Covid 19 Karnataka Update: ಕರ್ನಾಟಕದಲ್ಲಿ 3104 ಮಂದಿಗೆ ಕೊರೊನಾ ಸೋಂಕು, 92 ಸಾವು

ಬೆಂಗಳೂರು ಮಹಾನಗರದಲ್ಲಿ 715 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 15 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,59,595ಕ್ಕೆ ಏರಿಕೆಯಾಗಿದೆ.

Covid 19 Karnataka Update: ಕರ್ನಾಟಕದಲ್ಲಿ 3104 ಮಂದಿಗೆ ಕೊರೊನಾ ಸೋಂಕು, 92 ಸಾವು
ಪ್ರಾತಿನಿಧಿಕ ಚಿತ್ರ
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on: Jul 06, 2021 | 9:00 PM

ಬೆಂಗಳೂರು: ಕರ್ನಾಟಕದಲ್ಲಿ ಮಂಗಳವಾರ ಒಂದೇ ದಿನ 3104 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 92 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ಮಹಾನಗರದಲ್ಲಿ 715 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 15 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,59,595ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ 35,526 ಜನರು ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 27,84,030 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 40,016 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಳೂರಿನಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,16,896ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಸೋಂಕಿಗೆ 15 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 15,690 ಜನರು ಮೃತಪಟ್ಟಿದ್ದಾರೆ. 12,16,896 ಸೋಂಕಿತರ ಪೈಕಿ 11,86,973 ಜನರು ಗುಣಮುಖರಾಗಿದ್ದಾರೆ. 14,232 ಸೋಂಕಿತರು ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು? ಕರ್ನಾಟಕದಲ್ಲಿ ಹೊಸದಾಗಿ 3104 ಜನರಿಗೆ ಕೊರೊನಾ ದೃಢಪಟ್ಟಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಅತಿಹೆಚ್ಚು, ಅಂದರೆ 715 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಬಾಗಲಕೋಟೆ 5, ಬಳ್ಳಾರಿ 24, ಬೆಳಗಾವಿ 157, ಬೆಂಗಳೂರು ಗ್ರಾಮಾಂತರ 67, ಬೀದರ್ 6, ಚಾಮರಾಜನಗರ 68, ಚಿಕ್ಕಬಳ್ಳಾಪುರ 29, ಚಿಕ್ಕಮಗಳೂರು 109, ಚಿತ್ರದುರ್ಗ 64, ದಕ್ಷಿಣ ಕನ್ನಡ 216, ದಾವಣಗೆರೆ 60, ಧಾರವಾಡ 29, ಗದಗ 7, ಹಾಸನ 270, ಹಾವೇರಿ 14, ಕಲಬುರಗಿ 15, ಕೊಡಗು 140, ಕೋಲಾರ 108, ಕೊಪ್ಪಳ 15, ಮಂಡ್ಯ 113, ಮೈಸೂರು 389, ರಾಯಚೂರು 4, ರಾಮನಗರ 32, ಶಿವಮೊಗ್ಗ 119, ತುಮಕೂರು 138, ಉಡುಪಿ 114, ಉತ್ತರ ಕನ್ನಡ 72, ವಿಜಯಪುರ 2, ಯಾದಗಿರಿ 3 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿ ಸಾವು? ಕರ್ನಾಟಕದಲ್ಲಿ ಕೊರೊನಾ ಸೋಂಕಿನಿಂದ 92 ಜನರ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 15 ಜನರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ 13, ಮೈಸೂರು 8, ಧಾರವಾಡ, ಕೋಲಾರದಲ್ಲಿ ತಲಾ 7, ಬಳ್ಳಾರಿ 6, ಬೆಳಗಾವಿ 5, ಚಾಮರಾಜನಗರ, ಹಾಸನ, ಚಿಕ್ಕಬಳ್ಳಾಪುರ, ದಾವಣಗೆರೆ, ಮಂಡ್ಯ, ತುಮಕೂರು ಜಿಲ್ಲೆಯಲ್ಲಿ ತಲಾ 3, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾವೇರಿ ಜಿಲ್ಲೆಯಲ್ಲಿ ತಲಾ ಇಬ್ಬರು, ಬೀದರ್, ರಾಮನಗರ, ಚಿತ್ರದುರ್ಗ, ಉಡುಪಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 35,526 ಜನರು ಮೃತಪಟ್ಟಿದ್ದಾರೆ.

(Coronavirus Karnataka Numbers 3104 Infected 92 Deaths Due to Covid)

ಇದನ್ನೂ ಓದಿ: Covid 19 Vaccination: ‘ದೇಶದಲ್ಲಿ ಮೂರನೇ ಅಲೆ ತಡೆಗಟ್ಟಬೇಕೆಂದರೆ ಒಂದು ದಿನದಲ್ಲಿ 86 ಲಕ್ಷ ಮಂದಿಗೆ ಕೊರೊನಾ ಲಸಿಕೆ ನೀಡಲೇಬೇಕು..’

ಇದನ್ನೂ ಓದಿ: ಕೊವಿಡ್ ಲೆಕ್ಕಿಸದೆ ಪ್ರಯಾಣಿಸುತ್ತಿದ್ದಾರೆ ಜನ; ಎರಡನೇ ಅಲೆ ಇನ್ನೂ ಮುಗಿದಿಲ್ಲ ಎಂಬ ಎಚ್ಚರವಿರಲಿ: ಆರೋಗ್ಯ ಸಚಿವಾಲಯ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ