Covid 19 Karnataka Update: ಕರ್ನಾಟಕದಲ್ಲಿ 1564 ಮಂದಿಗೆ ಕೊರೊನಾ ಸೋಂಕು, 59 ಜನರ ಸಾವು

ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆಯು 2,000ಕ್ಕಿಂತಲೂ ಕಡಿಮೆಯಾಗಿರುವುದು ಮತ್ತು ಮೃತರ ಸಂಖ್ಯೆ 100ಕ್ಕಿಂತಲೂ ಕಡಿಮೆಯಾಗಿವುದು ಉತ್ತಮ ಬೆಳವಣಿಗೆ ಎನಿಸಿದೆ. ಬೆಂಗಳೂರಿನಲ್ಲಿ ಒಂದೇ ದಿನ 352 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಮೂವರು ಸಾವನ್ನಪ್ಪಿದ್ದಾರೆ.

Covid 19 Karnataka Update: ಕರ್ನಾಟಕದಲ್ಲಿ 1564 ಮಂದಿಗೆ ಕೊರೊನಾ ಸೋಂಕು, 59 ಜನರ ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 04, 2021 | 8:49 PM

ಬೆಂಗಳೂರು: ಕರ್ನಾಟಕದಲ್ಲಿ ಭಾನುವಾರ 1,564 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 59 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಇಂದು ಒಂದೇ ದಿನ 352 ಜನರಿಗೆ ಸೋಂಕು ದೃಢಪಟ್ಟಿದ್ದು, 59 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆಯು 2,000ಕ್ಕಿಂತಲೂ ಕಡಿಮೆಯಾಗಿರುವುದು ಮತ್ತು ಮೃತರ ಸಂಖ್ಯೆ 100ಕ್ಕಿಂತಲೂ ಕಡಿಮೆಯಾಗಿವುದು ಉತ್ತಮ ಬೆಳವಣಿಗೆ ಎನಿಸಿದೆ. ಬೆಂಗಳೂರಿನಲ್ಲಿ ಒಂದೇ ದಿನ 352 ಜನರಿಗೆ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಮೂವರು ಸಾವನ್ನಪ್ಪಿದ್ದಾರೆ.

ರಾಜ್ಯದ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 28,53,643ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 27,73,407 ಜನರು ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ. ರಾಜ್ಯದಲ್ಲಿಂದು ಕೊರೊನಾ ಸೋಂಕಿನಿಂದ 59 ಜನರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35,367ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 44,846 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಬೆಂಗಳೂರಲ್ಲಿ ಕೊರೊನಾ ಪೀಡಿತರ ಒಟ್ಟು ಸಂಖ್ಯೆ 12,15,661ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 11,81,974 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಮೂವರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15,668 ಜನರು ಸಾವನ್ನಪ್ಪಿದ್ದಾರೆ. 18,018 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಸಾವು? ರಾಜ್ಯದಲ್ಲಿಂದು ಹೊಸದಾಗಿ 1564 ಜನರಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 352 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಮೈಸೂರು 162, ದಕ್ಷಿಣ ಕನ್ನಡ 154, ಕೊಡಗು 150, ತುಮಕೂರು 116, ಶಿವಮೊಗ್ಗ 77, ಚಿಕ್ಕಮಗಳೂರು 72, ಮಂಡ್ಯ 65, ಹಾಸನ 59, ಕೋಲಾರ 57, ಚಾಮರಾಜನಗರ 48, ಬೆಂಗಳೂರು ಗ್ರಾಮಾಂತರ 42, ದಾವಣಗೆರೆ 37, ಬೆಳಗಾವಿ 28, ಉಡುಪಿ 28, ಉತ್ತರ ಕನ್ನಡ 24, ಬಳ್ಳಾರಿ 17, ರಾಮನಗರ 14, ಚಿಕ್ಕಬಳ್ಳಾಪುರ 12, ಕಲಬುರಗಿ 10, ಧಾರವಾಡ 8, ಕೊಪ್ಪಳ 7, ಚಿತ್ರದುರ್ಗ 6, ಗದಗ ಜಿಲ್ಲೆ 5, ಹಾವೇರಿ 4, ರಾಯಚೂರು 4, ಬೀದರ್, ವಿಜಯಪುರ ಜಿಲ್ಲೆಯಲ್ಲಿ ತಲಾ 3 ಪ್ರಕರಣ ಪತ್ತೆಯಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ ಒಟ್ಟು 59 ಜನರು ಸಾವನ್ನಪ್ಪಿದ್ದಾರೆ. ಮೈಸೂರು 9, ದಕ್ಷಿಣ ಕನ್ನಡ 8, ಬಳ್ಳಾರಿ 7, ಧಾರವಾಡ 5, ದಾವಣಗೆರೆ 4, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ತಲಾ ಮೂವರು, ಮಂಡ್ಯ, ಉಡುಪಿ, ಬೆಳಗಾವಿ, ಚಾಮರಾಜನಗರ, ಗದಗ, ಹಾಸನ, ಹಾವೇರಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35,367ಕ್ಕೆ ಏರಿಕೆಯಾಗಿದೆ.

(Coronavirus Karnataka Numbers 1564 Infected 59 Deaths due to Covid on July 4)

ಇದನ್ನೂ ಓದಿ: Pregnancy Care: ಕೊವಿಡ್​ ಸಮಯದಲ್ಲಿ ಗರ್ಭಿಣಿಯರಿಗಾಗಿ ಆರೋಗ್ಯ ಸಲಹೆಗಳು; ಆರೋಗ್ಯವನ್ನು ಕಾಳಜಿಯಿಂದ ನೋಡಿಕೊಳ್ಳಿ

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆಯದವರ ದೇಹದಲ್ಲೇ ವೈರಾಣು ರೂಪಾಂತರ ಸಾಧ್ಯತೆ: ತಜ್ಞರ ಎಚ್ಚರಿಕೆ