Covid 19 Karnataka Update: ಕರ್ನಾಟಕದಲ್ಲಿ 1913 ಜನರಿಗೆ ಕೊರೊನಾ ಸೋಂಕು, 48 ಸಾವು

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,74,597ಕ್ಕೆ ಏರಿಕೆಯಾಗಿದೆ. ಈ ಪೈಕಿ 28,04,396 ಮಂದಿ ಗುಣಮುಖರಾಗಿ ಡಿಸ್​ಚಾರ್ಜ್​ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35,944ಕ್ಕೆ ಏರಿಕೆಯಾಗಿದೆ. 34,234 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

Covid 19 Karnataka Update: ಕರ್ನಾಟಕದಲ್ಲಿ 1913 ಜನರಿಗೆ ಕೊರೊನಾ ಸೋಂಕು, 48 ಸಾವು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 13, 2021 | 8:30 PM

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ (ಜುಲೈ 13) 1,913 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 48 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿಂದು ಒಂದೇ ದಿನ 401 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 8 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,74,597ಕ್ಕೆ ಏರಿಕೆಯಾಗಿದೆ. ಈ ಪೈಕಿ 28,04,396 ಮಂದಿ ಗುಣಮುಖರಾಗಿ ಡಿಸ್​ಚಾರ್ಜ್​ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ ಮೃತಪಟ್ಟವರ ಒಟ್ಟು ಸಂಖ್ಯೆ 35,944ಕ್ಕೆ ಏರಿಕೆಯಾಗಿದೆ. 34,234 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

ಬೆಂಗಳೂರಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆಯು 12,20,098ಕ್ಕೆ ಏರಿಕೆಯಾಗಿದೆ. ಈ ಪೈಕಿ 11,91,673 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾದಿಂದ ಈವರೆಗೆ 15,753 ಜನರು ಸಾವನ್ನಪ್ಪಿದ್ದಾರೆ. 12,671 ಜನರಲ್ಲಿ ಸೋಂಕು ಸಕ್ರಿಯವಾಗಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ರಾಜ್ಯದಲ್ಲಿಂದು ಹೊಸದಾಗಿ 1913 ಜನರಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರು ನಗರದಲ್ಲಿ ಅತಿಹೆಚ್ಚು, ಅಂದರೆ 401 ಜನರಲ್ಲಿ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ 222, ಮೈಸೂರು 198, ಹಾಸನ 191, ತುಮಕೂರು 170, ಉಡುಪಿ 95, ಚಿಕ್ಕಮಗಳೂರು 89, ಕೋಲಾರ 74, ಮಂಡ್ಯ 68, ಶಿವಮೊಗ್ಗ 55, ಕೊಡಗು 46, ಬೆಳಗಾವಿ 44, ಉತ್ತರ ಕನ್ನಡ 42, ದಾವಣಗೆರೆ 36, ಚಿತ್ರದುರ್ಗ 30, ಚಾಮರಾಜನಗರ 29, ಬೆಂಗಳೂರು ಗ್ರಾಮಾಂತರ 24, ರಾಮನಗರ 18, ಬಳ್ಳಾರಿ 17, ಗದಗ 16, ಚಿಕ್ಕಬಳ್ಳಾಪುರ 15, ಧಾರವಾಡ 9, ಹಾವೇರಿ 8, ಬಾಗಲಕೋಟೆ 4, ಕೊಪ್ಪಳ 3, ರಾಯಚೂರು 3, ಬೀದರ್ 2, ಕಲಬುರಗಿ 2, ವಿಜಯಪುರ 2 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಕರ್ನಾಟಕದಲ್ಲಿ ಕೊರೊನಾ ಸೋಂಕಿನಿಂದ ಒಟ್ಟು 48 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 9 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರ 8, ಕೋಲಾರ 7, ಮೈಸೂರು, ಶಿವಮೊಗ್ಗದಲ್ಲಿ ತಲಾ ಮೂವರು, ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ ಜಿಲ್ಲೆಯಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ. ಬಾಗಲಕೋಟೆ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಮಂಡ್ಯ, ತುಮಕೂರು, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 35,944 ಜನರು ಮೃತಪಟ್ಟಿದ್ದಾರೆ.

(Coronavirus Karnataka Numbers 1913 infected 48 died of covid on july 13)

ಇದನ್ನೂ ಓದಿ: Fact Check: ಈ ಫೋಟೋ ಹಿಮಾಚಲ ಪ್ರದೇಶದ ಮನಾಲಿಯದ್ದೇ ಆದರೂ..ಕೊವಿಡ್​ 19 2ನೇ ಅಲೆ ಸಂದರ್ಭದಲ್ಲ..!

ಇದನ್ನೂ ಓದಿ: ಕೊರೊನಾ 3ನೇ ಅಲೆ ಭೀತಿ; ಭೌತಿಕವಾಗಿ ಶಾಲೆ ಆರಂಭ ತಡವಾದರೆ ವಿದ್ಯಾಗಮ-2 ಆರಂಭಕ್ಕೆ ಸಿದ್ಧತೆ

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM