Covid 19 Karnataka Update: ಕರ್ನಾಟಕದ 1365 ಮಂದಿಗೆ ಕೊವಿಡ್ ಸೋಂಕು, 1558 ಮಂದಿ ಗುಣಮುಖ
ಬೆಂಗಳೂರು ನಗರದಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಬುಧವಾರ ನಗರದಲ್ಲಿ ಒಟ್ಟು 327 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾನ್ನಪ್ಪಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ ಒಟ್ಟು 1365 ಮಂದಿಯಲ್ಲಿ ಸೋಂಕು ಹೊಸದಾಗಿ ದೃಢಪಟ್ಟಿದೆ. 22 ಮಂದಿ ಸಾವನ್ನಪ್ಪಿದ್ದಾರೆ. 1558 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದ ಪಾಸಿಟಿವಿಟಿ ಪ್ರಮಾಣ ಶೇ 0.76 ಇದೆ. ಸೋಂಕಿನಿಂದ ಸಾಯುವವರ ಪ್ರಮಾಣ ಶೇ 1.61 ಇದೆ. ಈವರೆಗೆ ರಾಜ್ಯದ ಒಟ್ಟು 29,33,192 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 28,74,839 ಮಂದಿ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಒಟ್ಟು 21,266 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 37,061 ಮಂದಿ ಸಾವನ್ನಪ್ಪಿದ್ದಾರೆ.
ಬೆಂಗಳೂರು ನಗರದಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಬುಧವಾರ ನಗರದಲ್ಲಿ ಒಟ್ಟು 327 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಇಬ್ಬರು ಸಾನ್ನಪ್ಪಿದ್ದಾರೆ. 318 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಈವರೆಗೆ ಒಟ್ಟು 12,33,839 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 12,09,965 ಮಂದಿ ಚೇತರಿಸಿಕೊಂಡಿದ್ದಾರೆ. ಪ್ರಸ್ತುತ ನಗರದಲ್ಲಿ 7920 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದೆ. ನಗರದಲ್ಲಿ ಈವರೆಗೆ ಒಟ್ಟು 15,953 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ನಗರದಲ್ಲಿ ಕೊವಿಡ್ ಸೋಂಕು ಮತ್ತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ಕಠಿಣ ಕ್ರಮಗಳನ್ನು ಬಿಬಿಎಂಪಿ ಜಾರಿ ಮಾಡಿದೆ. ಮಾರುಕಟ್ಟೆಗಳಲ್ಲಿ ಕಟ್ಟುನಿಟ್ಟಾಗಿ ಕೊವಿಡ್ ನಿಯಮಗಳನ್ನು ಪಾಲಿಸಬೇಕು. ನಿಯೋಜಿತ ಸಿಬ್ಬಂದಿ ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೂಚಿಸಿದ್ದಾರೆ. ಸಾಲುಸಾಲು ಹಬ್ಬಗಳಿರುವ ಹಿನ್ನೆಲೆ ಕೊವಿಡ್ ನಿಯಮಗಳನ್ನು ಪೂರ್ಣಪ್ರಮಾಣದಲ್ಲಿ ಪಾಲಿಸಬೇಕು. ದೈಹಿಕ ಅಂತರ, ಮಾಸ್ಕ್ ಧರಿಸುವ ಬಗ್ಗೆ ಗಮನ ಕೊಡಬೇಕು. ಕೊವಿಡ್ ನಿಯಮಗಳನ್ನು ಉಲ್ಲಂಘಿಸಿದರೆ ₹ 250 ದಂಡ ವಿಧಿಸಲಾಗುವುದು ಎಂದು ಅವರು ಎಚ್ಚರಿಸಿದರು. ಹೋಟೆಲ್, ರೆಸ್ಟೊರೆಂಟ್ ಸಿಬ್ಬಂದಿಗೆ ಕೊವಿಡ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ. ಈ ಸಿಬ್ಬಂದಿ ಒಂದು ಡೋಸ್ ಕೊವಿಡ್ ಲಸಿಕೆಯನ್ನು ಕಡ್ಡಾಯವಾಗಿ ಪಡೆದಿರಬೇಕು ಎಂದು ಹೇಳಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಬೆಂಗಳೂರು ನಗರ ಹೊರತುಪಡಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯ ಅತಿಹೆಚ್ಚು ಮಂದಿಯಲ್ಲಿ (268) ಸೋಂಕು ವರದಿಯಾಗಿದೆ. ಉಳಿದಂತೆ ಬೆಂಗಳೂರು ನಗರ 327, ಮೈಸೂರು 123, ಹಾಸನ 107, ಉಡುಪಿ 97, ಕೊಡಗು 86, ತುಮಕೂರು 52, ಉತ್ತರ ಕನ್ನಡ 51, ಚಿಕ್ಕಮಗಳೂರು 47, ಶಿವಮೊಗ್ಗ 45, ಬೆಳಗಾವಿ 37, ಮಂಡ್ಯ 25, ಕೋಲಾರ 21, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕಲಬುರಗಿ, ದಾವಣಗೆರೆ ತಲಾ 11, ಧಾರವಾಡ 10, ಚಾಮರಾಜನಗರ 7, ರಾಯಚೂರು 5, ಚಿಕ್ಕಬಳ್ಳಾಪುರ 4, ಬಾಗಲಕೋಟೆ, ಬಳ್ಳಾರಿ, ಬೀದರ್ 2, ಗದಗ, ಹಾವೇರಿ, ವಿಜಯಪುರ ಒಬ್ಬರಲ್ಲಿ ಸೋಂಕು ದೃಢಪಟ್ಟಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ದಕ್ಷಿಣ ಕನ್ನಡ, ಮೈಸೂರು ತಲಾ ಮೂವರು, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಉಡುಪಿ ತಲಾ ಇಬ್ಬರು, ಚಾಮರಾಜನಗರ, ದಾವಣಗೆರೆ, ಕೋಲಾರ, ಶಿವಮೊಗ್ಗ ಮತ್ತು ಉತ್ತರ ಕನ್ನಡ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
(Coronavirus Karnataka Numbers 1365 Infected 1558 Died from Covid)
ಇದನ್ನೂ ಓದಿ: ಸೆಪ್ಟೆಂಬರ್ ವೇಳೆಗೆ ಭಾರತದಲ್ಲಿ ಮಕ್ಕಳಿಗೆ ಸ್ವದೇಶಿ ಕೊವಿಡ್ ಲಸಿಕೆ ಲಭ್ಯ
ಇದನ್ನೂ ಓದಿ: ಕೊವಿಡ್ ಟೆಸ್ಟ್ ಶೇಕಡಾ 50ರಷ್ಟು ಹೆಚ್ಚಿಸುತ್ತೇವೆ; ಮಕ್ಕಳಿಗೂ ಕೊರೊನಾ ಪರೀಕ್ಷೆ: ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ
Published On - 8:08 pm, Wed, 18 August 21