AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 19 Karnataka Update: ಒಂದೇ ಶಾಲೆಯ 63 ವಿದ್ಯಾರ್ಥಿಗಳು ಸೇರಿ ಕರ್ನಾಟಕದ 456 ಮಂದಿಗೆ ಕೊರೊನಾ ಸೋಂಕು

ರಾಜ್ಯದಲ್ಲಿ ಪ್ರಸ್ತುತ 7132 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.41, ಸೋಂಕಿನಿಂದ ಸಾವನ್ನಪ್ಪುವವರ ಸರಾಸರಿ ಶೇ 1.31 ಇದೆ

Covid 19 Karnataka Update: ಒಂದೇ ಶಾಲೆಯ 63 ವಿದ್ಯಾರ್ಥಿಗಳು ಸೇರಿ ಕರ್ನಾಟಕದ 456 ಮಂದಿಗೆ ಕೊರೊನಾ ಸೋಂಕು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 05, 2021 | 11:08 PM

Share

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ನವೋದಯ ಶಾಲೆಯ 63 ವಿದ್ಯಾರ್ಥಿಗಳು ಸೇರಿದಂತೆ ಕರ್ನಾಟಕದ 456 ಮಂದಿಯಲ್ಲಿ ಭಾನುವಾರ (ನ.5) ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಆರು ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 7132 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ ಶೇ 0.41, ಸೋಂಕಿನಿಂದ ಸಾವನ್ನಪ್ಪುವವರ ಸರಾಸರಿ ಶೇ 1.31 ಇದೆ. ಒಟ್ಟು 330 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ 29,98,099 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,52,708 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ 38,230 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ನವೋದಯ ಶಾಲೆಯ 70 ಮಂದಿಗೆ ಸೋಂಕು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಸೀಗೋಡು ಗ್ರಾಮದಲ್ಲಿರುವ ನವೋದಯ ವಿದ್ಯಾಲಯದಲ್ಲಿ ಒಟ್ಟು 70 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಪೈಕಿ 63 ಮಂದಿ ವಿದ್ಯಾರ್ಥಿಗಳಾಗಿದ್ದರೆ, ನಾಲ್ವರು ಸಿಬ್ಬಂದಿ ಹಾಗೂ ಮೂವರು ಶಿಕ್ಷಕರು. ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸಿಗೋಡು ನವೋದಯ ವಸತಿ ಶಾಲೆಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಿ.ಎನ್.ಜೀವರಾಜ್​ ಭೇಟಿ ನೀಡಿ ಪರಿಶೀಲಿಸಿದರು. ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದ ಅವರು, ಸೂಕ್ತ ಚಿಕಿತ್ಸೆ ನೀಡಿ ಅಗತ್ಯ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಆತಂಕಕ್ಕೊಳಗಾಗಬೇಡಿ ಎಂದು ಧೈರ್ಯತುಂಬಿದರು.

ಆನೇಕಲ್ ತಾಲ್ಲೂಕಿನಲ್ಲಿ 29 ಮಂದಿಗೆ ಸೋಂಕು ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನಲ್ಲಿ ಒಂದೇ ದಿನ 29 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ 7 ಮಂದಿ ಸ್ಫೂರ್ತಿ ಕಾಲೇಜಿನ ವಿದ್ಯಾರ್ಥಿಗಳು. ದಿ ಇಂಟರ್​​ನ್ಯಾಷನಲ್​​ ಸ್ಕೂಲ್‌ನಲ್ಲಿ ಮತ್ತೆ 5 ಪ್ರಕರಣಗಳು ದೃಢಪಟ್ಟಿವೆ. ಬೊಮ್ಮಸಂದ್ರದ ಕೈಗಾರಿಕಾ ಪ್ರದೇಶದ ಆಡ್​ಕಾಕ್​ ಕಂಪನಿಯ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಆಡ್​ಕಾಕ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಡಿ 20ರಂದು ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ್ದರು. ಆನೇಕಲ್ ಸುತ್ತಮುತ್ತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.

ಬೆಂಗಳೂರು ನಗರದಲ್ಲಿ 256 ಮಂದಿಗೆ ಸೋಂಕು ಬೆಂಗಳೂರು ನಗರದಲ್ಲಿ ಬೆಂಗಳೂರಲ್ಲಿ ಭಾನುವಾರ 256 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಪ್ರಸ್ತುತ 5136 ಸಕ್ರಿಯ ಪ್ರಕರಣಗಳಿದ್ದು, ಇಂದು 214 ಜನರು ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಈವರೆಗೆ 12,57,498 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 12,36,016 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 16,345 ಜನರು ಸಾವನ್ನಪ್ಪಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ 256, ಚಿಕ್ಕಮಗಳೂರು 66, ಧಾರವಾಡ 20, ಕೊಡಗು 17, ಮೈಸೂರು 10, ಬಳ್ಳಾರಿ 5, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 2, ಬೀದರ್, ಚಿತ್ರದುರ್ಗ 1, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕಲಬುರಗಿ, ಕೋಲಾರ 2, ದಕ್ಷಿಣ ಕನ್ನಡ 13, ಹಾಸನ 12, ಮಂಡ್ಯ 3, ಶಿವಮೊಗ್ಗ 7, ತುಮಕೂರು 8, ಉಡುಪಿ 5, ಉತ್ತರ ಕನ್ನಡ 14.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಬೆಂಗಳೂರು ನಗರ 2, ಬೆಂಗಳೂರು ಗ್ರಾಮಾಂತರ, ಮೈಸೂರು, ತುಮಕೂರು, ಉಡುಪಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಆನೇಕಲ್: ತಾಲೂಕಿನಲ್ಲಿ ಕೊರೊನಾ ಸ್ಫೋಟ; ಅದಾಗ್ಯೂ ಸಮಾವೇಶದಲ್ಲಿ ಕೊವಿಡ್ ನಿಯಮಾವಳಿ ಮರೆತ ಬಿಜೆಪಿ ನಾಯಕರು! ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಶೇ.100ರ ಸಾಧನೆ ಮಾಡಿದ ಹಿಮಾಚಲ ಪ್ರದೇಶ; ಎರಡೂ ಡೋಸ್​ ಪೂರ್ಣ, ಡಿ.5ಕ್ಕೆ ಸನ್ಮಾನ ಕಾರ್ಯಕ್ರಮ

Published On - 8:05 pm, Sun, 5 December 21

ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಗ್ರಾಹಕರಿಗೆ ಶಾಕ್​​ ಕೊಟ್ಟ ಡೆಲವರಿ ಬಾಯ್ಸ್​​​
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
ಬಿಗ್​​ಬಾಸ್ ಮನೆಯಲ್ಲಿ ಸ್ಪಂದನಾ-ರಾಶಿಕಾ ಕುಸ್ತಿ: ವಿಡಿಯೋ
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು
ಹೊಸ ವರ್ಷಾಚರಣೆಗೆ ಬ್ರಿಗೇಡ್, ಎಂಜಿ ರೋಡ್ ಸಜ್ಜು: ಜಮಾಯಿಸುತ್ತಿರುವ ಜನರು