡ್ ಪ್ರಕರಣಗಳು ದೇಶದಲ್ಲಿ ಹೆಚ್ಚುತ್ತಿವೆ
Follow us on
ಕರ್ನಾಟಕ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್‌ಡೌನ್ ಜಾರಿಗೊಳಿಸುವುದಿಲ್ಲ. ಆದರೆ ಇಂದಿನಿಂದ 15 ದಿನ ಸತ್ಯಾಗ್ರಹ, ಚಳವಳಿಗಳನ್ನು ನಡೆಸುವಂತಿಲ್ಲ. ಕೊವಿಡ್ ನಿಯಂತ್ರಿಸಲು ಸಾರ್ವಜನಿಕರು ಜಾಗೃತರಾಗಿರಬೇಕು. ಎಲ್ಲರೂ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ನಾಳೆಯಿಂದ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.